ಮದ್ಯ ನೀತಿ ಪ್ರಕರಣ; 5 ತಿಂಗಳ ಬಳಿಕ ಕೊನೆಗೂ ಜೈಲಿನಿಂದ ಬಿಡುಗಡೆಯಾದ ಕವಿತಾ

|

Updated on: Aug 27, 2024 | 9:53 PM

ದೆಹಲಿಯ ಅಬಕಾರಿ ನೀತಿ ಪ್ರಕರಣದಲ್ಲಿ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂಎಲ್‌ಸಿ ಕೆ. ಕವಿತಾ ಅವರಿಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. 5 ತಿಂಗಳ ಬಳಿಕ ಕವಿತಾ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಸಂಭ್ರಮಾಚರಿಸಿದ್ದಾರೆ.

ಮದ್ಯ ನೀತಿ ಪ್ರಕರಣ; 5 ತಿಂಗಳ ಬಳಿಕ ಕೊನೆಗೂ ಜೈಲಿನಿಂದ ಬಿಡುಗಡೆಯಾದ ಕವಿತಾ
ಕವಿತಾ
Follow us on

ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಮಾರ್ಚ್‌ನಿಂದ ಜೈಲಿನಲ್ಲಿದ್ದ ಕೆ. ಕವಿತಾ ಇಂದು ಸಂಜೆ ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ತೆಲಂಗಾಣದ ರಾಜಕಾರಣಿ ಕವಿತಾ ಅವರಿಗೆ ಇಂದು ಬೆಳಗ್ಗೆ ಸುಪ್ರೀಂ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು. ಇಂದು ಸಂಜೆ ಅವರು ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

46 ವರ್ಷದ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಕವಿತಾ ಅವರ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಎರಡೂ ತನಿಖೆಯನ್ನು ಪೂರ್ಣಗೊಳಿಸಿರುವುದರಿಂದ ಅವರನ್ನು ಕಸ್ಟಡಿಯಲ್ಲಿ ಇಟ್ಟುಕೊಳ್ಳುವುದು ಇನ್ನು ಮುಂದೆ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.


ಇದನ್ನೂ ಓದಿ: K Kavitha: ದೆಹಲಿ ಅಬಕಾರಿ ನೀತಿ ಪ್ರಕರಣ: ಕವಿತಾಗೆ ಸುಪ್ರೀಂಕೋರ್ಟ್ ಜಾಮೀನು

ಜುಲೈ 1ರ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿದ ಪೀಠವು, ಪ್ರತಿಯೊಂದು ಪ್ರಕರಣದಲ್ಲಿ 10 ಲಕ್ಷ ರೂ. ಮೊತ್ತದ ಜಾಮೀನು ಬಾಂಡ್‌ಗಳನ್ನು ಒದಗಿಸುವ ಮೂಲಕ ಮೇಲ್ಮನವಿದಾರರಾದ ಕವಿತಾ ಅವರನ್ನು ಕೂಡಲೇ ಜಾಮೀನಿನ ಮೇಲೆ ಬಿಡುಗಡೆ ಮಾಡಲು ನಿರ್ದೇಶಿಸಲಾಗಿದೆ ಎಂದು ಹೇಳಿತ್ತು.


ಇದನ್ನೂ ಓದಿ: Viral News: ಮಹಿಳೆಗೆ ಕಣ್ಣು ಹೊಡೆದು, ಕೈ ಮುಟ್ಟಿದ ಯುವಕನಿಗೆ ಶಿಕ್ಷೆ ವಿಧಿಸಿದ ಕೋರ್ಟ್

ಕವಿತಾ ಅವರ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹ್ಟಗಿ, ಅವರ ವಿರುದ್ಧದ ತನಿಖೆ ಪೂರ್ಣಗೊಂಡಿದ್ದು, ಈಗಾಗಲೇ ಚಾರ್ಜ್ ಶೀಟ್ ಮತ್ತು ಪ್ರಾಸಿಕ್ಯೂಷನ್ ದೂರು ದಾಖಲಿಸಲಾಗಿದೆ ಎಂದು ವಾದಿಸಿದರು. ಎರಡು ಪ್ರಕರಣಗಳಲ್ಲಿ ಸಹ ಆರೋಪಿ ಮತ್ತು ಹಿರಿಯ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರಿಗೆ ಜಾಮೀನು ಮಂಜೂರು ಮಾಡುವ ಆಗಸ್ಟ್ 9ರ ಸುಪ್ರೀಂ ಕೋರ್ಟ್ ತೀರ್ಪನ್ನು ಅವರು ಉಲ್ಲೇಖಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ