AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ ಹಾಗೂ ಇಬ್ಬರು ಹೆಣ್ಣುಮಕ್ಕಳ ಅಪಹರಣ, ಒಂದು ಅಪಘಾತದಿಂದ ಇವರೆಲ್ಲರ ಜೀವ ಉಳೀತು

ಒಂದು ಅಪಘಾತವು ಜನರ ಪ್ರಾಣವನ್ನು ತೆಗೆಯಬಹುದು ಎಂಬುದು ಗೊತ್ತು ಆದರೆ ಇಲ್ಲಿ ನಡೆದ ಈ ಅಪಘಾತದಿಂದ ಮೂವರ ಪ್ರಾಣ ಉಳಿದಿದೆ. ದೆಹಲಿಯಲ್ಲಿ ಓರ್ವ ವ್ಯಕ್ತಿ ಹಾಗೂ ಅವರ ಇಬ್ಬರು ಹೆಣ್ಣುಮಕ್ಕಳನ್ನು ನಾಲ್ಕು ಜನರ ಗುಂಪೊಂದು ಹಾಡಹಗಲೇ ಅಪಹರಿಸಿತ್ತು.

ತಂದೆ ಹಾಗೂ ಇಬ್ಬರು ಹೆಣ್ಣುಮಕ್ಕಳ ಅಪಹರಣ, ಒಂದು ಅಪಘಾತದಿಂದ ಇವರೆಲ್ಲರ ಜೀವ ಉಳೀತು
ಅಪಘಾತImage Credit source: NDTV
ನಯನಾ ರಾಜೀವ್
|

Updated on:Aug 11, 2023 | 11:03 AM

Share

ಒಂದು ಅಪಘಾತವು ಜನರ ಪ್ರಾಣವನ್ನು ತೆಗೆಯಬಹುದು ಎಂಬುದು ಗೊತ್ತು ಆದರೆ ಇಲ್ಲಿ ನಡೆದ ಈ ಅಪಘಾತದಿಂದ ಮೂವರ ಪ್ರಾಣ ಉಳಿದಿದೆ. ದೆಹಲಿಯಲ್ಲಿ ಓರ್ವ ವ್ಯಕ್ತಿ ಹಾಗೂ ಅವರ ಇಬ್ಬರು ಹೆಣ್ಣುಮಕ್ಕಳನ್ನು ನಾಲ್ಕು ಜನರ ಗುಂಪೊಂದು ಹಾಡಹಗಲೇ ಅಪಹರಿಸಿತ್ತು. ಈ ರಸ್ತೆ ಅಪಘಾತವು ಅವರನ್ನು ಅಪಹರಣಕಾರರಿಂದ ತಪ್ಪಿಸಿಕೊಳ್ಳುವಂತೆ ಮಾಡಿದೆ. ಸುಭಾಷ್ ಕಶ್ಯಪ್ ಎಂಬುವವರು ತನ್ನ ಮಕ್ಕಳನ್ನು ಶಾಲೆಯಿಂದ ಕರೆ ತರುವಾಗ ಅಪಹರಣಕಾರರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಕಶ್ಯಪ್ ಅವರು ಬಿಳಿ ಬ್ರಿಝಾ ಎಸ್​ಯುವಿನಲ್ಲಿ ಬರುತ್ತಿದ್ದಾಗ ಸೂರಜ್​ಪುರ ಮುಖ್ಯ ಮಾರುಕಟ್ಟೆಯಲ್ಲಿ ಅವರನ್ನು ನಾಲ್ವರು ಅಡ್ಡಗಟ್ಟಿದ್ದಾರೆ, ಬಳಿಕ ಅವರು ಕಾರನ್ನು ಹತ್ತಿ ಅವರು ಹಾಗೂ ಮಕ್ಕಳನ್ನು ಒತ್ತೆಯಾಳಾಗಿರಿಸಿಕೊಂಡಿದ್ದಾರೆ.

ಬಳಿಕ 500 ಮೀಟರ್​ನಷ್ಟು ದೂರ ಹೋಗಿದ್ದಷ್ಟೇ ಕಸದ ತೊಟ್ಟಿಯೊಂದಕ್ಕೆ ಕಾರು ಡಿಕ್ಕಿ ಹೊಡೆದಿತ್ತು.ಈ ಪ್ರದೇಶವು ಜನನಿಬಿಡ ಮಾರುಕಟ್ಟೆಯಾಗಿತ್ತು ಮತ್ತು ಜನಸಂದಣಿ ಜಮಾಯಿಸುತ್ತಿದ್ದಂತೆ, ಅಪಹರಣಕಾರರು ಇಳಿದು ಓಡಿದರು. ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಅವರು ಪರಾರಿಯಾಗುತ್ತಿರುವ ದೃಶ್ಯ ಸೆರೆಯಾಗಿದೆ.

ಮತ್ತಷ್ಟು ಓದಿ: ವಿಪರೀತ ಸಾಲ, ದಿನ ಬೆಳಗಾದರೆ ನೂರಾರು ಫೋನ್​ಕಾಲ್​ಗಳು, ಅಪಹರಣ ನಾಟಕವಾಡಿ ತಂದೆ ಬಳಿ ಹಣಕ್ಕೆ ಬೇಡಿಕೆ ಇಟ್ಟ

ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಇಬ್ಬರನ್ನು ಪತ್ತೆ ಮಾಡಲಾಗಿದೆ. ನೋಯ್ಡಾದ ಹಿರಿಯ ಪೊಲೀಸ್ ಅಧಿಕಾರಿ ಅನಿಲ್ ಯಾದವ್, ಸುಭಾಷ್ ಕಶ್ಯಪ್ ಸೂರಜ್‌ಪುರ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ ಮತ್ತು ಅವರ ಮಕ್ಕಳು ಹತ್ತಿರದ ಕೆಸಿಎಸ್ ಇಂಟರ್ ಕಾಲೇಜಿನಲ್ಲಿ ಓದುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಘಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:59 am, Fri, 11 August 23

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್