AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಮದ್ಯ ನೀತಿ ಪ್ರಕರಣ: ಎಎಪಿ ಸಂಸದ ಸಂಜಯ್ ಸಿಂಗ್ ಜಾಮೀನು ಅರ್ಜಿ ವಜಾ

ಸಂಜಯ್​​​​ ಸಿಂಗ್​​​​ ಅವರ ಜಾಮೀನು ಅರ್ಜಿಯನ್ನು ಗುರುವಾರ ನ್ಯಾಯಾಲಯವು ವಿಚಾರಣೆಯನ್ನು ಮುಂದೂಡಿತ್ತು. ಡಿಸೆಂಬರ್​​​ 22ರಂದು ಅರ್ಜಿಯನ್ನು ವಿಚಾರ ಮಾಡುವುದಾಗಿ ಹೇಳಿತ್ತು. ಇದೀಗ ಅವರ ಜಾಮೀನು ಅರ್ಜಿಯನ್ನು ವಜಾ ಮಾಡಿದ್ದಾರೆ.

ದೆಹಲಿ ಮದ್ಯ ನೀತಿ ಪ್ರಕರಣ: ಎಎಪಿ ಸಂಸದ ಸಂಜಯ್ ಸಿಂಗ್ ಜಾಮೀನು ಅರ್ಜಿ ವಜಾ
ಸಂಜಯ್ ಸಿಂಗ್
ಅಕ್ಷಯ್​ ಪಲ್ಲಮಜಲು​​
|

Updated on:Dec 22, 2023 | 4:59 PM

Share

ದೆಹಲಿ, ಡಿ.22: ದೆಹಲಿ ಮದ್ಯ ನೀತಿಗೆ ಸಂಬಂಧಿಸಿದಂತೆ ಎಎಪಿ ನಾಯಕ ಸಂಜಯ್ ಸಿಂಗ್ (sanjay singh) ಅವರ ಜಾಮೀನು ಅರ್ಜಿಯನ್ನು ದೆಹಲಿ ಕೋರ್ಟ್​ ಇಂದು ವಜಾಗೊಳಿಸಿದೆ. ಮದ್ಯ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಅವರನ್ನು ಬಂಧಿಸಲಾಗಿತ್ತು. ವಿಶೇಷ ನ್ಯಾಯಾಧೀಶ ಎಂಕೆ ನಾಗ್ಪಾಲ್ ಅವರು ರಾಜ್ಯಸಭಾ ಸಂಸದ ಸಿಂಗ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದಾರೆ.

ಸಂಜಯ್​​​​ ಸಿಂಗ್​​​​ ಅವರ ಜಾಮೀನು ಅರ್ಜಿಯನ್ನು ಗುರುವಾರ ನ್ಯಾಯಾಲಯವು ವಿಚಾರಣೆಯನ್ನು ಮುಂದೂಡಿತ್ತು. ಡಿಸೆಂಬರ್​​​ 22ರಂದು ಅರ್ಜಿಯನ್ನು ವಿಚಾರ ಮಾಡುವುದಾಗಿ ಹೇಳಿತ್ತು. ಇನ್ನು ಈ ಪ್ರಕರಣದ ವಿಚಾರಣೆ ವೇಳೆ ಸಂಜಯ್​​​ ಸಿಂಗ್ ಅವರ ವಕೀಲರು ವಾದ ಮಂಡಿಸುವ ವೇಳೆ ಸಂಜಯ್​​​ ಸಿಂಗ್ ಅವರಿಗೆ ಲಂಚ ನೀಡುವ ಕುರಿತು ಆರೋಪಿ ದಿನೇಶ್ ಅರೋರಾ ಮತ್ತು ಇತರ ಸಾಕ್ಷಿಗಳ ಹೇಳಿಕೆಗಳಲ್ಲಿ ವಿರೋಧಾಭಾಸಗಳಿವೆ ಎಂದು ಹೇಳಿದರು.

ಇನ್ನು ಸಂಜಯ್​​​ ಸಿಂಗ್​​ ಅವರ ಜಾಮೀನಿ ಅರ್ಜಿಯನ್ನು ಇಡಿ ವಿರೋಧಿಸಿತ್ತು. ಈ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದರೆ ತನಿಖೆಗೆ ಅಡ್ಡಿಯಾಗಬಹುದು. ಸಾಕ್ಷಿಗಳನ್ನು ನಾಶ ಮಾಡಬಹುದು ಎಂದು ಇಡಿ ಹೇಳಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 4 ರಂದು ರಾಜ್ಯಸಭಾ ಸಂಸದ ಸಂಜಯ್​​ ಸಿಂಗ್ ಅವರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: ದೆಹಲಿ ಮದ್ಯ ನೀತಿ ಪ್ರಕರಣ: ಸಂಸದ ಸಂಜಯ್ ಸಿಂಗ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ

ಮದ್ಯ ತಯಾರಕರು, ಸಗಟು ವ್ಯಾಪಾರಿಗಳು ಮತ್ತು ಚಿಲ್ಲರೆ ವ್ಯಾಪಾರಿಗಳಿಗೆ ಲಾಭದಾಯಕವಾಗಿರುವ 2021-2022 ರ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿ ಪ್ರಮುಖ ಪಾತ್ರವಹಿಸಿದರು. ಆದರೆ ಈ ಬಗ್ಗೆ ಸಂಜಯ್​​​ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:55 pm, Fri, 22 December 23

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!