ನವದೆಹಲಿ, ಜನವರಿ 05: ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ರವಿವಾರ (ಜ.05) ದೆಹಲಿ ಮೆಟ್ರೋದ ನಾಲ್ಕನೇ ಹಂತ (Delhi Metro 4th Phase) ಜನಕಪುರಿ ಮತ್ತು ಕೃಷ್ಣಾ ಪಾರ್ಕ್ ಮೆಟ್ರೋ ಮಾರ್ಗವನ್ನು ಉದ್ಘಾಟಿಸಲಿದ್ದಾರೆ. ಸುಮಾರು 1,200 ಕೋಟಿ ರೂ. ಮೌಲ್ಯದ ಯೋಜನೆ ಇದಾಗಿದೆ. ಇದೇ ವೇಳೆ, ದೆಹಲಿ ಮೆಟ್ರೋ 4ನೇ ಹಂತದ 26.5 ಕಿಲೋಮೀಟರ್ ರಿಥಾಲಾ-ಕುಂಡ್ಲಿ ಮಾರ್ಗಕ್ಕೆ ಶಂಕುಸ್ಥಾಪನೆ ನೆರವೇರಿಸುತ್ತಾರೆ. ಇದರ ಅಂದಾಜು ವೆಚ್ಚ 6,230 ಕೋಟಿ ರೂ. ಆಗಿದೆ. ಹೊಸ ಕಾರಿಡಾರ್ ದೆಹಲಿಯ ರಿಥಾಲಾವನ್ನು ಹರಿಯಾಣದ ನಾಥುಪುರ್ (ಕುಂಡ್ಲಿ) ಗೆ ಸಂಪರ್ಕಿಸುತ್ತದೆ.
ನರೇಂದ್ರ ಮೋದಿ ಪ್ರಧಾನಿಯಾದ ನಂತರ ದೇಶದ 23 ನಗರಗಳಲ್ಲಿ ಒಟ್ಟು 1000 ಕಿಮೀನಷ್ಟು ಮೆಟ್ರೋ ರೈಲು ಸಂಚರಿಸುತ್ತಿದೆ. ಈ ಮೂಲಕ ಭಾರತವು ವಿಶ್ವದ 3ನೇ ಅತಿದೊಡ್ಡ ಮೆಟ್ರೋ ಮಾರ್ಗ ಹೊಂದಿದ ದೇಶವಾಗಿ ಹೊರಹೊಮ್ಮಿದೆ. ಚೀನಾ ಮತ್ತು ಅಮೆರಿಕದ ನಂತರ ಭಾರತ ವಿಶ್ವದ ಮೂರನೇ ಅತಿದೊಡ್ಡ ಮೆಟ್ರೋ ರೈಲು ಮಾರ್ಗವನ್ನು ಹೊಂದಿರುವ ದೇಶವಾಗಿದೆ.
2014ರಲ್ಲಿ ದೇಶದ ಐದು ನಗರಗಳಲ್ಲಿ 248 ಕಿಮೀ ಮಾತ್ರ ಮೆಟ್ರೋ ರೈಲು ಸಂಚರಿಸುತ್ತಿತ್ತು. 10 ವರ್ಷಗಳ ನಂತರ ಅಂದರೆ 2025ರ ಹೊತ್ತಿಗೆ ನಾಲ್ಕು ಪಟ್ಟು ಹೆಚ್ಚಾಗಿದ್ದು, 23 ನಗರಗಳಲ್ಲಿ 1000 ಕಿಮೀ ಮೆಟ್ರೋ ರೈಲು ಸಂಚರಿಸುತ್ತಿದೆ. 26 ನಗರಗಳಲ್ಲಿ 1000 ಕಿಮೀ ಮೆಟ್ರೋ ಕಾಮಗಾರಿ ಪ್ರಗತಿಯಲ್ಲಿದೆ.
दिल्ली-एनसीआर के लिए आज का दिन बेहद महत्वपूर्ण है। आज पहली बार जहां नमो भारत ट्रेन राजधानी में प्रवेश करेगी, वहीं दिल्ली मेट्रो के विस्तार सहित कई विकास परियोजनाओं के उद्घाटन और शिलान्यास का सुअवसर मिलेगा।#MetroRevolutionInIndia pic.twitter.com/Xe5nUsQMcR
— Narendra Modi (@narendramodi) January 5, 2025
ಇದನ್ನೂ ಓದಿ: ರಷ್ಯಾ-ಉಕ್ರೇನ್ ಕದನ ವಿರಾಮಕ್ಕೆ ಭಾರತ ಮಧ್ಯಸ್ಥಿಕೆ ವಹಿಸುವ ಸಾಧ್ಯತೆ
ಪ್ರಧಾನಿ ಮೋದಿ ರವಿವಾರ ಒಟ್ಟು 12,200 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟನೆ ಮಾಡಲಿದ್ದು, ಕೆಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಭಾರತದಲ್ಲಿ ಮೆಟ್ರೊ ನಿರ್ಮಾಣಕ್ಕೆ ಪ್ರತಿ ಕಿಲೋಮೀಟರ್‌ಗೆ ಸರಾಸರಿ 407 ಕೋಟಿ ರೂ. ತಗಲುತ್ತದೆ ಎಂದು ವರದಿಯಾಗಿದೆ. ಭಾರತೀಯ ಮೆಟ್ರೋಗಳಲ್ಲಿ ಪ್ರತಿದಿನ 10 ಮಿಲಿಯನ್ ಪ್ರಯಾಣಿಕರು ಸಂಚರಿಸುತ್ತಾರೆ ಎಂದು ತಿಳಿದುಬಂದಿದೆ.
ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:27 am, Sun, 5 January 25