AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Farmers Protest ನಾಳೆ ದೆಹಲಿಯ ಜಂತರ್​​ ಮಂತರ್​​ನಲ್ಲಿ ರೈತರ ಪ್ರತಿಭಟನೆ, ಬಿಗಿ ಬಂದೋಬಸ್ತ್; ರಾಕೇಶ್​​ ಟಿಕಾಯತ್​​ ಪೊಲೀಸ್​​ ವಶಕ್ಕೆ

ಸರ್ಕಾರದ ಆದೇಶದ ಮೇರೆಗೆ ಕೆಲಸ ಮಾಡುತ್ತಿರುವ ದೆಹಲಿ ಪೊಲೀಸರಿಗೆ ರೈತರ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಈ ಬಂಧನ ಹೊಸ ಕ್ರಾಂತಿಯನ್ನು ತರಲಿದೆ. ಕೊನೆಯ ಉಸಿರು ಇರುವವರೆಗೂ ಈ ಹೋರಾಟ ಮುಂದುವರಿಯಲಿದೆ...

Farmers Protest ನಾಳೆ ದೆಹಲಿಯ ಜಂತರ್​​ ಮಂತರ್​​ನಲ್ಲಿ ರೈತರ  ಪ್ರತಿಭಟನೆ, ಬಿಗಿ ಬಂದೋಬಸ್ತ್; ರಾಕೇಶ್​​ ಟಿಕಾಯತ್​​ ಪೊಲೀಸ್​​ ವಶಕ್ಕೆ
ದೆಹಲಿಯಲ್ಲಿ ಬಿಗಿ ಬಂದೋಬಸ್ತ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Aug 21, 2022 | 7:38 PM

Share

ದೆಹಲಿ: ದೆಹಲಿ- ಹರ್ಯಾಣದ ಟಿಕ್ರಿ ಗಡಿಭಾಗದಲ್ಲಿ ಪೊಲೀಸರು ಬ್ಯಾರಿಕೇಡ್ ಗಳನ್ನರಿಸಿ ಬಿಗಿ ಬಂದೋಬಸ್ತ್ ಮಾಡಿದ್ದಾರೆ. ನಾಳೆ ಜಂತರ್ ಮಂತರ್​​ನಲ್ಲಿ (Jantar Mantar) ರೈತರ ಪ್ರತಿಭಟನೆ ನಡೆಯಲಿದ್ದು, ಇಂದು ಹಲವು ರೈತರು ದೆಹಲಿಗೆ ಬಂದಿದ್ದು, ಇನ್ನೂ ಬರುತ್ತಲೇ ಇದ್ದಾರೆ. ಪ್ರತಿಭಟನೆಗೆ ಮುಂಚಿತವಾಗಿ ಭಾರತೀಯ ಕಿಸಾನ್ ಯೂನಿಯನ್ (BKU) ವಕ್ತಾರ ರಾಕೇಶ್ ಟಿಕಾಯತ್ (Rakesh Tikait) ಅವರನ್ನು ಮಧು ವಿಹಾರ್ ಪೊಲೀಸ್ ಠಾಣೆಯ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಟಿಕಾಯತ್, ದೆಹಲಿ ಪೊಲೀಸರಿಗೆ ರೈತರ ದನಿಯನ್ನು ದಮನಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಸೋಮವಾರ ಜಂತರ್ ಮಂತರ್​​ನಲ್ಲಿ ನಡೆಯಲಿರುವ ‘ಮಹಾಪಂಚಾಯತ್’ ಅನ್ನು ರೈತರ ಸಂಘಟನೆಗಳಾದ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಇತರ ಗುಂಪುಗಳು ಆಯೋಜಿಸಿವೆ. ಪ್ರತಿಭಟನಾಕಾರರು ಘಾಜಿಯಾಬಾದ್‌ನ ಘಾಜಿಪುರ ಗಡಿಯನ್ನು ಒಳಗೊಂಡಿರುವ ರಾಜ್ಯದ ಹೊರಭಾಗವನ್ನು ಹಾದು ಹೋಗಲಿದ್ದಾರೆ. ಯಾವುದೇ ಅಹಿತಕರ ಘಟನೆಯನ್ನು ತಪ್ಪಿಸಲು ಟಿಕ್ರಿ ಗಡಿಯ ಹೊರ ಜಿಲ್ಲೆ, ಪ್ರಮುಖ ಗಡಿಗಳು, ರೈಲ್ವೆ ಹಳಿಗಳು ಮತ್ತು ಮೆಟ್ರೋ ನಿಲ್ದಾಣಗಳಲ್ಲಿ ಸ್ಥಳೀಯ ಪೊಲೀಸರು ಮತ್ತು ಸೇನಾ ಪಡೆಗಳನ್ನು ಸಮರ್ಪಕವಾಗಿ ನಿಯೋಜಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ಬಂಧನ ಹೊಸ ಕ್ರಾಂತಿಗೆ ಕಾರಣವಾಗುತ್ತದೆ: ಟಿಕಾಯತ್

ಪ್ರತಿಭಟನೆಯಲ್ಲಿ ಭಾಗವಹಿಸಲು ದೆಹಲಿಗೆ ಪ್ರವೇಶಿಸುತ್ತಿದ್ದಾಗ ನನ್ನನ್ನು ಬಂಧಿಸಲಾಯಿತು ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಭಾನುವಾರ ಟ್ವೀಟ್ ಮಾಡಿದ್ದಾರೆ. ನನ್ನನ್ನು ಬಂಧಿಸಲಾಗಿದೆ ಎಂದು ಟ್ವೀಟ್ ಮಾಡಿದ ಟಿಕಾಯತ್, ದೆಹಲಿ ಪೊಲೀಸರು ಕೇಂದ್ರ ಸರ್ಕಾರದ ಇಚ್ಛೆಯಂತೆ ಕೆಲಸ ಮಾಡುತ್ತಿದ್ದಾರೆ. ರೈತರು ಹಿಂದೆ ಸರಿಯಲ್ಲ.

ಸರ್ಕಾರದ ಆದೇಶದ ಮೇರೆಗೆ ಕೆಲಸ ಮಾಡುತ್ತಿರುವ ದೆಹಲಿ ಪೊಲೀಸರು ರೈತರ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಈ ಬಂಧನ ಹೊಸ ಕ್ರಾಂತಿಯನ್ನು ತರಲಿದೆ. ಕೊನೆಯ ಉಸಿರು ಇರುವವರೆಗೂ ಈ ಹೋರಾಟ ಮುಂದುವರಿಯಲಿದೆ. ನಾವು ನಿಲ್ಲುವುದಿಲ್ಲ, ನಾವು ದಣಿದಿಲ್ಲ, ನಾವು ತಲೆಬಾಗುವುದಿಲ್ಲ ಎಂದು ಟಿಕಾಯತ್ ಟ್ವೀಟ್ ಮಾಡಿದ್ದಾರೆ.

ದೇಶದಲ್ಲಿ ನಿರುದ್ಯೋಗ ಸಮಸ್ಯೆ ವಿರುದ್ಧ ರೈತರು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಕಿಸಾನ್ ಯೂನಿಯನ್ (ಬಿಕೆಯು) ವಕ್ತಾರರು ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಮತ್ತು ಅವರ ಪುತ್ರ ಆಶಿಶ್ ವಿರುದ್ಧ ಪ್ರತಿಭಟನೆ ನಡೆಸಿದ ನಂತರ ದೆಹಲಿಯಲ್ಲಿ ಈ ಪ್ರತಿಭಟನೆ ನಡೆಯತ್ತಿದೆ. ಕಳೆದ ವರ್ಷ ಲಖಿಂಪುರ ಪ್ರದೇಶದಲ್ಲಿ ನಡೆದ ರೈತರ ಹತ್ಯೆ ಪ್ರಕರಣದಲ್ಲಿ ಸಚಿವರ ಪುತ್ರ ಪ್ರಮುಖ ಆರೋಪಿಯಾಗಿದ್ದಾನೆ.

ದೆಹಲಿ ಸಚಿವ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಗೋಪಾಲ್ ರಾಯ್ ಅವರು ಟಿಕಾಯತ್ ಬಂಧನವನ್ನು ಖಂಡಿಸಿ, ಟ್ವಿಟರ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. “ರೈತ ನಾಯಕ ರಾಕೇಶ್ ಟಿಕಾಯತ್ ಅವರು ಚಳವಳಿಯಲ್ಲಿ ಭಾಗವಹಿಸಲು ತೆರಳುತ್ತಿದ್ದರು. ಆದರೆ ಗಡಿಯಲ್ಲಿಯೇ ಪೊಲೀಸರು ಅವರನ್ನು ತಡೆದರು. ಇದು ಅತ್ಯಂತ ಹೇಯ ಕೃತ್ಯ ಎಂದು ರಾಯ್ ಹಿಂದಿಯಲ್ಲಿ ಬರೆದಿದ್ದಾರೆ.

Published On - 7:36 pm, Sun, 21 August 22

Follow Us
TV9 Web
TV9 Web

TV9 Kannada

Read More
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು