ಮದ್ಯ ನೀತಿ ಪ್ರಕರಣದಲ್ಲಿ ಕೆಸಿಆರ್ ಪುತ್ರಿ ಕವಿತಾರನ್ನು ಶೀಘ್ರದಲ್ಲೇ ಬಂಧಿಸುವ ಸಾಧ್ಯತೆ: ಬಿಜೆಪಿ ನಾಯಕ

Delhi liquor policy case ಈ ಹಿಂದೆ, ಜಾರಿ ನಿರ್ದೇಶನಾಲಯವು ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್‌ಶೀಟ್‌ನಲ್ಲಿ ಕವಿತಾ ಅವರನ್ನು ಹೆಸರಿಸಿತ್ತು. ಅವರು ಮದ್ಯದ ಕಂಪನಿಯಲ್ಲಿ ಶೇಕಡಾ 65 ರಷ್ಟು ಪಾಲನ್ನು ಹೊಂದಿದ್ದಾರೆ ಎಂದು ಆರೋಪವಿದೆ.

ಮದ್ಯ ನೀತಿ ಪ್ರಕರಣದಲ್ಲಿ ಕೆಸಿಆರ್ ಪುತ್ರಿ ಕವಿತಾರನ್ನು ಶೀಘ್ರದಲ್ಲೇ ಬಂಧಿಸುವ ಸಾಧ್ಯತೆ: ಬಿಜೆಪಿ ನಾಯಕ
ಕೆ. ಕವಿತಾ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Feb 27, 2023 | 7:55 PM

ತಿರುಪತಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ (K Chandrasekhar Rao)ಅವರ ಪುತ್ರಿ ಕೆ ಕವಿತಾ (K Kavitha) ಅವರನ್ನು ಸಿಬಿಐ (CBI) ಶೀಘ್ರದಲ್ಲೇ ಬಂಧಿಸಲಿದೆ ಎಂದು ಬಿಜೆಪಿ (BJP) ನಾಯಕರೊಬ್ಬರು ಸೋಮವಾರ ಹೇಳಿದ್ದಾರೆ. ಇದೀಗ ರದ್ದುಗೊಂಡಿರುವ ಅಬಕಾರಿ ನೀತಿಗೆ ಸಂಬಂಧಿಸಿದ ಪ್ರಕರಣದಲ್ಲಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದ ಒಂದು ದಿನದ ನಂತರ ಭಾರತ್ ರಾಷ್ಟ್ರ ಸಮಿತಿ (BRS) ಎಂಎಲ್‌ಸಿ ಕವಿತಾ ಬಗ್ಗೆ ತೆಲಂಗಾಣ ಬಿಜೆಪಿ ನಾಯಕ ವಿವೇಕ್ ಹೇಳಿಕೆ ನೀಡಿದ್ದಾರೆ. ಮದ್ಯ ಹಗರಣದಲ್ಲಿ ಇನ್ನೂ ಕೆಲವರನ್ನು ಬಂಧಿಸುವ ಸಾಧ್ಯತೆಯಿದೆ. ಕವಿತಾ ಅವರನ್ನೂ ಶೀಘ್ರದಲ್ಲೇ ಬಂಧಿಸಲಾಗುವುದು” ಎಂದು ಬಿಜೆಪಿ ನಾಯಕ ಹೇಳಿದ್ದು, ಪಂಜಾಬ್ ಮತ್ತು ಗುಜರಾತ್ ಚುನಾವಣೆಯ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಕವಿತಾ ₹ 150 ಕೋಟಿ ನೀಡಿದ್ದರು ಎಂದು ಆರೋಪಿಸಿದ್ದಾರೆ.

ಈ ಹಿಂದೆ, ಜಾರಿ ನಿರ್ದೇಶನಾಲಯವು ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್‌ಶೀಟ್‌ನಲ್ಲಿ ಕವಿತಾ ಅವರನ್ನು ಹೆಸರಿಸಿತ್ತು. ಅವರು ಮದ್ಯದ ಕಂಪನಿಯಲ್ಲಿ ಶೇಕಡಾ 65 ರಷ್ಟು ಪಾಲನ್ನು ಹೊಂದಿದ್ದಾರೆ ಎಂದು ಆರೋಪವಿದೆ.

ಇದನ್ನೂ ಓದಿ: Manish Sisodia: ಮಾರ್ಚ್ 4ರವರೆಗೆ ಮನೀಶ್ ಸಿಸೋಡಿಯಾ ಸಿಬಿಐ ಕಸ್ಟಡಿಗೆ

ಕೆಸಿಆರ್ ನೇತೃತ್ವದ ಬಿಆರ್‌ಎಸ್ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದ ವಿವೇಕ್, ತೆಲಂಗಾಣ ರಾಜ್ಯದಲ್ಲಿ ಪಕ್ಷ ತನ್ನ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದರು. ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಆರಂಭಿಸಿದಾಗ ಪಕ್ಷಕ್ಕೆ ಹಣ ಇರಲಿಲ್ಲ. ಈಗ ಪಕ್ಷವು ದೇಶದ ಎಲ್ಲಾ ರಾಜಕೀಯ ಪಕ್ಷಗಳಿಗಿಂತ ಹೆಚ್ಚು ಠೇವಣಿ ಹೊಂದಿದೆ ಹಣದ ಮೂಲಗಳೇನು ಎಂದು ಪ್ರಶ್ನಿಸಿದ ಅವರು, ‘ಚುನಾವಣೆ ವೇಳೆ ನೀಡಿದ ಒಂದೇ ಒಂದು ಭರವಸೆಯನ್ನು ಕೆಸಿಆರ್ ಈಡೇರಿಸಿಲ್ಲ ಎಂದಿದ್ದಾರೆ.

ದೆಹಲಿಯಲ್ಲಿ ಈಗ ರದ್ದಾದ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಎಂಟು ಗಂಟೆಗಳ ಸುದೀರ್ಘ ವಿಚಾರಣೆಯ ನಂತರ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಭಾನುವಾರ ಸಿಬಿಐ ಬಂಧಿಸಿದ್ದು, ಮಾರ್ಚ್ 4ರ ವರೆಗೆ ಅವರು ಸಿಬಿಐ ಕಸ್ಟಡಿಯಲ್ಲಿರಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:54 pm, Mon, 27 February 23

‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು