AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂಗಿ ಬಗ್ಗೆ ಅಸೂಯೆ, ಬುರ್ಖಾ ಧರಿಸಿ ಬಂದು ಮನೆಯಲ್ಲೇ ಆಭರಣಗಳನ್ನು ಕದ್ದ ಸಹೋದರಿ

ನವದೆಹಲಿಯ ಮೋಹನನಗರ ಬಡಾವಣೆಯಲ್ಲಿ ಮಹಿಳೆಯೊಬ್ಬರು ಸಾಲ ತೀರಿಸಲು ಸ್ವಂತ ಮನೆಯಲ್ಲೇ ಕಳ್ಳತನ ಮಾಡಿದ್ದಾರೆ. ಮಹಿಳೆ ಬುರ್ಖಾ ಧರಿಸಿ ಈ ಕೃತ್ಯ ಎಸಗಿದ್ದು, ಆಕೆಯ ಕುಟುಂಬಸ್ಥರು ಆಕೆಯನ್ನು ಗುರುತಿಸುವುದಿಲ್ಲ ಎಂದು ನಂಬಿದ್ದಳು.

ತಂಗಿ ಬಗ್ಗೆ ಅಸೂಯೆ, ಬುರ್ಖಾ ಧರಿಸಿ ಬಂದು ಮನೆಯಲ್ಲೇ ಆಭರಣಗಳನ್ನು ಕದ್ದ ಸಹೋದರಿ
ಪೊಲೀಸ್​Image Credit source: ABP Live
ನಯನಾ ರಾಜೀವ್
|

Updated on:Feb 05, 2024 | 9:15 AM

Share

ದೆಹಲಿಯ ಉತ್ತಮ್ ನಗರದಲ್ಲಿ ಮಹಿಳೆಯೊಬ್ಬರು ತನ್ನ ಸ್ವಂತ ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಮತ್ತು ನಗದು ದೋಚಿರುವ ಆಘಾತಕಾರಿ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಮಹಿಳೆ ಬುರ್ಖಾ ಧರಿಸಿ ದರೋಡೆ ನಡೆಸಲು ಮನೆಗೆ ನುಗ್ಗಿದ್ದಳು.  ಮಧ್ಯಾಹ್ನ 2ರಿಂದ 2.30ರ ನಡುವೆ ಮನೆಯಲ್ಲಿದ್ದ ಲಕ್ಷ ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 25 ಸಾವಿರ ನಗದು ಕಳ್ಳತನವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ದೂರು ಆಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆದರೆ, ಮನೆಯಲ್ಲಿ ಬಲವಂತವಾಗಿ ಪ್ರವೇಶಿಸಿದ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ. ಮುಖ್ಯ ಬಾಗಿಲು ಮತ್ತು ಬೀಗ ಯಥಾಸ್ಥಿತಿಯಲ್ಲಿವೆ ಎಂದು ಪೊಲೀಸರನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ನಂತರ ಪೊಲೀಸರು ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದರು. ವೀಡಿಯೋದಲ್ಲಿ ಬುರ್ಖಾ ಧರಿಸಿದ್ದ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮನೆಯೊಳಗೆ ಬರುತ್ತಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಕಮಲೇಶ್ ಅವರ ಹಿರಿಯ ಪುತ್ರಿ ಶ್ವೇತಾಳನ್ನು ಬಂಧಿಸಿದ್ದಾರೆ.

 ಅಸೂಯೆಯಿಂದ ದರೋಡೆ ನಡೆಸಿದ್ದಾಳೆ ವಿಚಾರಣೆ ವೇಳೆ, ಶ್ವೇತಾ ತನ್ನ ತಾಯಿ ತನ್ನ ತಂಗಿಯನ್ನು ಹೆಚ್ಚು ಪ್ರೀತಿಸುತ್ತಿದ್ದರಿಂದ ದರೋಡೆ ನಡೆಸಿದ್ದೇನೆ ಎಂದು ಹೇಳಿದ್ದಾಳೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಸಾಲವಿದ್ದು, ಬಾಕಿ ತೀರಿಸಲು ದರೋಡೆಗೆ ಯೋಜನೆ ರೂಪಿಸಿದ್ದಳು. ದರೋಡೆಯ ದಿನದಂದು, ಶ್ವೇತಾ ತನ್ನ ತಾಯಿಯ ಬಳಿ ಕೀಗಳನ್ನು ತೆಗೆದುಕೊಂಡಿದ್ದಳು. ಪ್ರವೇಶ ಪಡೆಯುವ ಮೊದಲು ಸಾರ್ವಜನಿಕ ಶೌಚಾಲಯದಲ್ಲಿ ಬುರ್ಖಾವನ್ನು ಧರಿಸಿದ್ದಳು. ಕದ್ದ ಕೀಗಳನ್ನು ಬಳಸಿ, ಮನೆಗೆ ಬಂದು ಒಡವೆಗಳನ್ನು ಕದ್ದು ಪರಾರಿಯಾಗಿದ್ದಳು.

ಮತ್ತಷ್ಟು ಓದಿ: ಸಾಲ ತೀರಿಸೋಕೆ ರೈಲ್ವೆ ಪ್ರಯಾಣಿಕರ ವಸ್ತು ಕಳ್ಳತನ ಮಾಡ್ತಿದ್ದ ಅಸಿಸ್ಟೆಂಟ್ ಲೋಕೋ ಪೈಲಟ್ ಅರೆಸ್ಟ್

ಶ್ವೇತಾ ತನ್ನ ತಾಯಿಯ ಕಳ್ಳತನದ ಬಗ್ಗೆ ಕಳವಳ ವ್ಯಕ್ತಪಡಿಸುವ ಮೂಲಕ ಅನುಮಾನದಿಂದ ತಪ್ಪಿಸಿಕೊಳ್ಳುವ ಪ್ರಯತ್ನದ ಹೊರತಾಗಿಯೂ, ಅಧಿಕಾರಿಗಳು ಕಳ್ಳತನದ ವಸ್ತುಗಳನ್ನು ಮರಳಿ ಪಡೆಯುವಲ್ಲಿ ಯಶಸ್ವಿಯಾದರು.

ಕೆಲವು ಆಭರಣಗಳನ್ನು ಮಾರಾಟ ಮಾಡಿರುವುದಾಗಿ ಶ್ವೇತಾ ಒಪ್ಪಿಕೊಂಡಿದ್ದರೂ, ಕದ್ದ ಒಡವೆಗಳನ್ನು ಪೊಲೀಸರು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಶ್ವೇತಾ ಅವರು ಆಭರಣಗಳನ್ನು ಮಾರಾಟ ಮಾಡಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾರೆ. ಆದರೆ, ಪೊಲೀಸರು ಆಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:15 am, Mon, 5 February 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ