Delhi Municipal Corporation Election: ದೆಹಲಿ ಮಹಾನಗರ ಪಾಲಿಕೆ ಮತದಾನ ಆರಂಭ, ಚುನಾವಣಾ ಕರ್ತವ್ಯಕ್ಕಾಗಿ ಲಕ್ಷ ಸಿಬ್ಬಂದಿ ನಿಯೋಜನೆ

ದೆಹಲಿ ಎಂಸಿಡಿ ಚುನಾವಣೆಗೆ ಮತ ಚಲಾಯಿಸಲು ಕಾಂಗ್ರೆಸ್ ಮುಖಂಡ ಅಜಯ್ ಮಾಕೆನ್ ಅವರು ರಾಜೌರಿ ಗಾರ್ಡನ್‌ನಲ್ಲಿರುವ ಮತಗಟ್ಟೆಗೆ ಆಗಮಿಸಿದ್ದಾರೆ.

Delhi Municipal Corporation Election: ದೆಹಲಿ ಮಹಾನಗರ ಪಾಲಿಕೆ ಮತದಾನ ಆರಂಭ, ಚುನಾವಣಾ ಕರ್ತವ್ಯಕ್ಕಾಗಿ ಲಕ್ಷ ಸಿಬ್ಬಂದಿ ನಿಯೋಜನೆ
ಮತದಾನ ಮಾಡಿದ ಕಾಂಗ್ರೆಸ್ ಮುಖಂಡ ಅಜಯ್ ಮಾಕನ್
Updated By: ಆಯೇಷಾ ಬಾನು

Updated on: Dec 04, 2022 | 8:45 AM

MCD Elections 2o22: ದೆಹಲಿ ಮಹಾನಗರ ಪಾಲಿಕೆಯ 250 ವಾರ್ಡ್​ಗಳಿಗೆ ಇಂದು ಮತದಾನ ನಡೆಯುತ್ತಿದೆ. ಬೆಳಗ್ಗೆ 8ರಿಂದ ಸಂಜೆ 5.30ರವರೆಗೆ ಮತದಾನ ನಡೆಯಲಿದ್ದು ಈಗಾಗಲೇ ಅನೇಕರು ತಮ್ಮ ಮತ ಚಲಾಯಿಸಲು ಸರತಿ ಸಾಲಿನಲ್ಲಿ ನಿಂತಿದ್ದಾರೆ. ಮತದಾನ ಸ್ಥಳದಲ್ಲಿ ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ. 40 ಸಾವಿರ ಪೊಲೀಸರು, 20 ಸಾವಿರ ಹೋಮ್​ಗಾರ್ಡ್ಸ್, 108 ಕಂಪನಿಗಳ ಅರೆಸೇನಾಪಡೆ, ಸಶಸ್ತ್ರ ಮೀಸಲು ಪಡೆ ನಿಯೋಜನೆ ಮಾಡಲಾಗಿದೆ. ಹಾಗೂ ಸೂಕ್ಷ್ಮ & ಅತಿಸೂಕ್ಷ್ಮ ಪ್ರದೇಶಗಳಲ್ಲಿ ಡ್ರೋನ್​ ಮೂಲಕ ಕಣ್ಗಾವಲು ಇರಿಸಲಾಗಿದೆ.

ಎಂಸಿಡಿ ಚುನಾವಣೆಗೆ ಒಟ್ಟು 1,349 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಇಂದು ಮತದಾನಕ್ಕಾಗಿ 68 ಪಿಂಕ್ ಬೂತ್ ಸೇರಿದಂತೆ 13,655 ಬೂತ್​ಗಳ ಸ್ಥಾಪನೆ ಮಾಡಲಾಗಿದೆ. 1.46 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಚುನಾವಣಾ ಕರ್ತವ್ಯಕ್ಕಾಗಿ ಒಂದು ಲಕ್ಷ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಇನ್ನು ಮತದಾನದ ವೇಳೆ ಕೋಮು ಗಲಭೆ ನಡೆಯದಂತೆ ಎಚ್ಚರಿಕೆ ವಹಿಸುವುದು, ಅಭ್ಯರ್ಥಿಗಳು ಮತದಾರರಿಗೆ ಆಮಿಷವೊಡ್ಡದಂತೆ ತಡೆಯುವುದು ಪೊಲೀಸರು ಮುಖ್ಯ ಗುರಿಯಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಡಿಸೆಂಬರ್‌ 7ರಂದು ಮತಎಣಿಕೆ ನಡೆಯಲಿದೆ.

ಮತದಾರರು ಮತ ಚಲಾಯಿಸುವಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮನವಿ

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಮತ ಚಲಾಯಿಸುವಂತೆ ದೆಹಲಿಯ ಜನತೆಗೆ ಮನವಿ ಮಾಡಿದರು. ಈ ಕುರಿತು ಟ್ವೀಟ್ ಮಾಡಿರುವ ಕೇಜ್ರಿವಾಲ್, “ಇಂದು ದೆಹಲಿಯನ್ನು ಸ್ವಚ್ಛ ಮತ್ತು ಸುಂದರವಾಗಿಸಲು ಮತದಾನ ನಡೆಯುತ್ತಿದೆ, ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಭ್ರಷ್ಟಾಚಾರ ಮುಕ್ತ ಸರ್ಕಾರ ಮಾಡಲು ಮತದಾನ ನಡೆಯುತ್ತಿದೆ. ಇಂದು ನಿಮ್ಮ ಮತವನ್ನು ಚಲಾಯಿಸಲು ಹೋಗಿ ಎಂದು ಎಲ್ಲಾ ದೆಹಲಿಯ ಜನತೆಗೆ ಮನವಿ ಮಾಡಿದ್ದಾರೆ.

ಮತದಾನ ಮಾಡಿದ ಕಾಂಗ್ರೆಸ್ ಮುಖಂಡ ಅಜಯ್ ಮಾಕನ್

ದೆಹಲಿ ಎಂಸಿಡಿ ಚುನಾವಣೆಗೆ ಮತ ಚಲಾಯಿಸಲು ಕಾಂಗ್ರೆಸ್ ಮುಖಂಡ ಅಜಯ್ ಮಾಕೆನ್ ಅವರು ರಾಜೌರಿ ಗಾರ್ಡನ್‌ನಲ್ಲಿರುವ ಮತಗಟ್ಟೆಗೆ ಆಗಮಿಸಿದ್ದಾರೆ.

Published On - 8:41 am, Sun, 4 December 22