Dilli Ka Ladka: ಕೇಜ್ರಿವಾಲ್ ಸರ್ಕಾರದ ವೈಫಲ್ಯಗಳನ್ನು ತೋರಿಸಲು ಬಿಜೆಪಿಯಿಂದ ಕಾರ್ಟೂನ್ ಸರಣಿ ಬಿಡುಗಡೆ
ದೆಹಲಿಯಲ್ಲಿ ಎಂಸಿಡಿ ಚುನಾವಣೆಗೆ ಕೆಲವೇ ದಿನಗಳ ಮೊದಲು ಭಾರತೀಯ ಜನತಾ ಪಕ್ಷವು (ಬಿಜೆಪಿ) ರಾಜಧಾನಿಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಮೇಲೆ ಇನ್ನಷ್ಟು ದಾಳಿಗಳನ್ನು ಮುಂದುವರೆಸಿದೆ.
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಸರ್ಕಾರದ ವೈಫಲ್ಯಗಳನ್ನು ಬಹಿರಂಗಪಡಿಸುವ ಉದ್ದೇಶದಿಂದ ಬಿಜೆಪಿ ಭಾನುವಾರ ‘ದಿಲ್ಲಿ ಕಾ ಲಡ್ಕಾ’ (Dilli Ka Ladka) ಎಂಬ ಕಾರ್ಟೂನ್ ಸರಣಿಯನ್ನು ಬಿಡುಗಡೆ ಮಾಡಿದೆ. ದೆಹಲಿಯ ನಾಗರಿಕ ಸಂಸ್ಥೆ ಚುನಾವಣೆಗೆ (MCD) ಒಂದು ವಾರ ಮುಂಚಿತವಾಗಿ ಈ ಕಾರ್ಟೂನ್ ಬಿಡುಗಡೆ ಮಾಡಲಾಗಿದೆ.
ದೆಹಲಿಯಲ್ಲಿ ಎಂಸಿಡಿ ಚುನಾವಣೆಗೆ ಕೆಲವೇ ದಿನಗಳ ಮೊದಲು ಭಾರತೀಯ ಜನತಾ ಪಕ್ಷವು (ಬಿಜೆಪಿ) ರಾಜಧಾನಿಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಮೇಲೆ ಇನ್ನಷ್ಟು ದಾಳಿಗಳನ್ನು ಮುಂದುವರೆಸಿದೆ. ಕಾರ್ಟೂನ್ ಸರಣಿಯ ಹೊರತಾಗಿ ಜೈಲಿನಲ್ಲಿರುವ ಎಎಪಿ ನಾಯಕ ಸತ್ಯೇಂದ್ರ ಜೈನ್ ಅವರ ಮೇಲೆ ಬಿಜೆಪಿ ಹಲವಾರು ಅನಿಮೇಷನ್‌ಗಳು ಮತ್ತು ಕಾರ್ಟೂನ್‌ಗಳನ್ನು ಪೋಸ್ಟ್ ಮಾಡುತ್ತಿದೆ. ಜೈಲಿನೊಳಗೆ ಸತ್ಯೇಂದ್ರ ಜೈನ್ ಅವರಿಗೆ ವಿಶೇಷ ಚಿಕಿತ್ಸೆ ನೀಡಲಾಗುತ್ತಿದೆ ಎಂಬುದನ್ನು ಸಾಬೀತುಪಡಿಸುವ ಅನೇಕ ಸಿಸಿಟಿವಿ ವಿಡಿಯೋಗಳನ್ನು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಲಾಗುತ್ತಿದೆ.
ಇದನ್ನೂ ಓದಿ: ತಿಹಾರ್ ಜೈಲಿನಲ್ಲಿ ಆಪ್ ಸಚಿವ ಸತ್ಯೇಂದ್ರ ಜೈನ್‌ಗೆ ವಿಐಪಿ ಉಪಚಾರ; ಮಸಾಜ್ ಮಾಡಿಸಿಕೊಳ್ಳುತ್ತಿರುವ ವಿಡಿಯೋ ವೈರಲ್
ಒಂದು ದೃಶ್ಯದಲ್ಲಿ ವ್ಯಕ್ತಿಯೊಬ್ಬ ಸತ್ಯೇಂದ್ರ ಜೈನ್‌ಗೆ ತನ್ನ ಜೈಲಿನ ಕೊಠಡಿಯೊಳಗೆ ಕಾಲು ಮಸಾಜ್ ಮಾಡುವುದನ್ನು ಕಾಣಬಹುದು. ಆ ವ್ಯಕ್ತಿ ರಿಂಕು ಎಂದು ಹೇಳಲಾಗಿದ್ದು, ಆತ ತನ್ನ ಸ್ವಂತ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಖೈದಿಯಾಗಿದ್ದಾನೆ. ಈ ರೀತಿಯ ಇನ್ನೂ ಕೆಲವು ವಿಡಿಯೋಗಳು ಕೂಡ ವೈರಲ್ ಆಗಿವೆ.
गरीबों के सपने का सम्मान हुआ, जहां झुग्गी थी, वहां मकान हुआ। pic.twitter.com/1LBuuYzbFP
— BJP Delhi (@BJP4Delhi) November 27, 2022
ಈ ಕಾರ್ಟೂನ್ ಸರಣಿಯನ್ನು ಮತದಾನದ ಮೊದಲು ವೈರಲ್ ಮಾಡಲು ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಪೋಸ್ಟ್ ಮಾಡಲಾಗುತ್ತದೆ. ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (MCD)ಯ 250 ವಾರ್ಡ್‌ಗಳಿಗೆ ಡಿಸೆಂಬರ್ 4ರಂದು ಚುನಾವಣೆ ನಡೆಯಲಿದೆ.