Arvind Kejriwal Gets Bail:ಮದ್ಯನೀತಿ ಹಗರಣ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್ನಿಂದ ಜಾಮೀನು
ಮದ್ಯನೀತಿ ಹಗರಣದಲ್ಲಿ ಜೈಲುಪಾಲಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಮದ್ಯನೀತಿ ಹಗರಣದಲ್ಲಿ ಜೈಲುಪಾಲಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Arvind Kejriwal)ಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ. 156 ದಿನಗಳ ನಂತರ ಸಿಎಂ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರ ಪೀಠ ಈ ತೀರ್ಪು ನೀಡಿದೆ.
ದೆಹಲಿ ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಈಗಾಗಲೇ ತನ್ನ ನಿರ್ಧಾರವನ್ನು ಕಾಯ್ದಿರಿಸಿತ್ತು, ನಂತರ ಚರ್ಚೆಯ ವೇಳೆ ಸಿಬಿಐ ಮತ್ತು ಕೇಜ್ರಿವಾಲ್ ತಮ್ಮ ತಮ್ಮ ವಾದ ಮಂಡಿಸಿದ್ದರು.
ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನು ಇಡಿ ಬಂಧಿಸಿತ್ತು. 10 ದಿನಗಳ ವಿಚಾರಣೆಯ ನಂತರ ಅವರನ್ನು ಏಪ್ರಿಲ್ 1 ರಂದು ತಿಹಾರ್ ಜೈಲಿಗೆ ಕಳುಹಿಸಲಾಯಿತು. ಮೇ 10 ರಂದು, ಅವರನ್ನು ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಚಾರಕ್ಕಾಗಿ 21 ದಿನಗಳ ಕಾಲ ಬಿಡುಗಡೆ ಮಾಡಲಾಗಿತ್ತು.
ಜೈಲಿನಲ್ಲಿ ಕಳೆದ ಒಟ್ಟು ಸಮಯ 177 ದಿನಗಳು, ಅದರಲ್ಲಿ 21 ದಿನಗಳನ್ನು ಕಳೆದರೆ ಕೇಜ್ರಿವಾಲ್ ಒಟ್ಟು 156 ದಿನಗಳ ಕಾಲ ಜೈಲಿನಲ್ಲಿದ್ದರು.
ಮತ್ತಷ್ಟು ಓದಿ:ಅಬಕಾರಿ ನೀತಿ ಪ್ರಕರಣ; ಸುಪ್ರೀಂ ಕೋರ್ಟ್ನಲ್ಲಿ ಇಂದು ಅರವಿಂದ್ ಕೇಜ್ರಿವಾಲ್ ಭವಿಷ್ಯ ನಿರ್ಧಾರ
ಕೇಜ್ರಿವಾಲ್ ಅವರು ನೇರವಾಗಿ ಜಾಮೀನಿಗಾಗಿ ದೆಹಲಿ ಹೈಕೋರ್ಟ್‌ಗೆ ಮೊರೆ ಹೋಗಿದ್ದರು ಮತ್ತು ನಂತರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಈಗ ರದ್ದಾದ ದೆಹಲಿ ಅಬಕಾರಿ ನೀತಿ 2021-22 ರಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಸಿಎಂ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿತ್ತು. ಜೂನ್ 26 ರಂದು ಅಬಕಾರಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿದ್ದಾಗ ಸಿಬಿಐ ಅವರನ್ನು ಬಂಧಿಸಿತ್ತು.
ಇಡಿ ಪ್ರಕಾರ, ಅಬಕಾರಿ ನೀತಿಯನ್ನು ಅಂತಿಮಗೊಳಿಸಲು ಕೇಜ್ರಿವಾಲ್ ನೇತೃತ್ವದ ಎಎಪಿ 100 ಕೋಟಿಗಳಷ್ಟು ಕಿಕ್‌ಬ್ಯಾಕ್ ಪಡೆದಿದೆ. ಈ ಹಣದ ದೊಡ್ಡ ಭಾಗವನ್ನು ಪಕ್ಷವು ತನ್ನ ಗೋವಾ ಚುನಾವಣಾ ಪ್ರಚಾರದಲ್ಲಿ ಬಳಸಿಕೊಂಡಿದೆ ಎಂದು ಆರೋಪಿಸಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:59 am, Fri, 13 September 24