AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ವಿರುದ್ಧ ಅರವಿಂದ್ ಕೇಜ್ರಿವಾಲ್ ಕಳ್ಳಬೇಟೆ ಆರೋಪ; ದೆಹಲಿ ಲೆಫ್ಟಿನೆಂಟ್ ಗವರ್ನರ್ ಎಸಿಬಿ ತನಿಖೆಗೆ ಆದೇಶ

ಅರವಿಂದ್ ಕೇಜ್ರಿವಾಲ್ ಅವರ ಕಳ್ಳಬೇಟೆ ಆರೋಪಕ್ಕೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಈ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ. ದೆಹಲಿಯಲ್ಲಿ ಮತ ಎಣಿಕೆಗೂ ಮುನ್ನ, ಬಿಜೆಪಿ 16 ಎಎಪಿ ಶಾಸಕರಿಗೆ ತಮ್ಮ ಪಕ್ಷಕ್ಕೆ ಬರಲು 15 ಕೋಟಿ ರೂ.ಗಳ ಆಫರ್ ನೀಡುತ್ತಿದೆ ಎಂಬ ಅರವಿಂದ್ ಕೇಜ್ರಿವಾಲ್ ಅವರ ಆರೋಪದ ಬಗ್ಗೆ ಭ್ರಷ್ಟಾಚಾರ ನಿಗ್ರಹ ದಳದ ತನಿಖೆಗೆ ದೆಹಲಿ ಎಲ್-ಜಿ ವಿಕೆ ಸಕ್ಸೇನಾ ಇಂದು ಶಿಫಾರಸು ಮಾಡಿದ್ದಾರೆ. ಈ ವಿಷಯವು ತನಿಖೆಗೆ ಅರ್ಹವಾಗಿದೆ ಎಂದು ಲೆಫ್ಟಿನೆಂಟ್ ಗವರ್ನರ್ ಹೇಳಿದ್ದಾರೆ ಮತ್ತು ಆರೋಪಗಳನ್ನು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬಿಜೆಪಿ ವಿರುದ್ಧ ಅರವಿಂದ್ ಕೇಜ್ರಿವಾಲ್ ಕಳ್ಳಬೇಟೆ ಆರೋಪ; ದೆಹಲಿ ಲೆಫ್ಟಿನೆಂಟ್ ಗವರ್ನರ್ ಎಸಿಬಿ ತನಿಖೆಗೆ ಆದೇಶ
V K Saxena Arvind Kejriwal
ಸುಷ್ಮಾ ಚಕ್ರೆ
|

Updated on: Feb 07, 2025 | 3:50 PM

Share

ನವದೆಹಲಿ: ಫೆಬ್ರವರಿ 8ರಂದು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣಾ ಮತಎಣಿಕೆಗೂ ಮುಂಚಿತವಾಗಿ ಬಿಜೆಪಿ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಬೇಟೆಯಾಡಲು ಪ್ರಯತ್ನಿಸಿದೆ ಎಂಬ ಆಮ್ ಆದ್ಮಿ ಪಕ್ಷದ ಆರೋಪದ ಬಗ್ಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಇಂದು ತನಿಖೆಗೆ ಅನುಮತಿ ನೀಡಿದ್ದಾರೆ. ಎಎಪಿಯ ಹೇಳಿಕೆಗಳು ಮಾನನಷ್ಟಕರ ಮತ್ತು ಚುನಾವಣಾ ಫಲಿತಾಂಶಗಳಿಗೆ ಮುಂಚಿತವಾಗಿ ತನ್ನ ವರ್ಚಸ್ಸಿಗೆ ಕಳಂಕ ತರುವ ಗುರಿಯನ್ನು ಹೊಂದಿವೆ ಎಂದು ಬಿಜೆಪಿ ವಾದಿಸಿತ್ತು.

ಈ ವಿಷಯವು ತನಿಖೆಗೆ ಅರ್ಹವಾಗಿದೆ ಎಂದು ಲೆಫ್ಟಿನೆಂಟ್ ಗವರ್ನರ್ ಹೇಳಿದ್ದಾರೆ ಮತ್ತು ಆರೋಪಗಳನ್ನು ಪರಿಶೀಲಿಸಲು ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ತಂಡವು ಇಂದು ಅರವಿಂದ್ ಕೇಜ್ರಿವಾಲ್ ಅವರನ್ನು ಪ್ರಶ್ನಿಸಲು ಅವರ ಸಿವಿಲ್ ಲೈನ್ಸ್ ನಿವಾಸಕ್ಕೆ ತೆರಳಿದೆ. ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ 16 ಎಎಪಿ ಅಭ್ಯರ್ಥಿಗಳಿಗೆ ಬಿಜೆಪಿಯಿಂದ ಆಫರ್‌ಗಳು ಬಂದಿವೆ ಎಂದು ಹೇಳಿಕೊಂಡಿದ್ದಾರೆ. ಪಕ್ಷಾಂತರ ಮಾಡಿದರೆ ಅವರಿಗೆ ಸಚಿವ ಸ್ಥಾನಗಳು ಮತ್ತು ತಲಾ 15 ಕೋಟಿ ರೂ.ಗಳ ಭರವಸೆ ನೀಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಹೀನಾಯ ಸೋಲಿನ ಭವಿಷ್ಯ ನುಡಿದ ಚುನಾವಣೋತ್ತರ ಸಮೀಕ್ಷೆಗಳು

ಎಕ್ಸಿಟ್ ಪೋಲ್ ಫಲಿತಾಂಶದ ಬಗ್ಗೆಯೂ ಆಕ್ರೋಶ ಹೊರಹಾಕಿರುವ ಅರವಿಂದ್ ಕೇಜ್ರಿವಾಲ್, ಈ ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶಗಳ ಬಗ್ಗೆ ನನಗೆ ನಂಬಿಕೆಯಿಲ್ಲ. ಎಕ್ಸಿಟ್ ಪೋಲ್​ಗಳು ಹೇಳಿದಂತೆ ಬಿಜೆಪಿ 55ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುವುದಾದರೆ ಅವರು ನಮ್ಮ ಅಭ್ಯರ್ಥಿಗಳನ್ನು ಏಕೆ ತಮ್ಮ ಪಕ್ಷಕ್ಕೆ ಕರೆಯುತ್ತಿದ್ದಾರೆ? ಈ ನಕಲಿ ಸಮೀಕ್ಷೆಗಳು ಎಎಪಿ ಅಭ್ಯರ್ಥಿಗಳನ್ನು ಬೇರೆ ಪಕ್ಷಕ್ಕೆ ತೆರಳುವ ವಾತಾವರಣವನ್ನು ಸೃಷ್ಟಿಸುವ ಪಿತೂರಿಯಾಗಿದೆ. ಆದರೆ ಅವರಲ್ಲಿ ಯಾರೂ ಪಕ್ಷ ಬದಲಾಯಿಸುವುದಿಲ್ಲ ಎಂಬ ವಿಶ್ವಾಸ ನನಗಿದೆ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

ದೆಹಲಿ ಮುಖ್ಯಮಂತ್ರಿ ಮತ್ತು ಕಲ್ಕಾಜಿಯ ಎಎಪಿ ಅಭ್ಯರ್ಥಿ ಅತಿಶಿ ಕೂಡ ಈ ವಿವಾದದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಗೆಲ್ಲುವ ವಿಶ್ವಾಸವಿದ್ದರೆ ಅಭ್ಯರ್ಥಿಗಳನ್ನು ಬೇಟೆಯಾಡಲು ಬಿಜೆಪಿ ಮಾಡುತ್ತಿರುವ ಪ್ರಯತ್ನಗಳ ಅರ್ಥವೇನು? ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ: ದೆಹಲಿ ಚುನಾವಣೆಯಲ್ಲಿ ಗೆಲುವಿನ ವಿಶ್ವಾಸದಲ್ಲಿರುವ ಬಿಜೆಪಿ, ಎಕ್ಸಿಟ್ ಪೋಲ್ ಫಲಿತಾಂಶ ನಂಬಲ್ಲ ಎಂದ ಆಪ್

ದೆಹಲಿಯ ಎಲ್ಲಾ 70 ವಿಧಾನಸಭಾ ಸ್ಥಾನಗಳಿಗೆ ಬುಧವಾರ ಮತದಾನ ಮುಕ್ತಾಯಗೊಂಡಿದೆ. ನಾಳೆ (ಶನಿವಾರ) ಮತ ಎಣಿಕೆ ನಡೆಯಲಿದ್ದು, ಫಲಿತಾಂಶಗಳು ಎಎಪಿ ಸತತ ಮೂರನೇ ಅವಧಿಗೆ ಅಧಿಕಾರ ಹಿಡಿಯುತ್ತದೆಯೇ ಅಥವಾ ಬಿಜೆಪಿ 27 ವರ್ಷಗಳ ಬಳಿಕ ಮತ್ತೆ ರಾಜಧಾನಿಯಲ್ಲಿ ಆಡಳಿತದ ಚುಕ್ಕಾಣಿ ಹಿಡಿಯುತ್ತದೆಯೇ ಎಂಬುದನ್ನು ನಿರ್ಧರಿಸುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ