Delhi Liquor Policy Case: ದೆಹಲಿ ಅಬಕಾರಿ ನೀತಿ ಹಗರಣ: ತೆಲಂಗಾಣ ಸಿಎಂ ಪುತ್ರಿ ಕವಿತಾರ ಮಾಜಿ ಆಡಿಟರ್ ಬಂಧನ

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಪುತ್ರಿ ಕವಿತಾ ಅವರ ಮಾಜಿ ಆಡಿಟರ್ ಬುಚ್ಚಿ ಬಾಬು ಅವರನ್ನು ಸಿಬಿಐ ಬಂಧಿಸಿದೆ.

Delhi Liquor Policy Case: ದೆಹಲಿ ಅಬಕಾರಿ ನೀತಿ ಹಗರಣ: ತೆಲಂಗಾಣ ಸಿಎಂ ಪುತ್ರಿ ಕವಿತಾರ ಮಾಜಿ ಆಡಿಟರ್ ಬಂಧನ
ಕೆಸಿಆರ್ ಪುತ್ರಿ ಕವಿತಾ
Follow us
ನಯನಾ ರಾಜೀವ್
|

Updated on:Feb 08, 2023 | 9:59 AM

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಪುತ್ರಿ ಕವಿತಾ ಅವರ ಮಾಜಿ ಆಡಿಟರ್ ಬುಚ್ಚಿ ಬಾಬು ಅವರನ್ನು ಸಿಬಿಐ ಬಂಧಿಸಿದೆ. ಇದಕ್ಕೂ ಮೊದಲು, ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸೆಂಬರ್ 12 ರಂದು ಹೈದರಾಬಾದ್‌ನಲ್ಲಿ ಸಿಬಿಐ ತಂಡವು ಕೆ ಕವಿತಾ ಅವರನ್ನು ಏಳು ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು. ಹೈದರಾಬಾದ್ ಮೂಲದ ಚಾರ್ಟರ್ಡ್​ ಅಕೌಂಟೆಂಟ್ ಬುಚ್ಚಿಬಾಬು ಗೋರಂಟ್ಲಾ ಎಂಬುವವರನ್ನು ಸಿಬಿಐ ಬಂಧಿಸಿದೆ. ಇದರಿಂದ ಸಗಟು ಹಾಗೂ ಚಿಲ್ಲರೆ ಪರವಾನಗಿದಾರರಿಗೆ ಹೊಸ ನೀತಿಯಿಂದಾಗಿ ಲಾಭ ಉಂಟು ಮಾಡಿಕೊಡಲಾಗಿದೆ.

2021-22ರ ದೆಹಲಿ ಮದ್ಯ ಮಾರಾಟ ನೀತಿಯಲ್ಲಿ ಅಕ್ರಮವಾಗಿ ಲೈಸೆನ್ಸ್ ಮತ್ತು ಮಾರಾಟದಲ್ಲಿ ಹೆಚ್ಚಿನ ಲಾಭವನ್ನು ದೊರಕಿಸಿಕೊಡಲಾಗಿದೆ ಎಂದು ಸಿಬಿಐ ಹೇಳಿದೆ.

ಆರ್ಥಿಕ ಅಪರಾಧಗಳ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ, ಕೆ ಕವಿತಾ ಅವರು ಮದ್ಯ ನೀತಿ ಪ್ರಕರಣದಲ್ಲಿ ಕಿಕ್‌ಬ್ಯಾಕ್‌ನಿಂದ ಲಾಭ ಪಡೆದ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ಪ್ರತಿನಿಧಿಯಾಗಿರುವ ರಾಜಧಾನಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಸಿಬಿಐ ತನಿಖೆಗೆ ಆದೇಶಿಸಿದ ನಂತರ ಎಎಪಿ ಸರ್ಕಾರವು ಕಳೆದ ವರ್ಷ ನೀತಿಯನ್ನು ಹಿಂಪಡೆದಿತ್ತು. ಸೌತ್ ಕಾರ್ಟೆಲ್ ನ ಭಾಗವಾಗಿದ್ದರು ಎಂದು ಆರೋಪಿಸಿದ್ದಾರೆ.

ಮತ್ತಷ್ಟು ಓದಿ: ದೆಹಲಿ ಅಬಕಾರಿ ನೀತಿ ಪ್ರಕರಣ: 8 ಆರೋಪಿಗಳ ವಿರುದ್ಧ ಲುಕೌಟ್ ಸುತ್ತೋಲೆ ಹೊರಡಿಸಿದ ಸಿಬಿಐ

ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಲ್ಲಿಸಿದ ಪೂರಕ ಚಾರ್ಜ್​ ಶೀಟ್​ ಅನ್ನು ದೆಹಲಿಯ ಅವೆನ್ಯೂ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ಪೂರಕ ಚಾರ್ಜ್​ ಶೀಟ್​ನಲ್ಲಿ ವಿಜಯ್ ನಾಯರ್, ಶರತ್​ ರೆಡ್ಡಿ, ಅಭಿಷೇಕ್ ಹಾಗೂ ಅಮಿತ್ ಅರೋರಾ ಹೆಸರಿದ್ದು, ಆದರೆ ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೆಸರು ಇರಲಿಲ್ಲ ಎಂಬುದು ತಿಳಿದುಬಂದಿದೆ.

ಪ್ರಕರಣದ ಎಲ್ಲಾ ಐದು ಆರೋಪಿಗಳಿಗೆ ಸಮನ್ಸ್ ನೀಡಿದ್ದು, ಫೆ.23ರಂದು ನ್ಯಾಯಾಲಯವು ಈ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ 2021-22ನೇ ಸಾಲಿನ ಅಬಕಾರಿ ನೀತಿಯನ್ನು ರೂಪಿಸಿತ್ತು. ಈ ವೇಳೆ 468 ಖಾಸಗಿ ಬಾರ್​ಗಳಿಗೆ ಅನುಮತಿ ನೀಡಲಾಗಿತ್ತು. ಆದರೆ ಈ ನೀತಿಯ ಜಾರಿಯ ವೇಳೆ ಹಲವಾರು ಅಕ್ರಮಗಳು ನಡೆದಿವೆ ಎಂದು ವಿಕೆ ಸಕ್ಸೇನಾ ಕಳೆದ ತಿಂಗಳು ಸಿಬಿಐಗೆ ಶಿಫಾರಸು ಮಾಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:59 am, Wed, 8 February 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ