AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಮದ್ಯ ನೀತಿ ಪ್ರಕರಣ: ಸಂಸದ ಸಂಜಯ್ ಸಿಂಗ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ

ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ ಸಂಜಯ್​​​​ ಸಿಂಗ್ ಅವರನ್ನು ಅಕ್ಟೋಬರ್‌ನಲ್ಲಿ ಇಡಿ ಮದ್ಯ ನೀತಿ ಪ್ರಕರಣದಲ್ಲಿ ಬಂಧಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಉದ್ಯಮಿ ದಿನೇಶ್ ಅರೋರಾ ರಾಜ್ಯಸಭಾ ಸಂಸದರ ನಿವಾಸದಲ್ಲಿ ಎರಡು ಹಂತಗಳಲ್ಲಿ ₹ 2 ಕೋಟಿ ನಗದು ನೀಡಿದ್ದಾರೆ ಎಂದು ಅಕ್ರಮ ಹಣ ವರ್ಗಾವಣೆ ತಡೆ ಸಂಸ್ಥೆ ಆರೋಪಿಸಿತ್ತು. ಆದರೆ ಈ ಆರೋಪವನ್ನು ಸಂಜಯ್​​​​ ಸಿಂಗ್ ತಳ್ಳಿಹಾಕಿದ್ದಾರೆ.

ದೆಹಲಿ ಮದ್ಯ ನೀತಿ ಪ್ರಕರಣ: ಸಂಸದ ಸಂಜಯ್ ಸಿಂಗ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ
ಅಕ್ಷಯ್​ ಪಲ್ಲಮಜಲು​​
|

Updated on:Dec 02, 2023 | 3:10 PM

Share

ದೆಹಲಿ, ಡಿ.2: ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ಸಂಸದ ಸಂಜಯ್ ಸಿಂಗ್ ವಿರುದ್ಧ ಜಾರಿ ನಿರ್ದೇಶನಾಲಯ ಶನಿವಾರ ಆರೋಪಪಟ್ಟಿ ಸಲ್ಲಿಸಿದೆ (ಚಾರ್ಜ್‌ಶೀಟ್) ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಸ್ಥಳೀಯ ನ್ಯಾಯಾಲಯದಲ್ಲಿ ಪ್ರಾಸಿಕ್ಯೂಷನ್ ದೂರನ್ನು ದಾಖಲಿಸಲಾಗಿದೆ. ಈ ಪ್ರಕರಣಕ್ಕೆ ಪೂರಕವಾದ ಆರೋಪಪಟ್ಟಿ ಇದಾಗಿದ್ದು, ಈ ಹಿಂದೆ ಇಂತಹ ಐದು ದೂರುಗಳನ್ನು ಸಂಸ್ಥೆ ಸಲ್ಲಿಸಿತ್ತು.

ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ ಸಂಜಯ್​​​​ ಸಿಂಗ್ ಅವರನ್ನು ಅಕ್ಟೋಬರ್‌ನಲ್ಲಿ ಇಡಿ ಈ ಪ್ರಕರಣದಲ್ಲಿ ಬಂಧಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಉದ್ಯಮಿ ದಿನೇಶ್ ಅರೋರಾ ರಾಜ್ಯಸಭಾ ಸಂಸದರ ನಿವಾಸದಲ್ಲಿ ಎರಡು ಹಂತಗಳಲ್ಲಿ ₹ 2 ಕೋಟಿ ನಗದು ನೀಡಿದ್ದಾರೆ ಎಂದು ಅಕ್ರಮ ಹಣ ವರ್ಗಾವಣೆ ತಡೆ ಸಂಸ್ಥೆ ಆರೋಪಿಸಿತ್ತು. ಆದರೆ ಈ ಆರೋಪವನ್ನು ಸಂಜಯ್​​​​ ಸಿಂಗ್ ತಳ್ಳಿಹಾಕಿದ್ದಾರೆ.

ಸಂಜಯ್​​​ ಸಿಂಗ್ 2021-22ರ ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಇಡಿ ಬಂಧಿಸಿದೆ ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ನಂತರ ಈ ಪ್ರಕರಣದಲ್ಲಿ ಬಂಧನವಾದ ಪ್ರಭಾವಿ ನಾಯಕ ಎಂದು ಹೇಳಲಾಗಿದೆ.

ಇದನ್ನೂ ಓದಿ:ದೆಹಲಿ ಮದ್ಯ ನೀತಿ ಪ್ರಕರಣ: ಸಂಜಯ್ ಸಿಂಗ್​​ಗೆ ಇಡಿ ಕಸ್ಟಡಿ ಅ.13ರವರೆಗೆ ವಿಸ್ತರಣೆ

ಇನ್ನು ಈ ಇಬ್ಬರ ಬಂಧನ ಮತ್ತು ಇಡಿ ದಾಳಿಯನ್ನು ದೆಹಲಿ ಸರ್ಕಾರ ಟೀಕಿಸಿದೆ, ಕೇಂದ್ರ ಸರ್ಕಾರದ ಏಜೆಂಟ್​​​ಗಳಂತೆ ತನಿಖಾ ಸಂಸ್ಥೆಗಳು ನಡೆದುಕೊಳ್ಳುತ್ತಿದೆ ಎಂದು ಹೇಳಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸೇರಿದಂತೆ ರಾಷ್ಟ್ರದ ಬೇರೆ ಬೇರೆ ರಾಜ್ಯಗಳ ಮೇಲೆ ದಾಳಿ ಮಾಡಿಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:03 pm, Sat, 2 December 23