ದೆಹಲಿ ಮದ್ಯ ನೀತಿ ಪ್ರಕರಣ: ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ಮೇ 30ರವರೆಗೆ ವಿಸ್ತರಣೆ

|

Updated on: May 15, 2024 | 11:10 AM

ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಉಪಮುಖ್ಯಮಂತ್ರಿ ಹಾಗೂ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಮೇ 30 ರವರೆಗೆ ವಿಸ್ತರಿಸಿದೆ.

ದೆಹಲಿ ಮದ್ಯ ನೀತಿ ಪ್ರಕರಣ: ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ಮೇ 30ರವರೆಗೆ ವಿಸ್ತರಣೆ
Follow us on

ದೆಹಲಿ, ಮೇ.15: ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಉಪಮುಖ್ಯಮಂತ್ರಿ ಹಾಗೂ ಎಎಪಿ ನಾಯಕ ಮನೀಶ್ ಸಿಸೋಡಿಯಾ (Manish Sisodia) ಅವರ ನ್ಯಾಯಾಂಗ ಬಂಧನವನ್ನು ಮೇ 30 ರವರೆಗೆ ದೆಹಲಿ ಕೋರ್ಟ್​ ವಿಸ್ತರಿಸಿದೆ.ರೂಸ್ ಅವೆನ್ಯೂ ನ್ಯಾಯಾಲಯವು ಈ ಆದೇಶವನ್ನು ನೀಡಿದೆ. ಮನೀಶ್ ಸಿಸೋಡಿಯಾ ಅವರ ಮೇಲೆ ದೆಹಲಿ ಮದ್ಯದ ಅಬಕಾರಿ ನೀತಿ 2021-22ರ ವಿರುದ್ಧ ಕೇಂದ್ರೀಯ ತನಿಖಾ ದಳವು ಪ್ರಕರಣ ದಾಖಲಿಸಿಕೊಂಡಿತ್ತು.

ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ಎಂದು ಅವರನ್ನು ಬಂಧಿಸಲಾಗಿತ್ತು. ಈ ಹಿಂದೆ ನೀಡಲಾಗಿದ್ದ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ನ್ಯಾಯಾಧೀಶ ಕಾವೇರಿ ಬವೇಜಾ ಸಿಸೋಡಿಯಾ ಅವರ ಕಸ್ಟಡಿಯನ್ನು ವಿಸ್ತರಿಸಿದ್ದಾರೆ.

ಇದನ್ನೂ ಓದಿ: ನಾನು ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ: ವಿವಾದಕ್ಕೆ ತೆರೆ ಎಳೆದ ಪ್ರಧಾನಿ ಮೋದಿ

ಇನ್ನು ಈ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ಅರುಣ್ ಪಿಳ್ಳೈ ಅವರು ಸಲ್ಲಿಸಿದ ಮೇಲ್ಮನವಿಯ ಆಧಾರದ ಮೇಲೆ ದೆಹಲಿ ಹೈಕೋರ್ಟ್ ನೀಡಿದ ನಿರ್ದೇಶನಗಳ ಪ್ರಕಾರ ಸಿಸೋಡಿಯಾ ವಿರುದ್ಧ ಆರೋಪಗಳನ್ನು ಸಾಬೀತುಪಡಿಸುವಂತೆ ನ್ಯಾಯಲಯ ಅವರ ಬಂಧನವನ್ನು ವಿಸ್ತರಿಸಿದೆ. ಜಾರಿ ನಿರ್ದೇಶನಾಲಯ (ಇಡಿ) ಕಳೆದ ವರ್ಷ ಮಾರ್ಚ್ 9 ರಂದು ಮದ್ಯ ನೀತಿ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿಯನ್ನು ಬಂಧಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:50 am, Wed, 15 May 24