Delhi: ಇಡಿ ಕರೆಗೆ ಸ್ಪಂದಿಸದ ಕೇಜ್ರಿವಾಲ್​ಗೆ ಕೋರ್ಟ್​ನಿಂದಲೇ ಸಮನ್ಸ್; ಮಾರ್ಚ್ 16ಕ್ಕೆ ಹಾಜರಾಗಲು ಸೂಚನೆ

Court Asks Kejriwal To Appear On March 16th: ದೆಹಲಿ ಮದ್ಯ ನೀತಿಯಲ್ಲಿ ಅಕ್ರಮ ಆಗಿದೆ ಎಂದು ಆರೋಪಿಸಲಾಗಿರುವ ಪ್ರಕರಣ ಸಂಬಂಧ ಇಡಿ ವಿಚಾರಣೆಗೆ ಅರವಿಂದ್ ಕೇಜ್ರಿವಾಲ್ ಗೈರಾಗಿರುವ ಹಿನ್ನೆಲೆಯಲ್ಲಿ ರೋಸ್ ಅವೆನ್ಯೂ ಕೋರ್ಟ್​ನಿಂದ ಸಿಎಂಗೆ ಸಮನ್ಸ್ ಹೋಗಿದೆ. ಇಡಿ ನೀಡಿರುವ ದೂರಿನ ಮೇರೆಗೆ ಕೋರ್ಟ್ ಈ ಸಮನ್ಸ್ ನೀಡಿದ್ದು, ಮಾರ್ಚ್ 16ಕ್ಕೆ ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಿದೆ. ಈ ಪ್ರಕರಣದಲ್ಲಿ ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ, ಸಂಜಯ್ ಸಿಂಗ್ ಮೊದಲಾದವರು ಬಂಧಿತರಾಗಿ ಜೈಲಿನಲ್ಲಿದ್ದಾರೆ.

Delhi: ಇಡಿ ಕರೆಗೆ ಸ್ಪಂದಿಸದ ಕೇಜ್ರಿವಾಲ್​ಗೆ ಕೋರ್ಟ್​ನಿಂದಲೇ ಸಮನ್ಸ್; ಮಾರ್ಚ್ 16ಕ್ಕೆ ಹಾಜರಾಗಲು ಸೂಚನೆ
ಅರವಿಂದ್ ಕೇಜ್ರಿವಾಲ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 07, 2024 | 12:00 PM

ನವದೆಹಲಿ, ಮಾರ್ಚ್ 7: ಲಿಕ್ಕರ್ ನೀತಿ ಹಗರಣ ಸಂಬಂಧ ವಿಚಾರಣೆಗೆ ಇಡಿ ಬಾರಿ ಬಾರಿ ಸಮನ್ಸ್​ ನೀಡಿದರೂ ಸ್ಪಂದಿಸದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ಈಗ ಸ್ವತಃ ದೆಹಲಿ ಕೋರ್ಟ್​ನಿಂದಲೇ ಸಮನ್ಸ್ ಹೋಗಿದೆ. ಮಾರ್ಚ್ 16ಕ್ಕೆ ಕೋರ್ಟ್​ಗೆ ಹಾಜರಾಗಬೇಕೆಂದು ಕೋರ್ಟ್ ಸೂಚಿಸಿದೆ. ತಾನು ಎಂಟು ಬಾರಿ ಸಮನ್ಸ್ ನೀಡಿದರೂ ಕೇಜ್ರಿವಾಲ್ ಸ್ಪಂದಿಸುತ್ತಿಲ್ಲ ಎಂದು ಜಾರಿ ನಿರ್ದೇಶನಾಲಯವು (ED- Enforcement Directorate) ಕೋರ್ಟ್​ನಲ್ಲಿ ದೂರು ದಾಖಲಿಸಿತ್ತು. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಈ ಸಮನ್ಸ್ ಹೊರಡಿಸಿದೆ.

ದೆಹಲಿ ಸರ್ಕಾರದ ಮದ್ಯ ನೀತಿ ಹಗರಣ ಸಂಬಂಧ ವಿಚಾರಣೆ ನಡೆಸಲು ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ ಈವರೆಗೆ ಎಂಟು ಬಾರಿ ಸಮನ್ಸ್ ಕೊಟ್ಟಿದೆ. ಎಂಟು ಬಾರಿಯು ಅವರು ಸ್ಪಂದಿಸಿಲ್ಲ. ಮಾರ್ಚ್ 4ಕ್ಕೆ ಕೊನೆಯದಾಗಿ ಸಮನ್ಸ್ ಕೊಡಲಾಗಿತ್ತು. ಮೊದಲ ಮೂರು ಸಮನ್ಸ್​ಗೆ ದೆಹಲಿ ಸಿಎಂ ಸ್ಪಂದಿಸದೇ ಇದ್ದಾಗಲೇ ಸ್ಥಳೀಯ ಕೋರ್ಟ್​ವೊಂದರಲ್ಲಿ ಇಡಿ ದೂರು ಕೊಟ್ಟಿತ್ತು. ನಂತರದ ಐದು ಸಮನ್ಸ್​ಗಳಿಗೂ ಅವರು ಸ್ಪಂದಿಸುತ್ತಿಲ್ಲ ಎಂದು ಇಡಿ ಮತ್ತೊಮ್ಮೆ ದೂರು ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಮಾರ್ಚ್ 16ಕ್ಕೆ ತನ್ನಲ್ಲಿ ಹಾಜರಾಗುವಂತೆ ಕೇಜ್ರಿವಾಲ್​ಗೆ ತಿಳಿಸಿದೆ.

ಇದನ್ನೂ ಓದಿ: ಸಂದೇಶಖಾಲಿಯಲ್ಲಿ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರ ನೋವನ್ನು ತಂದೆಯಂತೆ ತಾಳ್ಮೆಯಿಂದ ಆಲಿಸಿದ ಮೋದಿ

ಸಮನ್ಸ್​ಗೆ ಸ್ಪಂದಿಸದ ಕೇಜ್ರಿವಾಲ್ ವಿರುದ್ಧ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲು ಅವಕಾಶ ನೀಡಬೇಕು ಎಂಬುದು ಇಡಿ ಒತ್ತಾಯವಾಗಿದೆ. ಆದರೆ, ಇಡಿ ಸಮನ್ಸ್ ಸರಿಯಾದ ಕ್ರಮದಲ್ಲಿ ಇಲ್ಲ. ಅಕ್ರಮವಾಗಿ ಸಮನ್ಸ್ ಕೊಡುತ್ತಿದೆ ಎಂಬುದು ಕೇಜ್ರಿವಾಲ್ ಆಕ್ಷೇಪಣೆ. ಹಾಗೆಯೇ, ಕೇಂದ್ರ ಸರ್ಕಾರ ಇಡಿ ಇತ್ಯಾದಿ ಸಂಸ್ಥೆಗಳ ಮೂಲಕ ಎದುರಾಳಿಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬುದು ಮುಖ್ಯಮಂತ್ರಿಗಳ ವಾದ.

ವಿಡಿಯೋ ಕಾನ್ಫೆರೆನ್ಸ್ ಮೂಲಕ ವಿಚಾರಣೆಗೆ ಕೇಜ್ರಿವಾಲ್ ಸಿದ್ಧ, ಆದರೆ…

ಪ್ರಕರಣದಲ್ಲಿ ವಿಡಿಯೋ ಕಾನ್ಫೆರೆನ್ಸ್ ಮೂಲಕ ತನ್ನನ್ನು ವಿಚಾರಣೆ ನಡೆಸುವುದಾದರೆ ತಾನು ಸಿದ್ಧ ಎಂದು ಅರವಿಂದ್ ಕೇಜ್ರಿವಾಲ್ ಹೇಳುತ್ತಿದ್ದಾರೆ. ಆದರೆ, ಕಾನ್ಫರೆನ್ಸ್ ಕಾಲ್ ಸರಿ ಹೋಗಲ್ಲ. ಆ ಪದ್ಧತಿ ಇಲ್ಲ. ಭೌತಿಕವಾಗಿ ತಾವು ವಿಚಾರಣೆಗೆ ಹಾಜರಾಗಬೇಕು ಎಂಬುದು ಇಡಿ ಅಧಿಕಾರಿಗಳು ಹಿಡಿದಿರುವ ಪಟ್ಟು. ಹೀಗಾಗಿ, ಇಡಿ ಅಧಿಕಾರಿಗಳಿಗೆ ಕೇಜ್ರಿವಾಲ್ ವಿಚಾರಣೆ ನಡೆಸಲು ಸಾಧ್ಯವಾಗಿಲ್ಲ.

ಇದನ್ನೂ ಓದಿ: ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿ ತೆಗೆದು ಹಾಕಿದ ಬಳಿಕ ಪ್ರಧಾನಿ ಮೋದಿ ಮೊದಲ ಭೇಟಿ

ಈ ಹಿಂದೆ ದೆಹಲಿಯ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಮತ್ತು ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರನ್ನು ಇಡಿ ವಿಚಾರಣೆ ನಡೆಸಿತ್ತು. ಅದಾದ ಬಳಿಕ ಇಬ್ಬರನ್ನೂ ಅದು ಬಂಧಿಸಿದೆ. ಈಗಲೂ ಅವರು ಜೈಲಿನಲ್ಲೇ ಇದ್ದಾರೆ. ತನ್ನನ್ನೂ ಇಡಿ ಜೈಲಿಗೆ ತಳ್ಳಬಹುದು ಎಂಬುದು ಕೇಜ್ರಿವಾಲ್ ಅವರಿಗೆ ಇರುವ ಭಯ.

‘ಯಾರು ಬಿಜೆಪಿಗೆ ಸೇರಲು ನಿರಾಕರಿಸುತ್ತಾರೋ ಅವರನ್ನು ಜೈಲಿಗೆ ಕಳುಹಿಸಲಾಗುತ್ತಿದೆ. ಸತ್ಯೇಂದರ್ ಜೈನ್, ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ಅವರು ಈಗ ಬಿಜೆಪಿ ಸೇರಿದರೆ ನಾಳೆಯೇ ಅವರಿಗೆ ಜಾಮೀನು ಸಿಗುತ್ತದೆ. ನಾನು ಕೂಡ ಇವತ್ತು ಬಿಜೆಪಿ ಸೇರಿದರೆ ಇಡಿಯಿಂದ ಸಮನ್ಸ್ ಬರುವುದು ನಿಂತುಹೋಗುತ್ತದೆ,’ ಎಂದು ಕೇಜ್ರಿವಾಲ್ ಆಕ್ರೋಶ ವ್ಯಕ್ತಪಡಿಸುತ್ತಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು