ದೆಹಲಿ ಮದ್ಯ ನೀತಿ ಪ್ರಕರಣ: ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ ಕೇಜ್ರಿವಾಲ್

|

Updated on: Apr 10, 2024 | 9:33 AM

ಕೇಜ್ರಿವಾಲ್ ಅವರು ತಮ್ಮನ್ನು ಇಡಿ ಬಂಧಿಸಿರುವ ಬಗ್ಗೆ ಪ್ರಶ್ನಿಸಿ ದೆಹಲಿ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದರು. ಈ ಅರ್ಜಿಯನ್ನು ಹೈಕೋರ್ಟ್​​​ ತಿರಸ್ಕರಿಸಿದೆ. ಇದೀಗ ಹೈಕೋರ್ಟ್​​​ನ ಈ ಆದೇಶವನ್ನು ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದಾರೆ.

ದೆಹಲಿ ಮದ್ಯ ನೀತಿ ಪ್ರಕರಣ: ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ ಕೇಜ್ರಿವಾಲ್
Follow us on

ದೆಹಲಿ, ಎ.10: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ತಮ್ಮನ್ನು ಇಡಿ ಬಂಧಿಸಿರುವ ಬಗ್ಗೆ ಪ್ರಶ್ನಿಸಿ ದೆಹಲಿ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದರು. ಈ ಅರ್ಜಿಯನ್ನು ಹೈಕೋರ್ಟ್​​​ ತಿರಸ್ಕರಿಸಿದೆ. ಇದೀಗ ಹೈಕೋರ್ಟ್​​​ನ ಈ ಆದೇಶವನ್ನು ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದಾರೆ. ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ಇಡಿ ತನ್ನ ಬಂಧನವನ್ನು ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ತಿರಸ್ಕರಿಸಿತು. ಕೇಜ್ರಿವಾಲ್ ಅವರ ಬಂಧನವು ಕಾನೂನನ್ನು ಉಲ್ಲಂಘಿಸಿಲ್ಲ ಮತ್ತು ರಿಮಾಂಡ್ ಸೇರಿದಂತೆ ಕಾನೂನುಬಾಹಿರ ಎಂದು ಪರಿಗಣಿಸಲಾಗುವುದಿಲ್ಲ ಎಂದು ಹೈಕೋರ್ಟ್​​ ಹೇಳಿದೆ.​​

ಸುಪ್ರೀಂ ಕೋರ್ಟ್​​ನಲ್ಲಿ ಈ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸುವ ಹಕ್ಕು ಅರವಿಂದ್ ಕೇಜ್ರಿವಾಲ್ ಅವರಿಗೆ ಇದೆ ಎಂದು ದೆಹಲಿ ಸಿಎಂ ಪರ ವಕೀಲ ರಿಷಿಕೇಶ್ ಕುಮಾರ್ ಹೇಳಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರ ಅಕ್ರಮ ಬಂಧನವನ್ನು ನಾವು ಪ್ರಶ್ನಿಸಿದ್ದೇವೆ. ಹೈಕೋರ್ಟ್ ರಿಮಾಂಡ್ ಆದೇಶವು ಕಾನೂನುಬದ್ಧವಾಗಿದೆ ಎಂದು ಹೇಳಿದೆ. ಇಡಿಗೆ ಅವರನ್ನು ಬಂಧಿಸುವ ಅಧಿಕಾರ ಇದೆ. ಹಾಗಾಗಿ ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಸಲ್ಲಿಸಬಹುದು ಎಂದು ರಿಷಿಕೇಶ್ ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: ಕೇಜ್ರಿವಾಲ್​ಗೆ ಜೈಲೇ ಗತಿ; ಬಂಧನ ಕ್ರಮ ಪ್ರಶ್ನಿಸಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಹೈಕೋರ್ಟ್ ಆದೇಶದಲ್ಲಿ ಏನು ಹೇಳಿದೆ?

ದೆಹಲಿ ಸರ್ಕಾರದ ಹೊಸ ಅಬಕಾರಿ ನೀತಿಯ ಅಕ್ರಮದಲ್ಲಿ ಸಿಎಂ ಆಗಿ ಅರವಿಂದ್ ಕೇಜ್ರಿವಾಲ್ ಪಾತ್ರ ಗುರುತರವಾಗಿದೆ ಎನ್ನುವುದಕ್ಕೆ, ಮತ್ತು ಅಕ್ರಮದಿಂದ ಬಂದ ಲಾಭವನ್ನು ಮರೆಮಾಚುವ ಪ್ರಯತ್ನ ಮಾಡಿದ್ದರು ಎನ್ನುವುದಕ್ಕೆ ಇಡಿ ಬಲವಾದ ದಾಖಲೆಗಳನ್ನು ಹೊಂದಿದೆ. ಈ ಪ್ರಕರಣದಲ್ಲಿ ಕೇಜ್ರಿವಾಲ್ ಅವರು ವೈಯಕ್ತಿಕವಾಗಿಯೂ ಮತ್ತು ಎಎಪಿ ಪಕ್ಷದ ಸಂಚಾಲಕರಾಗಿಯೂ ಭಾಗಿಯಾಗಿದ್ದರು ಎಂಬುದು ತಿಳಿದುಬರುತ್ತದೆ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಚುನಾವಣೆಯ ಹೊಸ್ತಿಲಲ್ಲಿ ರಾಜಕೀಯ ಲಾಭಕ್ಕೋಸ್ಕರ ಬಂಧಿಸಲಾಗಿದೆ ಎನ್ನುವ ಕೇಜ್ರಿವಾಲ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಕೋರ್ಟ್, ‘ಅರ್ಜಿದಾರರು ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧಿತರಾಗಿದ್ದಾರೆ. ಚುನಾವಣಾ ಕಾಲವೋ ಇಲ್ಲವೋ ಆದರೆ, ಕಾನೂನು ಪ್ರಕಾರ ಅವರ ಬಂಧನ ಆಗಿದೆ ಎನ್ನುವುದನ್ನು ಮಾತ್ರ ಕೋರ್ಟ್ ಪರಿಗಣಿಸುತ್ತದೆ,’ ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಹೇಳಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ