Delhi LG Anil Baijal ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ರಾಜೀನಾಮೆ

1969 ರ ಬ್ಯಾಚ್‌ನ ಐಎಎಸ್ ಅಧಿಕಾರಿ, ಬೈಜಾಲ್ ಅವರು ಅಟಲ್ ಬಿಹಾರಿ ವಾಜಪೇಯಿ ಸರ್ಕಾರದ ಅಡಿಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು, ಜೊತೆಗೆ ಇತರ ಸಚಿವಾಲಯಗಳಲ್ಲಿ ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದರು

Delhi LG Anil Baijal ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ರಾಜೀನಾಮೆ
ಅನಿಲ್ ಬೈಜಾಲ್
Edited By:

Updated on: May 18, 2022 | 5:56 PM

ದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ (Delhi Lieutenant Governor)  ಅನಿಲ್ ಬೈಜಾಲ್ (Anil Baijal) ರಾಜೀನಾಮೆ ನೀಡಿದ್ದಾರೆ. ಬೈಜಾಲ್ ಅವರು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಬುಧವಾರ ರಾಷ್ಟ್ರಪತಿಗಳಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಅನಿಲ್ ಬೈಜಾಲ್ ಅವರು  ದೆಹಲಿಯ 21 ನೇ ಲೆಫ್ಟಿನೆಂಟ್ ಗವರ್ನರ್ ಆಗಿದ್ದರು. ನಜೀಬ್ ಜಂಗ್ ಅವರ ಹಠಾತ್ ರಾಜೀನಾಮೆಯ ನಂತರ ಅವರು 31 ಡಿಸೆಂಬರ್ 2016 ರಂದು ಅಧಿಕಾರ ವಹಿಸಿಕೊಂಡರು. ಇವರು 5 ವರ್ಷ 4 ತಿಂಗಳಿಗಿಂತ ಹೆಚ್ಚು ಕಾಲ ಈ ಸ್ಥಾನದಲ್ಲಿ ಸೇವೆ ಸಲ್ಲಿಸಿದರು. 1969 ರ ಬ್ಯಾಚ್‌ನ ಐಎಎಸ್ ಅಧಿಕಾರಿ, ಬೈಜಾಲ್ ಅವರು ಅಟಲ್ ಬಿಹಾರಿ ವಾಜಪೇಯಿ ಸರ್ಕಾರದ ಅಡಿಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು, ಜೊತೆಗೆ ಇತರ ಸಚಿವಾಲಯಗಳಲ್ಲಿ ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದರು. ಅವರು ದೆಹಲಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಉಪಾಧ್ಯಕ್ಷರೂ ಆಗಿದ್ದಾರೆ. ಇವರು ವಿವೇಕಾನಂದ ಇಂಟರ್‌ನ್ಯಾಶನಲ್ ಫೌಂಡೇಶನ್‌ನ ಕಾರ್ಯಕಾರಿ ಮಂಡಳಿಯಲ್ಲಿದ್ದರು.ಮನಮೋಹನ್ ಸಿಂಗ್ ಸರ್ಕಾರವು ಪ್ರಾರಂಭಿಸಿದ 60,000 ಕೋಟಿ ರೂ. ಜವಾಹರಲಾಲ್ ನೆಹರು ರಾಷ್ಟ್ರೀಯ ನಗರ ನವೀಕರಣ ಮಿಷನ್ (JNNURM) ವಿನ್ಯಾಸ ಮತ್ತು ರೋಲ್-ಔಟ್‌ನೊಂದಿಗೆ ಬೈಜಾಲ್ ಸಕ್ರಿಯವಾಗಿ ಸಂಬಂಧ ಹೊಂದಿದ್ದರು.

ಲೆಫ್ಟಿನೆಂಟ್ ಗವರ್ನರ್ ಆಗಿ ಅಧಿಕಾರ ವಹಿಸಿದಾಗಿನಿಂದ ಅವರು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರೊಂದಿಗೆ ಹಲವು ವಿಷಯಗಳಲ್ಲಿ ಜಗಳವಾಡುತ್ತಿದ್ದರು. ದೆಹಲಿ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಪ್ರತಿನಿಧಿಯಾದ ಲೆಫ್ಟಿನೆಂಟ್ ಗವರ್ನರ್ ನಡುವಿನ ಜಗಳವು ಚುನಾಯಿತ ಸರ್ಕಾರ ಮತ್ತು ಅಸೆಂಬ್ಲಿಯನ್ನು ಹೊಂದಿರುವ ಕೇಂದ್ರಾಡಳಿತ ಪ್ರದೇಶವಾದ ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಲೇ ಇರುತ್ತಿತ್ತು.

ಅವರ 37 ವರ್ಷಗಳ ವೃತ್ತಿಜೀವನದಲ್ಲಿ ಬೈಜಾಲ್ ಅವರು ಇಂಡಿಯನ್ ಏರ್‌ಲೈನ್ಸ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ, ಪ್ರಸಾರ ಭಾರತಿ ಕಾರ್ಪೊರೇಶನ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಗೋವಾದ ಅಭಿವೃದ್ಧಿ ಆಯುಕ್ತ ಮತ್ತು ನೇಪಾಳದಲ್ಲಿ ಭಾರತದ ಸಹಾಯ ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದರು. ಅಲಹಾಬಾದ್ ವಿಶ್ವವಿದ್ಯಾನಿಲಯದಿಂದ ಕಲಾ ವಿಷಯದಲ್ಲಿ  ಸ್ನಾತಕೋತ್ತರ ಪದವಿ ಪಡೆದ ಬೈಜಾಲ್ ಫೆಡರೇಶನ್ ಆಫ್ ಇಂಡಿಯನ್ ಏರ್‌ಲೈನ್ಸ್ (ಎಫ್‌ಐಎ) ಯ ಪ್ರಧಾನ ಕಾರ್ಯದರ್ಶಿಯಾಗಿದ್ದರು.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

 

Published On - 5:17 pm, Wed, 18 May 22