UAPA ಅಡಿ ಅರುಂಧತಿ ರಾಯ್ ವಿರುದ್ಧ ಕಾನೂನು ಕ್ರಮ ಜರುಗಿಸಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನುಮೋದನೆ
Arundhati Roy: ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರು ಸಾರ್ವಜನಿಕವಾಗಿ ಪ್ರಚೋದನಕಾರಿ ಭಾಷಣಗಳನ್ನು ನೀಡಿದ್ದನ್ನು ವಿರೋಧಿಸಿ 2010ರ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಯುಎಪಿಎ ಸೆಕ್ಷನ್ 45 ರ ಅಡಿಯಲ್ಲಿ ಲೇಖಕಿ ಹಾಗೂ ಸಾಮಾಜಿಕ ಕಾರ್ಯಕರ್ತೆ ಅರುಂಧತಿ ರಾಯ್ ಮತ್ತು ಕಾಶ್ಮೀರದ ಕೇಂದ್ರೀಯ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಡಾ. ಶೇಖ್ ಶೋಕತ್ ಹುಸೇನ್ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ ನೀಡಿದ್ದಾರೆ.
ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ (Vinay Kumar Saxena) ಅವರು 2010ರಲ್ಲಿ ಕಾರ್ಯಕ್ರಮವೊಂದರಲ್ಲಿ ಮಾಡಿದ ‘ಪ್ರಚೋದನಕಾರಿ’ ಭಾಷಣಕ್ಕಾಗಿ ಕಠಿಣ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಲೇಖಕಿ ಅರುಂಧತಿ ರಾಯ್ (Arundhati Roy) ವಿರುದ್ಧ ಕಾನೂನು ಕ್ರಮ ಜರುಗಿಸಲು ಇಂದು ಅನುಮತಿ ನೀಡಿದ್ದಾರೆ.
2010ರಲ್ಲಿ ಸಾಮಾಜಿಕ ಕಾರ್ಯಕರ್ತ ಸುಶೀಲ್ ಪಂಡಿತ್ ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಮತ್ತು ಸಾರ್ವಜನಿಕ ತೊಂದರೆಗೆ ಕಾರಣವಾಗುವ ಹೇಳಿಕೆಗಳನ್ನು ನೀಡುವ ಅಪರಾಧಕ್ಕಾಗಿ ಈ ಇಬ್ಬರು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲು ಲೆಫ್ಟಿನೆಂಟ್ ಗವರ್ನರ್ ಸಿಆರ್‌ಪಿಸಿಯ ಸೆಕ್ಷನ್ 196 ರ ಅಡಿಯಲ್ಲಿ ಅನುಮತಿ ನೀಡಿದ್ದರು.
ಇದನ್ನೂ ಓದಿ: ಭಾರತವು ಪಾಕಿಸ್ತಾನವನ್ನು ಗೌರವಿಸಬೇಕು ಇಲ್ಲವಾದರೆ ಅಣುಬಾಂಬ್ ದಾಳಿ ನಡೆಸಬಹುದು: ಮಣಿಶಂಕರ್ ಅಯ್ಯರ್ ವಿವಾದಾತ್ಮಕ ಹೇಳಿಕೆ
ಅಕ್ಟೋಬರ್ 2010ರಲ್ಲಿ ಹೊಸದಿಲ್ಲಿಯ ಕೋಪರ್ನಿಕಸ್ ಮಾರ್ಗ್‌ನ ಎಲ್‌ಟಿಜಿ ಆಡಿಟೋರಿಯಂನಲ್ಲಿ “ಆಜಾದಿ – ದಿ ಓನ್ಲಿ ವೇ” ಬ್ಯಾನರ್ ಅಡಿಯಲ್ಲಿ ಆಯೋಜಿಸಲಾದ ಸಮಾವೇಶದಲ್ಲಿ ಅರುಂಧತಿ ರಾಯ್ ಮತ್ತು ಹುಸೇನ್ ಪ್ರಚೋದನಕಾರಿ ಭಾಷಣಗಳನ್ನು ಮಾಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.
ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಅರುಂಧತಿ ರಾಯ್ ಮತ್ತು ಕಾಶ್ಮೀರದ ಸೆಂಟ್ರಲ್ ಯೂನಿವರ್ಸಿಟಿಯ ಇಂಟರ್ನ್ಯಾಷನಲ್ ಲಾ ಮಾಜಿ ಪ್ರೊಫೆಸರ್ ಡಾ. ಶೇಖ್ ಶೋಕತ್ ಹುಸೇನ್, ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಯ ಸೆಕ್ಷನ್ 45 (1) ಅಡಿಯಲ್ಲಿ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಅನ್ನು ಅನುಮೋದಿಸಿದ್ದಾರೆ.
ಇದನ್ನೂ ಓದಿ: PM Modi Video: ಇಟಲಿಯ ಶೃಂಗಸಭೆಯಲ್ಲಿ ಪೋಪ್ ಫ್ರಾನ್ಸಿಸ್ ಅವರನ್ನು ಅಪ್ಪಿಕೊಂಡ ಪ್ರಧಾನಿ ಮೋದಿ
ಅರುಂಧತಿ ರಾಯ್ ಅವರು ತಮ್ಮ ಭಾಷಣದಲ್ಲಿ, ಕಾಶ್ಮೀರವು ಎಂದಿಗೂ ಭಾರತದ ಭಾಗವಾಗಿರಲಿಲ್ಲ. ಭಾರತದ ಸಶಸ್ತ್ರ ಪಡೆಗಳು ಬಲವಂತವಾಗಿ ಅದನ್ನು ಆಕ್ರಮಿಸಿಕೊಂಡಿದೆ ಎಂದು ಬಲವಾಗಿ ಪ್ರಚಾರ ಮಾಡಿದ್ದರು. ಭಾರತದಿಂದ ಜಮ್ಮು ಕಾಶ್ಮೀರದ ಸ್ವಾತಂತ್ರ್ಯಕ್ಕಾಗಿ ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಬೇಕು ಎಂದು ಹೇಳಿದ್ದರು. ದೂರುದಾರರು ಅದರ ಧ್ವನಿಮುದ್ರಣಗಳನ್ನು ಒದಗಿಸಿದ್ದರು. ಅದರಂತೆ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ