AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಮದ್ಯನೀತಿ ಪ್ರಕರಣ: ಸಿಎಂ ಅರವಿಂದ್​ ಕೇಜ್ರಿವಾಲ್​​ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು

ದೆಹಲಿ ಮದ್ಯನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​​​ ಅವರಿಗೆ ಮದ್ಯಂತಾರ ಜಾಮೀನು ನೀಡುವ ಬಗ್ಗೆ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್​​​ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿದೆ.

ದೆಹಲಿ ಮದ್ಯನೀತಿ ಪ್ರಕರಣ: ಸಿಎಂ ಅರವಿಂದ್​ ಕೇಜ್ರಿವಾಲ್​​ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು
ಅರವಿಂದ್ ಕೇಜ್ರಿವಾಲ್‌
ಅಕ್ಷಯ್​ ಪಲ್ಲಮಜಲು​​
|

Updated on:May 10, 2024 | 2:35 PM

Share

ದೆಹಲಿ, ಮೇ.10: ದೆಹಲಿ ಮದ್ಯನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​​​ (Arvind Kejriwal) ಅವರಿಗೆ ಮದ್ಯಂತಾರ ಜಾಮೀನು ನೀಡುವ ಬಗ್ಗೆ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್​​​ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿ. ಹಾಗೂ ಜೂನ್​​ ಎರಡಕ್ಕೆ ಶರಣಾಗುವಂತೆ ತಿಳಿಸಿದೆ.

ಲೋಕಸಭೆ ಚುನಾವಣೆಯ ನಡುವೆ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಬಿಗ್ ರಿಲೀಫ್ ಸಿಕ್ಕಿದೆ. ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರ ಪೀಠ ಶುಕ್ರವಾರ ಈ ತೀರ್ಪು ನೀಡಿದೆ. ದೆಹಲಿಯಲ್ಲಿ ಮೇ 25 ರಂದು ಆರನೇ ಹಂತದ ಮತದಾನ ನಡೆಯಲಿದೆ. ಇದಕ್ಕೂ ಮುನ್ನ ಕೇಜ್ರಿವಾಲ್‌ಗೆ ಜಾಮೀನು ಸಿಕ್ಕಿರುವುದು ಆಮ್ ಆದ್ಮಿ ಪಕ್ಷಕ್ಕೆ ದೊಡ್ಡ ಸಮಾಧನವನ್ನು ತಂದಿದೆ.

ಜಾಮೀನು ಸಿಕ್ಕ ನಂತರ ಕೇಜ್ರಿವಾಲ್ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಜೈಲಿನಿಂದ ಹೊರಬಂದ ನಂತರ ಕೇಜ್ರಿವಾಲ್ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಬಹುದು ಮತ್ತು ಪತ್ರಿಕಾಗೋಷ್ಠಿ ನಡೆಸಬಹುದು. ಹಾಗೂ ಕೇಜ್ರಿವಾಲ್ ಆಮ್ ಆದ್ಮಿ ಪಕ್ಷದ ಪ್ರಚಾರದಲ್ಲಿ ತಮ್ಮನ್ನು ತೋಡಗಿಸಿಕೊಳ್ಳಬಹುದು ಎಂದು ಹೇಳಲಾಗಿದೆ. ಮದ್ಯ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿತ್ತು, ಏಪ್ರಿಲ್ 1 ರಿಂದ ಇಲ್ಲಿಯವರೆಗೆ ತಿಹಾರ್ ಜೈಲಿನಲ್ಲಿ ಅವರನ್ನು ಇರಿಸಲಾಗಿತ್ತು.

ಅರವಿಂದ್​​​ ಅವರ ಬಿಡುಗಡೆಗಾಗಿ ಅನೇಕ ಕಾರ್ಯಕರ್ತರು ಸರ್ಕಾರ ಹಾಗು ಇಡಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಇಂದು ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್‌ನಿಂದ ರಿಲೀಫ್ ಸಿಕ್ಕಿದ್ದು, ಮುಖಂಡರು ಮತ್ತು ಕಾರ್ಯಕರ್ತರಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ. ಇಡಿ ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನಿನ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಹಲವಾರು ವಾದಗಳನ್ನು ಮಾಡಿತು. ಜಾಮೀನು ನೀಡದಂರೆ ವಾದಿಸಿತ್ತು. ಇತ್ತ ಅರವಿಂದ್​​ ಕ್ರೇಜಿವಾಲ್​​​ ಪರ ವಕೀಲರು ಕೂಡ ಸುಪ್ರೀಂನಲ್ಲಿ ವಾದಿಸಿದ್ದಾರೆ. ಇದಕ್ಕೂ ಮೊದಲು ಸುಪ್ರೀಂ ಈ ಬಗ್ಗೆ ವಿಚಾರಣೆ ನಡೆಸಿ ಆದೇಶವನ್ನು ಕಾಯ್ದಿರಿಸಿತ್ತು.

ಇದನ್ನೂ ಓದಿ: ಜೈಲಿನಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಸೌಲಭ್ಯಗಳನ್ನು ಕೋರಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್; ಅರ್ಜಿದಾರರಿಗೆ ₹1 ಲಕ್ಷ ದಂಡ

ಇಡಿ ಪರ ವಕೀಲರ ವಾದ ಆಲಿಸಲು ಬಾಕಿದ್ದ ಕಾರಣ ವಿಚಾರಣೆಯನ್ನು ಮುಂದಾಕ್ಕೆ ಹಾಕಿತ್ತು. ಇಡಿ ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನನ್ನು ನಿರಂತರವಾಗಿ ವಿರೋಧಿಸುತ್ತ ಬಂದಿದೆ. ಈ ಬಗ್ಗೆ ಗುರುವಾರ ತನಿಖಾ ಸಂಸ್ಥೆ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ.ಈ ಅಫಿಡವಿಟ್‌ನಲ್ಲಿ ಸಿಎಂ ಕೇಜ್ರಿವಾಲ್ ಅವರ ಅರ್ಜಿಯನ್ನು ವಿರೋಧಿಸಲಾಗಿದೆ. ಪ್ರಚಾರ ಮಾಡುವ ಹಕ್ಕು ಮೂಲಭೂತ, ಸಾಂವಿಧಾನಿಕ ಅಥವಾ ಕಾನೂನುಬದ್ಧ ಹಕ್ಕಲ್ಲ ಎಂದು ಅದು ಹೇಳುತ್ತದೆ. ಇಡಿ ಉಪ ನಿರ್ದೇಶಕಿ ಭಾನು ಪ್ರಿಯಾ ಈ ಅಫಿಡವಿಟ್ ಸಲ್ಲಿಸಿದ್ದಾರೆ. ಚುನಾವಣಾ ಪ್ರಚಾರದ ಆಧಾರದಲ್ಲಿ ಮಧ್ಯಂತರ ಪರಿಹಾರ ನೀಡಬಾರದು ಎಂದು ಭಾನು ಪ್ರಿಯಾ ಹೇಳಿದ್ದಾರೆ

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:20 pm, Fri, 10 May 24