ದೆಹಲಿ ಮದ್ಯ ನೀತಿ ಪ್ರಕರಣ; ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಆಗಸ್ಟ್ 27ರವರೆಗೆ ವಿಸ್ತರಣೆ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ ಸಲ್ಲಿಸಿರುವ ಪೂರಕ ಆರೋಪಪಟ್ಟಿಯನ್ನು ಆಗಸ್ಟ್ 27ರಂದು ಪರಿಶೀಲಿಸಲು ನ್ಯಾಯಾಲಯ ಸಜ್ಜಾಗಿದೆ. ಈ ಆರೋಪಪಟ್ಟಿಯು ಮದ್ಯ ನೀತಿ ಪ್ರಕರಣದ ತನಿಖೆಯ ಭಾಗವಾಗಿದೆ.

ದೆಹಲಿ ಮದ್ಯ ನೀತಿ ಪ್ರಕರಣ; ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಆಗಸ್ಟ್ 27ರವರೆಗೆ ವಿಸ್ತರಣೆ
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
Follow us
ಸುಷ್ಮಾ ಚಕ್ರೆ
|

Updated on: Aug 20, 2024 | 3:54 PM

ನವದೆಹಲಿ: ಆಪಾದಿತ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿರುವ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಇಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಆಗಸ್ಟ್ 27ರವರೆಗೆ ವಿಸ್ತರಿಸಿದೆ. ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಅರವಿಂದ್ ಕೇಜ್ರಿವಾಲ್ ಅವರನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿದರು.

ಇದಕ್ಕೂ ಮೊದಲು ಆಗಸ್ಟ್ 14ರಂದು ಅರವಿಂದ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿತು. ತಮ್ಮ ಬಂಧನವನ್ನು ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ ಮನವಿಯ ಬಗ್ಗೆ ತನಿಖಾ ಸಂಸ್ಥೆಯಿಂದ ಪ್ರತಿಕ್ರಿಯೆಯನ್ನು ಕೋರಿತು. ಅರವಿಂದ್ ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರು, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 3 ಬಾರಿ ಮಧ್ಯಂತರ ಜಾಮೀನು ಪಡೆದಿದ್ದು, ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಜಾಮೀನು ನೀಡಲು ಕಠಿಣ ಷರತ್ತುಗಳನ್ನು ವಿಧಿಸಲಾಗಿದೆ.

ಇದನ್ನೂ ಓದಿ: ಈ ಬಂಧನ ಅಕ್ರಮವಲ್ಲ, ಅರವಿಂದ್​​ ಕೇಜ್ರಿವಾಲ್ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

ಈ ವಿಚಾರದಲ್ಲಿ ದೆಹಲಿ ಹೈಕೋರ್ಟ್ ಹೇಳಿದ್ದೇನು?:

ಆಗಸ್ಟ್ 5ರಂದು ದೆಹಲಿ ಹೈಕೋರ್ಟ್ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನವನ್ನು ಕಾನೂನುಬದ್ಧವೆಂದು ಎತ್ತಿಹಿಡಿದಿದೆ. ಕೇಂದ್ರೀಯ ತನಿಖಾ ದಳದ ಕ್ರಮಗಳಲ್ಲಿ ಯಾವುದೇ ದುರುದ್ದೇಶಗಳನ್ನು ತಳ್ಳಿಹಾಕಿತು. ಸಾಕ್ಷಿಗಳ ಮೇಲೆ ಮುಖ್ಯಮಂತ್ರಿಯ ಸಂಭಾವ್ಯ ಪ್ರಭಾವವನ್ನು ಸಿಬಿಐ ಯಶಸ್ವಿಯಾಗಿ ಪ್ರದರ್ಶಿಸಿದೆ ಎಂದು ನ್ಯಾಯಾಲಯ ಹೇಳಿದೆ. ಸಿಬಿಐ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯದಿಂದ ನಿಯಮಿತ ಜಾಮೀನು ಪಡೆಯಲು ನ್ಯಾಯಾಲಯವು ಮುಖ್ಯಮಂತ್ರಿಗೆ ಸೂಚಿಸಿದೆ. ಸಿಬಿಐನ ಕ್ರಮಗಳನ್ನು ಸಮರ್ಥನೀಯ ಮತ್ತು ಕಾನೂನುಬದ್ಧ ಎಂದು ಮಾನ್ಯ ಮಾಡಿದ ಹೈಕೋರ್ಟ್, ಮುಖ್ಯಮಂತ್ರಿ ಕೇಜ್ರಿವಾಲ್ ಅವರ ಬಂಧನದ ನಂತರ ಅವರ ವಿರುದ್ಧದ ಸಾಕ್ಷ್ಯವನ್ನು ಗಟ್ಟಿಗೊಳಿಸಿದೆ ಎಂದರು.

ಇದನ್ನೂ ಓದಿ: Arvind Kejriwal: ಅಬಕಾರಿ ನೀತಿ ಹಗರಣ, ಅರವಿಂದ್ ಕೇಜ್ರಿವಾಲ್​ಗೆ ಮಧ್ಯಂತರ ಜಾಮೀನು ನಿರಾಕರಿಸಿದ ಸುಪ್ರೀಂ

ಮಾರ್ಚ್ 21ರಂದು ಇಡಿಯಿಂದ ಬಂಧನಕ್ಕೊಳಗಾಗಿದ್ದ ಮುಖ್ಯಮಂತ್ರಿಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ ಜೂನ್ 20ರಂದು ಜಾಮೀನು ನೀಡಿತ್ತು. ಆದರೆ, ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಜುಲೈ 12ರಂದು ಇಡಿ ಸಲ್ಲಿಸಿದ್ದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅವರಿಗೆ ಮಧ್ಯಂತರ ಜಾಮೀನು ನೀಡಿತು. ಸಿಬಿಐ ಮತ್ತು ಇಡಿ ಪ್ರಕಾರ, ಅಬಕಾರಿ ನೀತಿಯನ್ನು ಮಾರ್ಪಡಿಸುವಾಗ ಅಕ್ರಮಗಳನ್ನು ಎಸಗಲಾಗಿದೆ ಮತ್ತು ಪರವಾನಗಿ ಹೊಂದಿರುವವರಿಗೆ ಅನಗತ್ಯವಾದ ಅನುಕೂಲಗಳನ್ನು ನೀಡಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ