ಅಬಕಾರಿ ನೀತಿ ಹಗರಣ: ಮಧ್ಯಂತರ ಜಾಮೀನು ಕೋರಿ ಮನೀಶ್ ಸಿಸೋಡಿಯಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ

ದೆಹಲಿಯ ಅಬಕಾರಿ ನೀತಿ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಕೋರಿ ಎಎಪಿ ನಾಯಕ ಮನೀಶ್ ಸಿಸೋಡಿಯಾ ಸಲ್ಲಿಸಿದ್ದ ಮನವಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ.

ಅಬಕಾರಿ ನೀತಿ ಹಗರಣ: ಮಧ್ಯಂತರ ಜಾಮೀನು ಕೋರಿ ಮನೀಶ್ ಸಿಸೋಡಿಯಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ
ಮನೀಶ್ ಸಿಸೋಡಿಯಾ

Updated on: Aug 04, 2023 | 11:51 AM

ದೆಹಲಿಯ ಅಬಕಾರಿ ನೀತಿ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಕೋರಿ ಎಎಪಿ ನಾಯಕ ಮನೀಶ್ ಸಿಸೋಡಿಯಾ(Manish Sisodia) ಸಲ್ಲಿಸಿದ್ದ ಮನವಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ. ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ಮಧ್ಯಂತರ ಜಾಮೀನು ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 4 ರವರೆಗೆ ಮುಂದೂಡಿದೆ. ಸಿಸೋಡಿಯಾ ಅವರು ಮಧ್ಯಂತರ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು, ತಮ್ಮ ಪತ್ನಿಯ ವೈದ್ಯಕೀಯ ಸ್ಥಿತಿಯನ್ನು ತನ್ನ ಬಿಡುಗಡೆಗೆ ಕಾರಣವೆಂದು ಉಲ್ಲೇಖಿಸಿದ್ದರು.

ಆದಾಗ್ಯೂ, ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌ವಿಎನ್ ಭಟ್ಟಿ ಅವರ ಪೀಠ, ಸಿಸೋಡಿಯಾ ಅವರ ಪತ್ನಿಯ ವೈದ್ಯಕೀಯ ದಾಖಲೆಗಳನ್ನು ಪರಿಶೀಲಿಸಿದ ನಂತರ, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: Manish Sisodia: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ, ಇತರ ಆರೋಪಿಗಳ ಆಸ್ತಿ ಜಪ್ತಿ

ಪ್ರಕರಣಗಳಲ್ಲಿ ಸಿಸೋಡಿಯಾ ಸಲ್ಲಿಸಿರುವ ಮಧ್ಯಂತರ ಜಾಮೀನು ಅರ್ಜಿಗಳಿಗೆ ತಮ್ಮ ಪ್ರತಿಕ್ರಿಯೆಯನ್ನು ನೀಡುವಂತೆ ಜುಲೈ 14 ರಂದು ಸುಪ್ರೀಂ ಕೋರ್ಟ್ ಸಿಬಿಐ ಮತ್ತು ಇಡಿಗೆ ಮನವಿ ಮಾಡಿತ್ತು.

ಮದ್ಯ ನೀತಿಯಲ್ಲಿನ ಅಕ್ರಮಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಸಿಬಿಐ ಫೆಬ್ರವರಿ 2 ರಂದು ದೆಹಲಿಯ ಉಪಮುಖ್ಯಮಂತ್ರಿ ಮತ್ತು ಅಬಕಾರಿ ಸಚಿವರಾಗಿದ್ದ ಸಿಸೋಡಿಯಾ ಅವರನ್ನು ಬಂಧಿಸಿತ್ತು. ಅಂದಿನಿಂದ ಅವರು ಬಂಧನದಲ್ಲಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:45 am, Fri, 4 August 23

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us