ದೆಹಲಿಯ ಪಂಚತಾರಾ ಹೋಟೆಲ್‌ನಿಂದ ಹಾರಿ ವ್ಯಕ್ತಿ ಆತ್ಮಹತ್ಯೆ
ದೆಹಲಿಯ ಪಂಚತಾರಾ ಹೋಟೆಲ್‌ನಿಂದ ಕೆಳಗೆ ಹಾರಿ 50 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾರೆ. ಕೇಂದ್ರ ದೆಹಲಿಯ ಲಿ ಮೆರಿಡಿಯನ್‌ನಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆ ವ್ಯಕ್ತಿಯನ್ನು ಪರ್ವಿಂದರ್ ಸಿಂಗ್ ಜುನೇಜಾ ಎಂದು ಗುರುತಿಸಲಾಗಿದೆ. ಅವರು ಆತ್ಮಹತ್ಯೆ ಮಾಡಿಕೊಂಡ ಅದೇ ದಿನ ಹೋಟೆಲ್‌ಗೆ ಭೇಟಿ ನೀಡಿದ್ದರು. ಕ್ರಿಸ್‌ಮಸ್ ಸಮಯದಲ್ಲಿ ಅವರು ಕೆಲವು ದಿನಗಳ ಹಿಂದೆ ಅಲ್ಲಿಯೇ ತಂಗಿದ್ದರು. ಪ್ರಕರಣದ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ನವದೆಹಲಿ, ಜನವರಿ 04: ದೆಹಲಿಯ ಪಂಚತಾರಾ ಹೋಟೆಲ್‌ನಿಂದ ಕೆಳಗೆ ಹಾರಿ 50 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾರೆ. ಕೇಂದ್ರ ದೆಹಲಿಯ ಲಿ ಮೆರಿಡಿಯನ್‌ನಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆ ವ್ಯಕ್ತಿಯನ್ನು ಪರ್ವಿಂದರ್ ಸಿಂಗ್ ಜುನೇಜಾ ಎಂದು ಗುರುತಿಸಲಾಗಿದೆ. ಅವರು ಆತ್ಮಹತ್ಯೆ ಮಾಡಿಕೊಂಡ ಅದೇ ದಿನ ಹೋಟೆಲ್‌ಗೆ ಭೇಟಿ ನೀಡಿದ್ದರು. ಕ್ರಿಸ್‌ಮಸ್ ಸಮಯದಲ್ಲಿ ಅವರು ಕೆಲವು ದಿನಗಳ ಹಿಂದೆ ಅಲ್ಲಿಯೇ ತಂಗಿದ್ದರು. ಪ್ರಕರಣದ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಶನಿವಾರ ಮಧ್ಯಾಹ್ನ ಅವರು ಹೋಟೆಲ್‌ಗೆ ಪ್ರವೇಶಿಸಿ, ಲಿಫ್ಟ್ ಬಳಸಿ ಮೇಲಿನ ಮಹಡಿಗೆ ಹೋಗಿ ಕಟ್ಟಡದಿಂದ ಹಾರಿದ್ದಾರೆ. ಮಧ್ಯಾಹ್ನ ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದರು. ಸಿಂಗ್ ಸ್ಥಳದಲ್ಲೇ ಮೃತಪಟ್ಟರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಪರ್ವಿಂದರ್ ಸಿಂಗ್ ಎಂದು ಗುರುತಿಸಲಾದ ವ್ಯಕ್ತಿ ಲೆ ಮೆರಿಡಿಯನ್ ಹೋಟೆಲ್‌ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತನಿಖೆ ನಡೆಯುತ್ತಿದೆ, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ” ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಪಂಚತಾರಾ ಹೋಟೆಲ್‌ನ 12 ನೇ ಮಹಡಿಯಲ್ಲಿ ರೆಸ್ಟೋರೆಂಟ್ ಇದ್ದು, ಅಲ್ಲಿಂದ ಅವರು ಹಾರಿ ಸಾವನ್ನಪ್ಪಿದ್ದಾರೆ.ಈ ಘಟನೆ ಮಧ್ಯಾಹ್ನ 12.30 ರ ಸುಮಾರಿಗೆ ವರದಿಯಾಗಿದೆ.
ಮತ್ತಷ್ಟು ಓದಿ: ಆತ್ಮಹತ್ಯೆ ಮಾಡಿಕೊಳ್ಳಲು ಕಾಡಿಗೆ ಹೋದವನಿಗೆ ವಿಷ್ಣುವಿನ ದರ್ಶನ; ದೇವಾಲಯ ಕಟ್ಟಿ ಪೂಜಿಸಿದ ಬೀದರ್ನ ಜನ
ಮೃತರನ್ನು ನಗರದ ಲಜಪತ್ ನಗರದ ನಿವಾಸಿ ಪರ್ವಿಂದರ್ ಸಿಂಗ್ ಜುನೇಜಾ ಎಂದು ಗುರುತಿಸಲಾಗಿದೆ. ಜುನೇಜಾ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
