Delhi liquor policy case: ಕೊನೆಗೂ ದೆಹಲಿ ನ್ಯಾಯಾಲಯಕ್ಕೆ ಹಾಜರಾದ ಸಿಎಂ ಅರವಿಂದ್​​​ ಕೇಜ್ರಿವಾಲ್

Arvind Kejriwal: ದೆಹಲಿ ಮದ್ಯ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೆಹಲಿ ಮುಖ್ಯಮಂತ್ರಿ ಅರವಿಂದ್​​​ ಕೇಜ್ರಿವಾಲ್​​​ ಅವರು ದೆಹಲಿ ಕೋರ್ಟ್​​ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದಾರೆ. ಕೇಜ್ರಿವಾಲ್​​ ಅವರಿಗೆ ಈ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಆರು ಬಾರಿ ಸಮನ್ಸ್​​​ ನೀಡಿತ್ತು.

Delhi liquor policy case: ಕೊನೆಗೂ ದೆಹಲಿ ನ್ಯಾಯಾಲಯಕ್ಕೆ ಹಾಜರಾದ ಸಿಎಂ ಅರವಿಂದ್​​​ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್ Image Credit source: Timesnow
Follow us
ಅಕ್ಷಯ್​ ಪಲ್ಲಮಜಲು​​
|

Updated on:Feb 17, 2024 | 2:46 PM

ದೆಹಲಿ, ಫೆ.17: ದೆಹಲಿ ಮುಖ್ಯಮಂತ್ರಿ ಅರವಿಂದ್​​​ ಕೇಜ್ರಿವಾಲ್ (Arvind Kejriwal) ಅವರು ಇಂದು (ಫೆ.17) ದೆಹಲಿ ನ್ಯಾಯಲಯಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದಾರೆ. ಮದ್ಯ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ನಡೆಸಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಸಿದಂತೆ ಕೇಜ್ರಿವಾಲ್ ಅವರಿಗೆ ಆರು ಬಾರಿ ಇಡಿ ಅವರಿಗೆ ಸಮನ್ಸ್​​​ ನೀಡಿತ್ತು ಒಂದಕ್ಕೂ ಉತ್ತರ ನೀಡಿಲ್ಲ. ಈ ಕಾರಣಕ್ಕೆ ಕೋರ್ಟ್​​​ ಅವರಿಗೆ ವಿಚಾರಣೆ ಬರುವಂತೆ ಆದೇಶವನ್ನು ನೀಡಿತ್ತು. ಕೋರ್ಟ್​​ ಆದೇಶದಂತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದಾರೆ. ದೆಹಲಿಯಲ್ಲಿ ವಿಧಾನಸಭೆ ಕಲಾಪ ನಡೆಯುತ್ತಿದ್ದು, ಇಂದು ವಿಶ್ವಾಸ ಮತಯಾಚನೆ ನಡೆಯಲಿದೆ. ಆ ಕಾರಣದಿಂದ ದೈಹಿಕವಾಗಿ ಸದನದಲ್ಲಿ ಹಾಜರಾಗಬೇಕು ಅದಕ್ಕಾಗಿ ಕೋರ್ಟ್​​ ವಿಚಾರಣೆಗೆ ಅವರು ವಿಡಿಯೋ ಕಾನ್ಫರೆನ್ಸ್ ಹಾಜರಾಗುತ್ತಿದ್ದಾರೆ ಎಂದು ಕೇಜ್ರಿವಾಲ್​​​ ಪರ ವಕೀಲರು ಹೇಳಿದ್ದಾರೆ.

ಮುಂದಿನ ಕೋರ್ಟ್​​ ವಿಚಾರಣೆಗೆ ದೈಹಿಕವಾಗಿ ಹಾಜರಾಗುವುದಾಗಿ ಹೇಳಿದ್ದಾರೆ. ಕೇಜ್ರಿವಾಲ್​​ ಅವರು ಈ ಮನವಿಯನ್ನು ಕೋರಿ ಕೋರ್ಟ್​​​ಗೆ ಅರ್ಜಿಯನ್ನು ಸಲ್ಲಿಸಲಾಗಿತ್ತು. ನ್ಯಾಯಲಯವು ಕೂಡ ಇದಕ್ಕೆ ಸಮ್ಮತಿಯನ್ನು ಸೂಚಿಸಿದೆ. ಈ ಹಿಂದೆ ಇಡಿ ನೀಡಿದ ಆರು ಸಮನ್ಸ್​​​ಗೆ ಉತ್ತರ ನೀಡದ ಕೇಜ್ರಿವಾಲ್​​​ ವಿರುದ್ಧ ಇಡಿ ಕೋರ್ಟ್​​ ಮೆಟ್ಟಿಲೇರಿತ್ತು. ಕೋರ್ಟ್​ ಈ ದೂರಿನ ಆಧಾರದ ಮೇಲೆ ಫೆ.16ಕ್ಕೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​​​ ನೀಡಿತ್ತು.

ಇಂದು ದೆಹಲಿ ವಿಧಾನಸಭೆಯಲ್ಲಿ ಕೇಜ್ರಿವಾಲ್​​​ ವಿಶ್ವಾಸಮತ ಯಾಚನೆ

ಅರವಿಂದ್​​​ ಕೇಜ್ರಿವಾಲ್​​ ಅವರು ಇಂದು ದೆಹಲಿ ವಿಧಾನಸಭೆಯ ಮುಂದೆ ತನ್ನ ಸರ್ಕಾರದ ಬಲವನ್ನು ಹಾಗೂ ವಿಶ್ವಾಸವನ್ನು ಮಂಡಿಸಲಿದ್ದಾರೆ. ವಿಶ್ವಾಸಮತ ಯಾಚನೆಗೆ ನೆನ್ನೆ (ಫೆ.16) ನಿರ್ಣಯವನ್ನು ಮಂಡಿಸಿದ್ದಾರೆ. ದೆಹಲಿಯಲ್ಲಿ ವಿಧಾಸಭೆ ಕಲಾಪ ನಡೆಯುತ್ತಿದ್ದು, ಬಜೆಟ್​​​ ಮಂಡನೆಗೂ ಮುನ್ನ ವಿಶ್ವಾಸಮತ ಯಾಚನೆ ನಡೆಸಲಿದ್ದಾರೆ ಎಂದು ಹೇಳಿದ್ದಾರೆ. ಈ ವಿಶ್ವಾಸಮತ ಯಾಚನೆಯ ಹಿಂದೆ ಕಾರಣ ಕೂಡ ಇದೆ. ಎಎಪಿ ಪಕ್ಷದ ಶಾಸಕರು ಹಾಗೂ ನಾಯಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ. ದೆಹಲಿ ಸರ್ಕಾರಕ್ಕೆ ಸರಿಯಾದ ಸಂಖ್ಯಾ ಬಲ ಇಲ್ಲ ಎಂಬ ಆರೋಪವನ್ನು ಮಾಡಲಾಗಿದೆ. ಎಎಪಿ ನಾಯಕರು ನಮ್ಮ ಜತೆಗೆ ಇದ್ದರೆ, ಹಾಗೂ ಸರ್ಕಾರಕ್ಕೆ ಸಂಪೂರ್ಣ ಬಲವಿದೆ ಎಂಬುದನ್ನು ಜನರ ಮುಂದೆ ಸಾಬೀತು ಮಾಡಬೇಕಿದೆ ಅದಕ್ಕಾಗಿ ವಿಶ್ವಾಸಮತ ಯಾಚನೆ ನಡೆಸಲಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಗೆ ನಿರ್ಣಯ ಮಂಡಿಸಿದ ಅರವಿಂದ್​​​ ಕೇಜ್ರಿವಾಲ್

ಕೇಜ್ರಿವಾಲ್, ಸಂಜಯ್ ಸಿಂಗ್ ವಿರುದ್ಧದ ಸಮನ್ಸ್ ರದ್ದುಗೊಳಿಸಲು ಹೈಕೋರ್ಟ್ ನಿರಾಕರಣೆ

ಪ್ರಧಾನಿ ನರೇಂದ್ರ ಮೋದಿಯವರ ಶೈಕ್ಷಣಿಕ ಪದವಿಗಳ ಬಗ್ಗೆ ಪ್ರಶ್ನಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಅಹಮದಾಬಾದ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಹೊರಡಿಸಿದ ಸಮನ್ಸ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಎರಡು ಅರ್ಜಿಗಳನ್ನು ಗುಜರಾತ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ನ್ಯಾಯಮೂರ್ತಿ ಎಚ್ ಡಿ ಸುತಾರ್ ಅವರ ನ್ಯಾಯಾಲಯವು ಅರ್ಜಿಗಳನ್ನು ವಜಾಗೊಳಿಸುವಾಗ, ಸಮನ್ಸ್ ರದ್ದುಗೊಳಿಸಲು ಕೇಜ್ರಿವಾಲ್ ಮತ್ತು ಸಿಂಗ್ ಅವರು ಉಲ್ಲೇಖಿಸಿದ ಕಾರಣಗಳನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ವಿಚಾರಣೆಯ ಸಮಯದಲ್ಲಿ ಸಲ್ಲಿಸಬಹುದು ಎಂದು ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:25 am, Sat, 17 February 24

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ