AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬಕಾರಿ ನೀತಿ ಹಗರಣ ಪ್ರಕರಣ: ಕೇಜ್ರಿವಾಲ್ ಏ.15ರವರೆಗೆ ನ್ಯಾಯಾಂಗ ಬಂಧನ

ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಏ.15ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ದೆಹಲಿಯ ರೋಸ್‌ ಅವೆನ್ಯೂ ನ್ಯಾಯಾಲಯ ಆದೇಶ ಹೊರಡಿಸಿದೆ.

ಅಬಕಾರಿ ನೀತಿ ಹಗರಣ ಪ್ರಕರಣ: ಕೇಜ್ರಿವಾಲ್ ಏ.15ರವರೆಗೆ ನ್ಯಾಯಾಂಗ ಬಂಧನ
ಸಿಎಂ ಅರವಿಂದ್​ ಕೇಜ್ರಿವಾಲ್​
ವಿವೇಕ ಬಿರಾದಾರ
|

Updated on:Apr 01, 2024 | 12:46 PM

Share

ನವದೆಹಲಿ, ಏಪ್ರಿಲ್​ 01: ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Arvind Kejriwal) ಅವರನ್ನು ಏ.15ರವರೆಗೆ ನ್ಯಾಯಾಂಗ ಬಂಧನಕ್ಕೆ (Judicial custody) ನೀಡಿ ದೆಹಲಿಯ ರೋಸ್‌ ಅವೆನ್ಯೂ ನ್ಯಾಯಾಲಯ ಆದೇಶ ಹೊರಡಿಸಿದೆ. ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮಾರ್ಚ್​ 21 ರಂದು ಅರವಿಂದ್​ ಕೇಜ್ರಿವಾಲ್​ ಅವರನ್ನು ಬಂಧಿಸಿತ್ತು.

ಬಳಿಕ ಇಡಿ ಕೇಜ್ರಿವಾಲ್​ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿತ್ತು. ನ್ಯಾಯಾಲಯ ಮಾರ್ಚ್​ 28ರ ವರಗೆ ಇಡಿ ಕಸ್ಟಡಿಗೆ ನೀಡಿತ್ತು. ಮಾರ್ಚ್​ 28 ರಂದು ಇಡಿ ಕೇಜ್ರಿವಾಲ್​ ಅವರನ್ನು ಮತ್ತೆ ನ್ಯಾಯಾಲದ ಮುಂದೆ ಹಾಜರುಪಡಿಸಿ, ಇನ್ನೂ ಏಳು ದಿನ ನಮ್ಮ ಕಸ್ಟಡಿಗೆ ನೀಡಬೇಕೆಂದು ಇಡಿ ಕೋರಿತ್ತು. ಆದರೆ ನ್ಯಾಯಾಲಯ ಏ.01ರವರೆಗೆ ಇಡಿ ಕಸ್ಟಡಿಗೆ ನೀಡಿತ್ತು. ಇಂದು ಇಡಿ ಕಸ್ಟಡಿ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ನ್ಯಾಯಾಂಗದ ಮುಂದೆ ಹಾಜರು ಪಡಿಸಿತು. ರೋಸ್‌ ಅವೆನ್ಯೂ ನ್ಯಾಯಾಲಯ ಏ.15ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಬಂಗಲೆ ವಿವಾದ: ಸಿಬಿಐಯಿಂದ ಪ್ರಾಥಮಿಕ ತನಿಖೆ

ಡಿಜಿಟಲ್ ಸಾಧನಗಳ ಪಾಸ್‌ವರ್ಡ್‌ಗಳನ್ನು ಕೇಜ್ರಿವಾಲ್ ಅವರು ಇನ್ನೂ ನೀಡಿಲ್ಲ. ಕೇಜ್ರಿವಾಲ್ ಅವರ ನಡವಳಿಕೆಯು ಅಸಹಕಾರದಿಂದ ಕೂಡಿದೆ ಮತ್ತು ಅವರು ನಮ್ಮ ಪ್ರಶ್ನೆಗಳಿಗೆ ಅಸ್ಪಷ್ಟವಾಗಿ ಉತ್ತರಿಸುತ್ತಿದ್ದಾರೆ ಎಂದು ಜಾರಿ ನಿರ್ದೇಶನಾಲಯದ ಅಧಿಕರಿಗಳು ನ್ಯಾಯಾಲಯಕ್ಕೆ ಹೇಳಿದರು. ಅವರನ್ನು ಜೈಲಿಗೆ ಕಳುಹಿಸುವ ಮೊದಲು ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್, ಸಚಿವರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರನ್ನು ಭೇಟಿಯಾಗಲು ನ್ಯಾಯಾಲಯ ಅನುಮತಿ ನೀಡಿದೆ.

ಇನ್ನು ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿಗೆ ಕಳುಹಿಸುವ ಸಾಧ್ಯತೆ ಇದೆ. ಈ ಸಂಬಂಧ ಕಳೆದ ಎರಡು ದಿನಗಳಿಂದ ತಿಹಾರ್ ಜೈಲಿನಲ್ಲಿ ಉನ್ನತ ಮಟ್ಟದ ಸಭೆ ನಡೆಯುತ್ತಿವೆ ಎಂದು ವರದಿಯಾಗಿದೆ. ಕೇಜ್ರಿವಾಲ್ ಅವರನ್ನು ಯಾವ ಜೈಲಿನಲ್ಲಿ ಇರಿಸಬೇಕು? ಅವರ ಭದ್ರತಾ ವ್ಯವಸ್ಥೆಗಳ ಸಿದ್ಧತೆ ಹೇಗಿರಬೇಕು? ಈ ಬಗ್ಗೆ ಚರ್ಚೆ ನಡೆಯುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:16 pm, Mon, 1 April 24