AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಅಬಕಾರಿ ಹಗರಣ: ಇಡಿ ವಶಕ್ಕೆ ವೈಎಸ್‌ಆರ್‌ ಕಾಂಗ್ರೆಸ್ ಸಂಸದನ ಪುತ್ರ, ಒಂದು ವಾರದಲ್ಲಿ 4ನೇ ಕಾರ್ಯಾಚರಣೆ

ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರ ಪುತ್ರಿ ಕೆ.ಕವಿತಾ ಅವರೊಂದಿಗೆ ಇವರೂ ಸಹ 'ಇಂಡೊಸ್ಪಿರಿಟ್' ಕಂಪನಿಯ ಮಾಲೀಕರಾಗಿದ್ದಾರೆ ಎಂದು ಇಡಿ ಶಂಕೆ ವ್ಯಕ್ತಪಡಿಸಿದೆ. ಮದ್ಯದ ವ್ಯಾಪಾರಿ ಅರುಣ್ ರಾಮಚಂದ್ರ ಪಿಳ್ಳೈ ಅವರೊಂದಿಗೆ ಕವಿತಾ ವ್ಯವಹಾರ ನಡೆಸುತ್ತಿದ್ದಾರೆ. ಈ ವ್ಯಕ್ತಿ ಕವಿತಾ ಅವರ ಬೇನಾಮಿಯಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ದೆಹಲಿ ಅಬಕಾರಿ ಹಗರಣ: ಇಡಿ ವಶಕ್ಕೆ ವೈಎಸ್‌ಆರ್‌ ಕಾಂಗ್ರೆಸ್ ಸಂಸದನ ಪುತ್ರ, ಒಂದು ವಾರದಲ್ಲಿ 4ನೇ ಕಾರ್ಯಾಚರಣೆ
ಆಂಧ್ರ ಪ್ರದೇಶದ ಓಂಗೋಲ್ ಕ್ಷೇತ್ರದ ಸಂಸದ ಶ್ರೀನಿವಾಸುಲು ರೆಡ್ಡಿ (ಬಲಚಿತ್ರ)
TV9 Web
| Updated By: Ganapathi Sharma|

Updated on: Feb 11, 2023 | 10:53 AM

Share

ಹೈದರಾಬಾದ್: ದೆಹಲಿ ಸರ್ಕಾರದ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (Enforcement Directorate – ED) ಅಧಿಕಾರಿಗಳು ವೈಎಸ್‌ಆರ್‌ ಕಾಂಗ್ರೆಸ್‌ನ ಒಂಗೋಲ್ ಕ್ಷೇತ್ರದ ಸಂಸದ (Ongole MP) ಶ್ರೀನಿವಾಸುಲು ರೆಡ್ಡಿ ಅವರ ಮಗ ರಾಘವ ರೆಡ್ಡಿಯನ್ನು ಬಂಧಿಸಿದ್ದಾರೆ. ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರ ಪುತ್ರಿ ಕೆ.ಕವಿತಾ ಅವರೊಂದಿಗೆ ಇವರೂ ಸಹ ‘ಇಂಡೊಸ್ಪಿರಿಟ್’ ಕಂಪನಿಯ ಮಾಲೀಕರಾಗಿದ್ದಾರೆ ಎಂದು ಇಡಿ ಶಂಕೆ ವ್ಯಕ್ತಪಡಿಸಿದೆ. ಮದ್ಯದ ವ್ಯಾಪಾರಿ ಅರುಣ್ ರಾಮಚಂದ್ರ ಪಿಳ್ಳೈ ಅವರೊಂದಿಗೆ ಕವಿತಾ ವ್ಯವಹಾರ ನಡೆಸುತ್ತಿದ್ದಾರೆ. ಈ ವ್ಯಕ್ತಿ ಕವಿತಾ ಅವರ ಬೇನಾಮಿಯಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ವ್ಯಾಪಾರಿಗಳಾದ ವಿಜಯ್ ನಾಯರ್, ಅಭಿಷೇಕ್ ಬೈಯಾನ್‌ಪಲ್ಲಿ, ಊತಾ ಗೌತಮ್ ಮತ್ತು ಸಮೀರ್ ಮಹೇಂದ್ರು ಅವರ ಮೇಲೆ ಸಿಬಿಐ ಕಳೆದ ವರ್ಷ ಚಾರ್ಜ್ ಶೀಟ್ ಹಾಕಿತ್ತು.

ಎರಡನೇ ಚಾರ್ಜ್‌ಶೀಟ್‌ನಲ್ಲಿ ಇಂಡೊಸ್ಪಿರಿಟ್ ಹೆಸರನ್ನು ಉಲ್ಲೇಖಿಸಲಾಗಿತ್ತು. ಈ ಕಂಪನಿಯ ಮೂಲಕ ನಡೆದಿರುವ ಹಣದ ವಹಿವಾಟಿನ ಬಗ್ಗೆಯೂ ಇಡಿ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ. ಸಮೀರ್ ಮಹೇಂದ್ರು ಇಂಡೊಸ್ಪಿರಿಟ್ ಕಂಪನಿಯ ಮಾಲೀಕರು ಎಂದು ಹೇಳಲಾಗುತ್ತಿದೆ. ಈ ಕಂಪನಿಯು ಮದ್ಯಸಾರ ಇರುವ ಪಾನೀಯಗಳ ಉತ್ಪಾದನೆ, ವಿತರಣೆ, ಆಮದು, ಮಾರ್ಕೆಟಿಂಗ್ ಮತ್ತು ಸರಬರಾಜು ಚಟುವಟಿಕೆಗಳಲ್ಲಿ ಸಕ್ರಿಯವಾಗಿದೆ.

‘ಕವಿತಾ ಮತ್ತು ಅರವಿಂದ ಕೇಜ್ರಿವಾಲ್ ನಡುವೆ 100 ಕೋಟಿ ರೂಪಾಯಿ ಕಿಕ್‌ಬ್ಯಾಕ್ ಒಪ್ಪಂದವಾಗಿದೆ. ಅದರಂತೆ ದೆಹಲಿಯ ಲಿಕ್ಕರ್ ವ್ಯಾಪಾರದಲ್ಲಿ ಇಂಡೊಸ್ಟಿರಿಟ್‌ಗೆ ಪ್ರವೇಶ ಸಿಗಲಿದೆ. ಇದರಿಂದ ಅರುಣ್ ಪಿಳ್ಳೈ ಅವರಿಗೆ, ತನ್ಮೂಲಕ ಕವಿತಾ ಅವರಿಗೆ ಅನುಕೂಲವಾಗಲಿದೆ’ ಎಂದು ಇಡಿ ತನ್ನ ಆರೋಪಪಟ್ಟಿಯಲ್ಲಿ ಉಲ್ಲೇಖಿಸಿತ್ತು.

ಇದನ್ನೂ ಓದಿ: Narendra Modi: ಇಂದಿನಿಂದ ಎರಡು ದಿನ ತ್ರಿಪುರಾದಲ್ಲಿ ಪ್ರಧಾನಿ ಮೋದಿ ಚುನಾವಣಾ ಪ್ರಚಾರ

ತನ್ನ 2ನೇ ಆರೋಪಪಟ್ಟಿಯಲ್ಲಿ ಇಂಡೊಸ್ಪಿರಿಟ್ ಕಂಪನಿಯನ್ನು ಉಲ್ಲೇಖಿಸಿದ ಬಳಿಕ ಇಡಿ ಹಣಕಾಸು ವ್ಯವಹಾರದ ಬೆನ್ನುಹತ್ತಿದೆ. ಇಂಡೊಸ್ಪಿರಿಟ್‌ನ ಮಾಲೀಕ ಎಂದು ಶಂಕಿಸಲಾಗಿರುವ ಸಮೀರ್ ಮಹೇಂದ್ರು ಅವರೊಂದಿಗೆ ಆಮ್ ಆದ್ಮಿ ಪಕ್ಷದ ಮಾಧ್ಯಮ ವಿಭಾಗದ ಮುಖ್ಯಸ್ಥ ವಿಜಯ್ ನಾಯರ್, ಅರಬಿಂದೋ ಫಾರ್ಮಾದ ಪಿ.ಶರತ್ ಚಂದ್ರ ರೆಡ್ಡಿ, ಪರ್‌ನಾಡ್ ರಿಚರ್ಡ್ಸ್‌ ಕಂಪನಿಯ ಬಿನಾಯ್ ಬಾಬು ಮತ್ತು ಬಡ್ಡಿ ರಿಟೇಲ್ ಲಿಮಿಟೆಡ್‌ನ ಅಮಿತ್ ಅರೋರ ಅವರ ಮೇಲೆ ಆರೋಪ ಹೊರಿಸಿದೆ.

ಈ ವಾರದ ಆರಂಭದಲ್ಲಿ ಹೈದರಾಬಾದ್‌ ಮೂಲಕ ಚಾರ್ಟೆಡ್ ಅಕೌಂಟೆಂಟ್ ಬುಚ್ಚಿಬಾಬು ಗೋರಂಟ್ಲಾ ಅವರನ್ನು ಸಿಬಿಐ ಬಂಧಿಸಿತ್ತು. ಇವರು ಬಿಆರ್‌ಎಸ್‌ ನಾಯಕಿ ಕೆ.ಕವಿತಾ ಅವರ ಹಣಕಾಸು ಲೆಕ್ಕಪತ್ರಗಳನ್ನು ನಿರ್ವಹಿಸುತ್ತಿದ್ದರು. ‘ದೆಹಲಿ ಅಬಕಾರಿ ನೀತಿ 2021-22’ರ ಮೂಲಕ ಹೈದರಾಬಾದ್‌ ಮೂಲಕ ಹೈದರಾಬಾದ್‌ ಮೂಲದ ಕಂಪನಿಗಳಿಗೆ ಸಾವಿರಾರು ಕೋಟಿ ಲಾಭವಾಗಿದೆ ಎಂದು ಸಿಬಿಐ ದೂರಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ