AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Liquor Case: ಕೆ.ಕವಿತಾಗೆ ಇಡಿ ಸಮನ್ಸ್‌ ತಡೆ ನೀಡಲು ನಿರಾಕರಿಸಿದ ಸುಪ್ರೀಂ, ಮಾ. 24ಕ್ಕೆ ಅರ್ಜಿ ವಿಚಾರಣೆ

ದೆಹಲಿ ಮಧ್ಯನೀತಿ ಪ್ರಕರಣಕ್ಕೆ ಸಂಬಂಧಿದಂತೆ ಕೆ.ಕವಿತಾ ಅವರಿಗೆ ಇಡಿ ಸಮನ್ಸ್‌ಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ . ಮಾರ್ಚ್ 24 ರಂದು ಅರ್ಜಿಯನ್ನು ವಿಚಾರಣೆ

Delhi Liquor Case: ಕೆ.ಕವಿತಾಗೆ ಇಡಿ ಸಮನ್ಸ್‌ ತಡೆ ನೀಡಲು ನಿರಾಕರಿಸಿದ ಸುಪ್ರೀಂ, ಮಾ. 24ಕ್ಕೆ ಅರ್ಜಿ ವಿಚಾರಣೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Mar 15, 2023 | 2:12 PM

Share

ದೆಹಲಿ: ದೆಹಲಿ ಮಧ್ಯನೀತಿ ಪ್ರಕರಣಕ್ಕೆ (Delhi Liquor Case) ಸಂಬಂಧಿದಂತೆ ಕೆ.ಕವಿತಾ ಅವರಿಗೆ ಇಡಿ ಸಮನ್ಸ್‌ಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ . ಮಾರ್ಚ್ 24 ರಂದು ಅರ್ಜಿಯನ್ನು ವಿಚಾರಣೆ ಮಾಡುವಂತೆ ಸುಪ್ರೀಂ ಕೋರ್ಟ್ ಹೇಳಿದೆ. ಇದೀಗ ಕೆ.ಕವಿತಾ ನಾಳೆ ED ಮುಂದೆ ಹಾಜರಾಗಲಿದ್ದಾರೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ತನಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ನೀಡಿರುವುದನ್ನು ಪ್ರಶ್ನಿಸಿ ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಬಿಆರ್‌ಎಸ್ ಎಂಎಲ್‌ಸಿ ಕವಿತಾ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಬುಧವಾರ ಒಪ್ಪಿಕೊಂಡಿದೆ. ಆದರೆ ಈ ವಿಚಾರದಲ್ಲಿ ಆಕೆಗೆ ಮಧ್ಯಂತರ ಪರಿಹಾರ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಮಾರ್ಚ್ 24 ರಂದು ನ್ಯಾಯಾಲಯವು ಅವರ ಮನವಿಯನ್ನು ಆಲಿಸಲಿದೆ.

ಇದನ್ನೂ ಓದಿ: Delhi Liquor Policy Case: ದೆಹಲಿ ಅಬಕಾರಿ ನೀತಿ ಹಗರಣ: ತೆಲಂಗಾಣ ಸಿಎಂ ಪುತ್ರಿ ಕವಿತಾರ ಮಾಜಿ ಆಡಿಟರ್ ಬಂಧನ

ಪ್ರತಿಪಕ್ಷ ನಾಯಕರು ನವದೆಹಲಿಯ ಜಾರಿ ನಿರ್ದೇಶನಾಲಯದ ಕಚೇರಿಗೆ ತಮ್ಮ ಮೆರವಣಿಗೆಯನ್ನು ಪ್ರಾರಂಭಿಸಿದ ಕೆಲವೇ ಕ್ಷಣಗಳಲ್ಲಿ, ಪೊಲೀಸ್ ಅಧಿಕಾರಿಗಳು ವಿಜಯ್ ಚೌಕ್ ಪ್ರದೇಶದಲ್ಲಿ CrPC ಯ ಸೆಕ್ಷನ್ 144 ಅನ್ನು ವಿಧಿಸುತ್ತಿರುವುದಾಗಿ ಘೋಷಿಸಿದರು. ಅದಾನಿ ವಿಷಯದ ಕುರಿತು ತನಿಖಾ ಸಂಸ್ಥೆಗೆ ದೂರು ನೀಡಲು ವಿರೋಧ ಪಕ್ಷದ ನಾಯಕರು ಪ್ರತಿಭಟನಾ ಮೆರವಣಿಗೆಗೆ ಕರೆ ನೀಡಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:42 pm, Wed, 15 March 23

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್