AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರವಿಂದ ಕೇಜ್ರಿವಾಲ್ ಮನೆ ನವೀಕರಣಕ್ಕೆ ₹ 44.78 ಕೋಟಿ ಖರ್ಚು: ಪರಿಶೀಲಿಸಿ ವರದಿ ಸಲ್ಲಿಸಲು ದೆಹಲಿ ಎಲ್‌ಜಿ ಆದೇಶ

ದಾಖಲೆಗಳನ್ನು ಪರಿಶೀಲಿಸಿದ ನಂತರ, ಎಲ್‌ಜಿಯ ಪರಿಶೀಲನೆಗಾಗಿ 15 ದಿನಗಳಲ್ಲಿ ಈ ವಿಷಯದ ವಾಸ್ತವ ವರದಿಯನ್ನು ಸಲ್ಲಿಸಬೇಕ ಎಂದು ಎಲ್‌ಜಿ ಕಚೇರಿಯು ಮುಖ್ಯ ಕಾರ್ಯದರ್ಶಿಗೆ ಏಪ್ರಿಲ್ 27 ರಂದು ಬರೆದ ಪತ್ರದಲ್ಲಿ ತಿಳಿಸಲಾಗಿದೆ.

ಅರವಿಂದ ಕೇಜ್ರಿವಾಲ್ ಮನೆ ನವೀಕರಣಕ್ಕೆ ₹ 44.78 ಕೋಟಿ ಖರ್ಚು: ಪರಿಶೀಲಿಸಿ ವರದಿ ಸಲ್ಲಿಸಲು ದೆಹಲಿ ಎಲ್‌ಜಿ ಆದೇಶ
ಅರವಿಂದ ಕೇಜ್ರಿವಾಲ್
ರಶ್ಮಿ ಕಲ್ಲಕಟ್ಟ
|

Updated on: Apr 29, 2023 | 5:14 PM

Share

ದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Arvind Kejriwal) ಅವರ ನಿವಾಸವನ್ನು ನವೀಕರಿಸಲು ₹ 44.78 ಕೋಟಿ ವೆಚ್ಚ ಮಾಡಲಾಗಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ, ಲೆಫ್ಟಿನೆಂಟ್ ಗವರ್ನರ್ (LG) ವಿಕೆ ಸಕ್ಸೇನಾ (VK Saxena )ಅವರು ಎಲ್ಲಾ ಸಂಬಂಧಿತ ದಾಖಲೆಗಳನ್ನು ಪರಿಶೀಲಿಸಿ 15 ದಿನಗಳಲ್ಲಿ ವರದಿ ಸಲ್ಲಿಸುವಂತೆ ಮುಖ್ಯ ಕಾರ್ಯದರ್ಶಿ ನರೇಶ್ ಕುಮಾರ್ ಅವರಿಗೆ ಸೂಚಿಸಿದ್ದಾರೆ. ಇದು ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮಗಳಲ್ಲಿ ಪ್ರಕಟವಾದ ವಿವಿಧ ಮಾಧ್ಯಮ ವರದಿಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಪಿಡಬ್ಲ್ಯುಡಿಯಿಂದ ಸಿವಿಲ್ ಲೈನ್ಸ್​​ನ ನಂ.6 ಫ್ಲ್ಯಾಗ್ ಸ್ಟಾಫ್ ಹೌಸ್ ನವೀಕರಣವನ್ನು ಕೈಗೊಳ್ಳುವಾಗ ಮಾಡಿದ ಆಪಾದಿತ ಅಕ್ರಮಗಳ ಕುರಿತು ಮಾಧ್ಯಮಗಳು ವರದಿ ಮಾಡಿದ್ದವು. ಮಾಧ್ಯಮ ವರದಿಗಳನ್ನು ಗಮನಿಸಿ ಮತ್ತು ಸಮಸ್ಯೆಯ ಸೂಕ್ಷ್ಮತೆಯನ್ನು ಗಮನದಲ್ಲಿಟ್ಟುಕೊಂಡು, ಈ ವಿಷಯದಲ್ಲಿ ಎಲ್ಲಾ ಸಂಬಂಧಿತ ದಾಖಲೆಗಳನ್ನು ತಕ್ಷಣವೇ ಸುರಕ್ಷಿತಗೊಳಿಸಬೇಕು ಮತ್ತು ರಕ್ಷಣಾತ್ಮಕ ಕಸ್ಟಡಿಗೆ ತೆಗೆದುಕೊಳ್ಳಬೇಕು ಎಂದು ಲೆಫ್ಟಿನೆಂಟ್ ಗವರ್ನರ್ ಹೇಳಿದ್ದಾರೆ. ದಾಖಲೆಗಳನ್ನು ಪರಿಶೀಲಿಸಿದ ನಂತರ, ಎಲ್‌ಜಿಯ ಪರಿಶೀಲನೆಗಾಗಿ 15 ದಿನಗಳಲ್ಲಿ ಈ ವಿಷಯದ ವಾಸ್ತವ ವರದಿಯನ್ನು ಸಲ್ಲಿಸಬೇಕ ಎಂದು ಎಲ್‌ಜಿ ಕಚೇರಿಯು ಮುಖ್ಯ ಕಾರ್ಯದರ್ಶಿಗೆ ಏಪ್ರಿಲ್ 27 ರಂದು ಬರೆದ ಪತ್ರದಲ್ಲಿ ತಿಳಿಸಲಾಗಿದೆ.

ಕೇಜ್ರಿವಾಲ್ ಅವರ ಅಧಿಕೃತ ಬಂಗಲೆ ನವೀಕರಣಕ್ಕೆ ಖರ್ಚು ಮಾಡಿದ ಹಣದ ವಿವರಗಳು ಹೊರಬಂದ ನಂತರ ಬಿಜೆಪಿ ಎಎಪಿ ವಿರುದ್ದ ವಾಗ್ದಾಳಿಯನ್ನು ಮತ್ತಷ್ಚು ತೀವ್ರಗೊಳಿಸಿದೆ.

ಕೇಜ್ರಿವಾಲ್ ಅವರು ಸಾಮಾನ್ಯ ವ್ಯಕ್ತಿ ಎಂದು ಹೇಳುತ್ತಾ ರಾಜ ನಂತೆ ಬದುಕುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಪ್ರತಿಯಾಗಿ, ಆಮ್ ಆದ್ಮಿ ಪಕ್ಷವು 80 ವರ್ಷಗಳ ಹಿಂದೆ ನಿರ್ಮಿಸಿದ ಹಳೇ ಕಟ್ಟಡ ಇದಾಗಿದ್ದು ಇತ್ತೀಚಿಗೆ ಮೇಲ್ಛಾವಣಿ ಕುಸಿದಿರುವ ಕಾರಣ ನವೀಕರಣ ಅಗತ್ಯ ಎಂದು ಒತ್ತಿಹೇಳಿದೆ. ಇದರ ಬೆನ್ನಲ್ಲೇ ಬಂಗಲೆಯ ನಿರ್ವಹಣೆಯ ಹೊಣೆ ಹೊತ್ತಿರುವ ಲೋಕೋಪಯೋಗಿ ಇಲಾಖೆಯು ಅದನ್ನು ಮರುನಿರ್ಮಾಣ ಮಾಡಲು ಶಿಫಾರಸು ಮಾಡಿದೆ ಎಂದು ಆಮ್ ಆದ್ಮಿ ಪಕ್ಷ ಹೇಳಿದೆ.

ಇದನ್ನೂ ಓದಿ: Mann Ki Baat: ನಾಳೆ ಮನ್​ ಕೀ ಬಾತ್​ನ ನೂರನೇ ಆವೃತ್ತಿ; ತಮ್ಮದೇ ಮನದ ಮಾತು ಕೇಳಲು ಮೋದಿ ಎಲ್ಲಿರುತ್ತಾರೆ ಗೊತ್ತೇ?

ದೆಹಲಿ ಬಿಜೆಪಿ ವಕ್ತಾರ ಪ್ರವೀಣ್ ಶಂಕರ್ ಕಪೂರ್, ತಮ್ಮ ಪಕ್ಷವು ವೆಚ್ಚದ ಬಗ್ಗೆ ತನಿಖೆಗೆ ಒತ್ತಾಯಿಸುತ್ತಿದೆ ಎಂದು ಹೇಳಿದ್ದಾರೆ. ಖರ್ಚು ಮಾಡಿದ ಹಣವು ನಿಯಮಗಳ ಉಲ್ಲಂಘನೆಯಾಗಿದೆ ಎಂದು ತೋರುತ್ತದೆ. ವೆಚ್ಚದಲ್ಲಿ ಅಧಿಕ ಬಿಲ್ಲಿಂಗ್‌ನ ಸ್ಪಷ್ಟ ನಿದರ್ಶನಗಳೂ ಇವೆ. ತನಿಖೆ ಆಗಬೇಕು ಎಂದು ಅವರು ಹೇಳಿದ್ದು,ಎಎಪಿ ಆರೋಪಗಳನ್ನು ತಳ್ಳಿ ಹಾಕಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!