ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದಬ್ಬಾಳಿಕೆಗೆ ದೆಹಲಿಯ ಜಾಮಾ ಮಸೀದಿಯ ಶಾಹಿ ಇಮಾಮ್ ಆಕ್ಷೇಪ
ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತಿರುವ ವರ್ತನೆಯನ್ನು ದೆಹಲಿಯ ಜಾಮಾ ಮಸೀದಿಯ ಶಾಹಿ ಇಮಾಮ್ ಸೈಯದ್ ಅಹ್ಮದ್ ಬುಖಾರಿ ಖಂಡಿಸಿದ್ದಾರೆ. 1971ರಲ್ಲಿ ಬಾಂಗ್ಲಾದೇಶವನ್ನು ರಚಿಸಿದಾಗಿನಿಂದ ಭಾರತ ಮತ್ತು ಬಾಂಗ್ಲಾದೇಶದ ನಡುವೆ ನಿಕಟ ಸಂಬಂಧವನ್ನು ಹೊಂದಿದ್ದಾರೆ. ಅವರು ಹಿಂದೂಗಳ ವಿರುದ್ಧದ ಅನ್ಯಾಯವನ್ನು ನಿಲ್ಲಿಸಲು ಬಾಂಗ್ಲಾದೇಶ ಸರ್ಕಾರವನ್ನು ಆಗ್ರಹಿಸಿದ್ದಾರೆ.
ನವದೆಹಲಿ: ಹಿಂದೂ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದಾಳಿಗಳು ಮತ್ತು ದೌರ್ಜನ್ಯದ ಬಗ್ಗೆ ಮೌನ ತಾಳಿರುವ ಬಾಂಗ್ಲಾದೇಶ ಸರ್ಕಾರವನ್ನು ದೆಹಲಿಯ ಜಾಮಾ ಮಸೀದಿಯ ಶಾಹಿ ಇಮಾಮ್ ಸೈಯದ್ ಅಹ್ಮದ್ ಬುಖಾರಿ ಟೀಕಿಸಿದ್ದಾರೆ. ನೊಬೆಲ್ ಪ್ರಶಸ್ತಿ ವಿಜೇತ ಮೊಹಮ್ಮದ್ ಯೂನಸ್ ನೇತೃತ್ವದ ಬಾಂಗ್ಲಾದೇಶ ಸರ್ಕಾರವು ಹಿಂದೂ ಅಲ್ಪಸಂಖ್ಯಾತರ ವಿರುದ್ಧ ಅನ್ಯಾಯಗಳು, ದೌರ್ಜನ್ಯದ ಕ್ರಮಗಳನ್ನು ಅನುಸರಿಸುತ್ತಿದೆ. ಇದನ್ನು ತಕ್ಷಣವೇ ನಿಲ್ಲಿಸುವಂತೆ ಸೈಯದ್ ಅಹ್ಮದ್ ಬುಖಾರಿ ಒತ್ತಾಯಿಸಿದ್ದಾರೆ.
“ಶೇಖ್ ಹಸೀನಾ ಬಾಂಗ್ಲಾದೇಶವನ್ನು ಭಾರತಕ್ಕೆ ಬಂದ ನಂತರ ಅವರ ವಿರುದ್ಧದ ಆಕ್ರೋಶ ಜಾಸ್ತಿಯಾಯಿತು. ಅದು ಬಾಂಗ್ಲಾದೇಶದ ಆಂತರಿಕ ವಿಷಯವಾಗಿದೆ. ಆದರೆ, ಹಿಂದೂ ಅಲ್ಪಸಂಖ್ಯಾತರ ವಿರುದ್ಧ ನಡೆಯುತ್ತಿರುವ ಅನ್ಯಾಯಗಳು, ಹಲ್ಲೆಗಳು ಮತ್ತು ಏಕಪಕ್ಷೀಯ ಕ್ರಮಗಳು ಖಂಡನೀಯ. ಇದು ತಕ್ಷಣವೇ ನಿಲ್ಲಬೇಕು. ಇಂತಹ ಕ್ರಮಗಳಿಗೆ ಯಾವುದೇ ಸಮರ್ಥನೆ ಇಲ್ಲ ಎಂದು ಸೈಯದ್ ಅಹ್ಮದ್ ಬುಖಾರಿ ಪತ್ರದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಹಲ್ಲೆ: ಕೇಸರಿ ಬಟ್ಟೆಗಳನ್ನು ಧರಿಸಬೇಡಿ, ತಿಲಕವನ್ನು ಇಡಬೇಡಿ ಇಸ್ಕಾನ್ ಸಲಹೆ
ಜಾಮಾ ಮಸೀದಿ ಶಾಹಿ ಇಮಾಮ್ ಸೈಯದ್ ಅಹ್ಮದ್ ಬುಖಾರಿ 1971ರಲ್ಲಿ ದೇಶವನ್ನು ರಚಿಸಿದಾಗಿನಿಂದ ಭಾರತ ಮತ್ತು ಬಾಂಗ್ಲಾದೇಶದ ನಡುವೆ ನಿಕಟ ಸಂಬಂಧವನ್ನು ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ನೆರೆಯ ದೇಶದವನಾಗಿ, ಬಾಂಗ್ಲಾದೇಶದ ನಿಕಟ ಮಿತ್ರನಾಗಿ ಬಾಂಗ್ಲಾದೇಶದ ಪ್ರಸ್ತುತ ಮುಖ್ಯಸ್ಥರಾದ ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನಸ್ ಅವರು ಹಿಂದೂ ಅಲ್ಪಸಂಖ್ಯಾತರ ವಿರುದ್ಧ ನಡೆಯುತ್ತಿರುವ ಅನ್ಯಾಯವನ್ನು ತಡೆಯಲು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ನಾನು ನಿರೀಕ್ಷಿಸುತ್ತೇನೆ. ಮುಸ್ಲಿಂ ಬಹುಸಂಖ್ಯಾತ ರಾಷ್ಟ್ರವಾಗಿರುವ ಬಾಂಗ್ಲಾದೇಶ ಇಸ್ಲಾಂ ಮತ್ತು ಇಸ್ಲಾಮಿಕ್ ನ್ಯಾಯಶಾಸ್ತ್ರವು ಅಲ್ಪಸಂಖ್ಯಾತರ ವಿರುದ್ಧ ಯಾವುದೇ ರೀತಿಯ ಪೂರ್ವಾಗ್ರಹ ಅಥವಾ ಅನ್ಯಾಯಕ್ಕೆ ಅವಕಾಶ ನೀಡುವುದಿಲ್ಲ ಎಂಬುದನ್ನು ಮನವರಿಕೆ ಮಾಡಿಕೊಳ್ಳಬೇಕು ಎಂದು ಬುಖಾರಿ ಪತ್ರದಲ್ಲಿ ಹೇಳಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ