ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ: ಗಣರಾಜ್ಯೋತ್ಸವದ ಬೀಟಿಂಗ್ ರೀಟ್ರೀಟ್ ಕಾರ್ಯಕ್ರಮದ ಸಮೀಪವೇ ನಡೆದ ಬ್ಲಾಸ್ಟ್
ಸ್ಫೋಟ ಸಂಭವಿಸಿದ ಕೆಲವೇ ಕಿ.ಮೀ ದೂರದಲ್ಲಿ ಬೀಟಿಂಗ್ ರೀಟ್ರೀಟ್ ಕಾರ್ಯಕ್ರಮ ನಡೆಯುತ್ತಿತ್ತು. ಗಣರಾಜ್ಯೋತ್ಸವದ ಸಮಾರೋಪ ಸಮಾರಂಭ ಭಾಗವಾಗಿ ನಡೆಯುತ್ತಿದ್ದ ಕಾರ್ಯಕ್ರಮದ ಕೇವಲ 1.7 ಕಿ.ಮೀ ದೂರದಲ್ಲೇ ಕೃತ್ಯ ನಡೆದಿದೆ. ದೆಹಲಿಯ ವಿಜಯ್ ಚೌಕ್ನಲ್ಲಿ ಬೀಟಿಂಗ್ ರೀಟ್ರೀಟ್ ಕಾರ್ಯಕ್ರಮ ನಡೆಯುತ್ತಿತ್ತು.
ದೆಹಲಿ: ನಗರದ ಇಸ್ರೇಲ್ ರಾಯಭಾರ ಕಚೇರಿ ಬಳಿ ಸುಧಾರಿತ ಸ್ಫೋಟಕ (IED) ಬ್ಲಾಸ್ಟ್ ಆಗಿರುವ ಬೆನ್ನಲ್ಲೇ ರಾಷ್ಟ್ರ ರಾಜಧಾನಿಯಲ್ಲಿ ಭದ್ರತಾ ಲೋಪ ಸಂಭವಿಸಿದೆ ಎಂಬ ಮಾತು ಕೇಳಿಬಂದಿದೆ.
ಇದಕ್ಕೆ, ಕಾರಣ ಸ್ಫೋಟ ಸಂಭವಿಸಿದ ಕೆಲವೇ ಕಿ.ಮೀ ದೂರದಲ್ಲಿ ಬೀಟಿಂಗ್ ರೀಟ್ರೀಟ್ ಕಾರ್ಯಕ್ರಮ ನಡೆಯುತ್ತಿತ್ತು. ಗಣರಾಜ್ಯೋತ್ಸವದ ಸಮಾರೋಪ ಸಮಾರಂಭ ಭಾಗವಾಗಿ ನಡೆಯುತ್ತಿದ್ದ ಕಾರ್ಯಕ್ರಮದ ಕೇವಲ 1.7 ಕಿ.ಮೀ ದೂರದಲ್ಲೇ ಕೃತ್ಯ ನಡೆದಿದೆ. ದೆಹಲಿಯ ವಿಜಯ್ ಚೌಕ್ನಲ್ಲಿ ಬೀಟಿಂಗ್ ರೀಟ್ರೀಟ್ ಕಾರ್ಯಕ್ರಮ ನಡೆಯುತ್ತಿತ್ತು.
ಜೊತೆಗೆ, ಸಮಾರಂಭದಲ್ಲಿ ರಾಷ್ಟ್ರಪತಿ ಕೋವಿಂದ್, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಸೇನೆಯ ಮೂರು ವಿಭಾಗಗಳ ಮುಖ್ಯಸ್ಥರು ಭಾಗಿಯಾಗಿದ್ದರು. ದೇಶದ ಪ್ರಮುಖ ಗಣ್ಯರಿದ್ದ ಸ್ಥಳದ ಕೆಲವೇ ಕಿ.ಮೀ ದೂರದಲ್ಲಿ ಸ್ಫೋಟ ಸಂಭವಿಸಿದ್ದರಿಂದ ಭದ್ರತಾ ಲೋಪ ಎದುರಾಗಿದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.
ಪ್ರಕರಣದ ಬಗ್ಗೆ ಮಾಹಿತಿ ಪಡೆದ ಅಮಿತ್ ಶಾ ಇನ್ನು, ಘಟನೆಯ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಕರಣದ ಬಗ್ಗೆ ಮಾಹಿತಿ ಪಡೆದಿದ್ದಾರೆ.ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದ ಅಮಿತ್ ಶಾ ಗುಪ್ತಚರ ಇಲಾಖೆಯ ಅಧಿಕಾರಿಗಳ ಜೊತೆಯೂ ಚರ್ಚೆ ನಡೆಸಿದ್ದಾರೆ. ಇದಲ್ಲದೆ, ಸ್ಫೋಟದ ಬಗ್ಗೆ NIA ಮತ್ತು ದೆಹಲಿಯ ವಿಶೇಷ ತಂಡದಿಂದ ತನಿಖೆ ನಡೆಸಲಾಗುತ್ತಿದೆ.
ಈ ನಡುವೆ, ಇಸ್ರೇಲ್ ವಿದೇಶಾಂಗ ಸಚಿವರಿಗೆ ಭಾರತೀಯ ವಿದೇಶಾಂಗ ಇಲಾಖೆಯ ಸಚಿವ ಜೈಶಂಕರ್ ಕರೆಮಾಡಿ ಮಾತನಾಡಿದ್ದಾರೆ. ರಾಯಭಾರ ಕಚೇರಿ ಸಿಬ್ಬಂದಿಗೆ ಸೂಕ್ತ ಭದ್ರತೆ ನೀಡುವ ಭರವಸೆ ಸಹ ನೀಡಿದ್ದಾರೆ. ಜೈಶಂಕರ್ ಎಲ್ಲಾ ಸಿಬ್ಬಂದಿಗೆ ಸೂಕ್ತ ಭದ್ರತೆ ಒದಗಿಸುವುದಾಗಿ ಭರವಸೆ ಕೊಟ್ಟಿದ್ದಾರೆ.
Blast at Embassy Of Israel In India ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ: 5-6 ವಾಹನಗಳು ಜಖಂ
ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ IED ಸ್ಫೋಟ: ವಾಹನದಲ್ಲಿ ಬಂದು ಬಾಂಬ್ ಎಸೆದು ಹೋಗಿರುವ ಶಂಕೆ
Published On - 8:03 pm, Fri, 29 January 21