Delhi Liquor Policy Scam: ಅರವಿಂದ್ ಕೇಜ್ರಿವಾಲ್‌ ಜಾಮೀನು ತಾತ್ಕಾಲಿಕ ತಡೆ ಹಿಡಿದ ಹೈಕೋರ್ಟ್

ದೆಹಲಿ ಮದ್ಯ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನ್ಯಾಯಾಲಯದ ಜಾಮೀನಿಂದ ನಿರಾಳವಾಗಿದ್ದ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್​ ಅವರಿಗೆ ದೆಹಲಿ ಹೈಕೋರ್ಟ್​ ಶಾಕ್​ ನೀಡಿದೆ. ಸ್ಥಳೀಯ ನ್ಯಾಯಾಲಯ ನೀಡಿದ ಜಾಮೀನಿಗೆ ಹೈಕೋರ್ಟ್​ ತಾತ್ಕಾಲಿಕ ತಡೆ ನೀಡಿದೆ.

Delhi Liquor Policy Scam: ಅರವಿಂದ್ ಕೇಜ್ರಿವಾಲ್‌ ಜಾಮೀನು ತಾತ್ಕಾಲಿಕ ತಡೆ ಹಿಡಿದ ಹೈಕೋರ್ಟ್
ಅರವಿಂದ್ ಕೇಜ್ರಿವಾಲ್
Follow us
ವಿವೇಕ ಬಿರಾದಾರ
|

Updated on:Jun 21, 2024 | 11:26 AM

ನವದೆಹಲಿ, ಜೂನ್​ 21: ದೆಹಲಿ ಮದ್ಯ ನೀತಿಗೆ (Delhi Liquor Policy) ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನ್ಯಾಯಾಲಯದ ಜಾಮೀನಿಂದ ನಿರಾಳವಾಗಿದ್ದ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್​ (Arvind Kejriwal) ಅವರಿಗೆ ದೆಹಲಿ ಹೈಕೋರ್ಟ್​ ಶಾಕ್​ ನೀಡಿದೆ. ಸ್ಥಳೀಯ ನ್ಯಾಯಾಲಯ ನೀಡಿದ ಜಾಮೀನಿಗೆ ಹೈಕೋರ್ಟ್​ ತಾತ್ಕಾಲಿಕ ತಡೆ ನೀಡಿದೆ.

ಜಾರಿ ನಿರ್ದೇಶನಾಲಯವು ಕೇಜ್ರಿವಾಲ್ ಅವರ ಜಾಮೀನನ್ನು ದೆಹಲಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಕೂಡಲೇ ಹೈಕೋರ್ಟ್‌ನಿಂದ ವಿಚಾರಣೆ ನಡೆಸಬೇಕು ಎಂದು ಇಡಿ ಆಗ್ರಹಿಸಿತ್ತು. ಇಡಿ ಅರ್ಜಿಯನ್ನು ಹೈಕೋರ್ಟ್ ಸ್ವೀಕರಿಸಿದೆ. ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಮಾರ್ಚ್ 21 ರಂದು ಬಂಧಿಸಿತ್ತು.

ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಮೇ 10 ರಂದು ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಜೂನ್ 2 ರಂದು ಅವರು ಸುಪ್ರೀಂ ಕೋರ್ಟ್‌ಗೆ ಶರಣಾಗಿದ್ದರು. ಶರಣಾಗುವ ಮುನ್ನ ಅರವಿಂದ್ ಕೇಜ್ರಿವಾಲ್ ಒಮ್ಮೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಕೇಜ್ರಿವಾಲ್ ಅವರು ತಮ್ಮ ಮಧ್ಯಂತರ ಜಾಮೀನನ್ನು ಏಳು ದಿನಗಳ ಕಾಲ ವಿಸ್ತರಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆದರೆ ನ್ಯಾಯಾಲಯ ಕೇಜ್ರಿವಾಲ್ ಮನವಿಯನ್ನು ತಿರಸ್ಕರಿಸಿತ್ತು.

ಇದನ್ನೂ ಓದಿ: ವಿಚಾರಣೆಗಾಗಿ ಮೋದಿ 12 ಗಂಟೆ ಕುಳಿತಿದ್ದರು; ಅರವಿಂದ ಕೇಜ್ರಿವಾಲ್ ವಿರುದ್ಧ ಗುಡುಗಿದ ಮೀನಾಕ್ಷಿ ಲೇಖಿ

ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಇ.ಡಿ. ಮಾರ್ಚ್ 21 ರಂದು ಬಂಧಿಸಿತ್ತು. ಇದಕ್ಕೂ ಮುನ್ನ 9 ಬಾರಿ ಸಮನ್ಸ್ ನೀಡಿದ್ದರೂ ಅ ವರು ತನಿಖಾ ಸಂಸ್ಥೆಯ ಮುಂದೆ ಹಾಜರಾಗಿರಲಿಲ್ಲ. ಇದಾದ ಬಳಿಕ ಅವರನ್ನು ಬಂಧಿಸಲಾಗಿತ್ತು. ಮಾರ್ಚ್ 22 ರಂದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಏಪ್ರಿಲ್ 1 ರಂದು ಅವರನ್ನು ತಿಹಾರ್ ಜೈಲಿಗೆ ಕಳುಹಿಸಲಾಯಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:20 am, Fri, 21 June 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ