Liquor Policy Case: ಬಿಆರ್​ಎಸ್​ ನಾಯಕಿ ಕೆ ಕವಿತಾಗೆ ಏಪ್ರಿಲ್​ 9ರವರೆಗೆ ನ್ಯಾಯಾಂಗ ಬಂಧನ

ದೆಹಲಿ ಮದ್ಯನೀತಿ(Liquor Policy) ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಬಿಆರ್​ಎಸ್​ ನಾಯಕಿ ಕೆ ಕವಿತಾ ಅವರನ್ನು ದೆಹಲಿ ನ್ಯಾಯಾಲಯವು ಏಪ್ರಿಲ್​ 9ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿಯಾಗಿರುವ ಕೆ ಕವಿತಾ ಅವರನ್ನು ಮಾರ್ಚ್ 15 ರಂದು ಹೈದರಾಬಾದ್‌ನಿಂದ ಜಾರಿ ನಿರ್ದೇಶನಾಲಯವು ಬಂಧಿಸಿತ್ತು

Liquor Policy Case: ಬಿಆರ್​ಎಸ್​ ನಾಯಕಿ ಕೆ ಕವಿತಾಗೆ ಏಪ್ರಿಲ್​ 9ರವರೆಗೆ ನ್ಯಾಯಾಂಗ ಬಂಧನ
ಕೆ ಕವಿತಾ
Follow us
ನಯನಾ ರಾಜೀವ್
|

Updated on: Mar 26, 2024 | 2:21 PM

ದೆಹಲಿ ಮದ್ಯನೀತಿ(Liquor Policy) ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಬಿಆರ್​ಎಸ್​ ನಾಯಕಿ ಕೆ ಕವಿತಾ ಅವರನ್ನು ದೆಹಲಿ ನ್ಯಾಯಾಲಯವು ಏಪ್ರಿಲ್​ 9ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿಯಾಗಿರುವ ಕೆ ಕವಿತಾ ಅವರನ್ನು ಮಾರ್ಚ್ 15 ರಂದು ಹೈದರಾಬಾದ್‌ನಿಂದ ಜಾರಿ ನಿರ್ದೇಶನಾಲಯವು ಬಂಧಿಸಿತ್ತು. ಫೆಡರಲ್ ಏಜೆನ್ಸಿಯೊಂದಿಗೆ ಅವರ ಕಸ್ಟಡಿಯನ್ನು ಮಾರ್ಚ್ 23 ರಂದು ಇನ್ನೂ ಐದು ದಿನಗಳವರೆಗೆ ವಿಸ್ತರಿಸಲಾಗಿದ್ದು, ಇಂದಿಗೆ ಮುಕ್ತಾಯವಾಗುತ್ತದೆ.

ಆದರೆ ಜಾರಿ ನಿರ್ದೇಶನಾಲಯ ಮಧ್ಯಂತರ ಜಾಮೀನು ಅರ್ಜಿಯಲ್ಲಿ ಉತ್ತರ ನೀಡಲು ಕಾಲಾವಕಾಶ ಕೋರಿತ್ತು. ಕವಿತಾ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ದೆಹಲಿಯ ವಿಚಾರಣಾ ನ್ಯಾಯಾಲಯವು ಏಪ್ರಿಲ್ 1 ರಂದು ವಿಚಾರಣೆ ನಡೆಸಲಿದೆ. ಭಾರತ್ ರಾಷ್ಟ್ರ ಸಮಿತಿ (BRS) ನಾಯಕಿ ಕೆ.ಕವಿತಾ ಅವರು ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಸೇರಿದಂತೆ ಉನ್ನತ ನಾಯಕರೊಂದಿಗೆ ಸಂಚು ರೂಪಿಸಿ ಆಮ್ ಆದ್ಮಿ ಪಕ್ಷದ (AAP) ನಾಯಕರಿಗೆ 100 ಕೋಟಿ ರೂ. ಪಾವತಿಸಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿತ್ತು.

ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿಯನ್ನು ಕಳೆದ ವಾರ ಇಡಿ ಬಂಧಿಸಿದ್ದು, ಪ್ರಸ್ತುತ ಮಾರ್ಚ್ 23 ರವರೆಗೆ ಅವರು ಏಜೆನ್ಸಿಯ ವಶದಲ್ಲಿರಲಿದ್ದರು. ಇದಾದ ಬಳಿಕ ಕವಿತಾ ಮಗನ ಪರೀಕ್ಷೆಯ ಹೆಸರಿನಲ್ಲಿ ಮಧ್ಯಂತರ ಜಾಮೀನು ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯ ತನ್ನ ತೀರ್ಪನ್ನು ಕಾಯ್ದಿರಿಸಿದೆ. ಏಪ್ರಿಲ್​ 1ರಂದು ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ.

ಮತ್ತಷ್ಟು ಓದಿ: Arvind Kejriwal: ಇಡಿ ಕಸ್ಟಡಿಯಿಂದಲೇ ಎರಡನೇ ಸರ್ಕಾರಿ ಆದೇಶ ಹೊರಡಿಸಿದ ಸಿಎಂ ಅರವಿಂದ್ ಕೇಜ್ರಿವಾಲ್

ಮಾರ್ಚ್​ 15ರಂದು ದೆಹಲಿಯ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಹೈದರಾಬಾದ್​ನಲ್ಲಿ ಇಡಿ ಅಧಿಕಾರಿಗಳು ಕವಿತಾ ಮನೆ ಮೇಲೆ ದಾಳಿ ನಡೆಸಿ ಅವರನ್ನು ಬಂಧಿಸಿ, ವಿಚಾರಣೆಗಾಗಿ ದೆಹಲಿಗೆ ಕರೆತಂದಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ