ದೆಹಲಿ: ನಜಾಫ್​ಗಢ ಮೆಟ್ರೋ ನಿಲ್ದಾಣದಲ್ಲಿ ವೇಗವಾಗಿ ಬರುತ್ತಿದ್ದ ರೈಲಿನ ಮುಂದೆ ಹಾರಿ ವ್ಯಕ್ತಿ ಆತ್ಮಹತ್ಯೆ

ದೆಹಲಿಯ ನಜಾಫ್​ಗಢ ಮೆಟ್ರೋ ನಿಲ್ದಾಣದಲ್ಲಿ ವೇಗವಾಗಿ ಬರುತ್ತಿದ್ದ ರೈಲಿನ ಮುಂದೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದೆಹಲಿ: ನಜಾಫ್​ಗಢ ಮೆಟ್ರೋ ನಿಲ್ದಾಣದಲ್ಲಿ ವೇಗವಾಗಿ ಬರುತ್ತಿದ್ದ ರೈಲಿನ ಮುಂದೆ ಹಾರಿ ವ್ಯಕ್ತಿ ಆತ್ಮಹತ್ಯೆ
ದೆಹಲಿ ಮೆಟ್ರೋ

Updated on: Jul 31, 2023 | 2:40 PM

ದೆಹಲಿಯ ನಜಾಫ್​ಗಢ ಮೆಟ್ರೋ ನಿಲ್ದಾಣದಲ್ಲಿ ವೇಗವಾಗಿ ಬರುತ್ತಿದ್ದ ರೈಲಿನ ಮುಂದೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಮವಾರ ಬೆಳಗ್ಗೆ 9.26ರ ಸುಮಾರಿಗೆ ನಜಾಫ್​ಗಢದಲ್ಲಿ ಯುವಕನೊಬ್ಬ ಮೆಟ್ರೋ ಮುಂದೆ ಜಿಗಿದಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಮೃತರನ್ನು 31 ವರ್ಷದ ಮನೀಶ್ ಕುಮಾರ್ ಎಂದು ಗುರುತಿಸಲಾಗಿದೆ. ಅವರು ಗ್ರಂಥ ಪಾಲಕರಾಗಿದ್ದರು.

ನಜಾಫ್​ಗಢದ ಪ್ರೇಮ್​ ನಗರದಲ್ಲಿ ವಾಸಿಸುತ್ತಿದ್ದರು, ಆತ ಮೆಟ್ರೋ ಎದುರು ಹಾರುವಾಗ ತಕ್ಷಣ ಮೆಟ್ರೋವನ್ನು ನಿಲ್ಲಿಸಲಾಯಿತು ಅಷ್ಟರೊಳಗೆ ರೈಲು ಆತನ ಮೇಲೆ ಹರಿದಿತ್ತು. ಫೋರೆನ್ಸಿಕ್ ಸಿಬ್ಬಂದಿ ಪ್ರದೇಶವನ್ನು ಪರಿಶೀಲಿಸುತ್ತಿದ್ದಾರೆ.

ಈ ಮಾರ್ಗದಲ್ಲಿ ರೈಲು ಸೇವೆಗಳು ಹಾನಿಗೊಳಗಾದವು ಆದರೆ ಘಟನೆಯ 15-20 ನಿಮಿಷಗಳಲ್ಲಿ ಮರುಸ್ಥಾಪಿಸಲಾಗಿದೆ ಎಂದು ದೆಹಲಿ ಮೆಟ್ರೋ ರೈಲು ನಿಗಮ (ಡಿಎಂಆರ್‌ಸಿ) ತಿಳಿಸಿದೆ.

ಮತ್ತಷ್ಟು ಓದಿ: Viral Video: ದೆಹಲಿ ಮೆಟ್ರೋ; ಈ ಎರಡೂ ರೀಲ್​​ಗಳ ಬಗ್ಗೆ ನಿಮ್ಮ ಅಭಿಪ್ರಾಯ ಬೇಕಿದೆ

ಮೃತರು ಉತ್ತರಾಖಂಡದ ದೇವ ಪ್ರಯಾಗ ಜಿಲ್ಲೆಯಲ್ಲಿ ಗ್ರಂಥಪಾಲಕರಾಗಿ ಕೆಲಸ ಮಾಡುತ್ತಿದ್ದು, ನಜಾಫ್‌ಗಢದಲ್ಲಿ ನೆಲೆಸಿದ್ದರು. ಅವರಿಗೆ ಮದುವೆಯಾಗಿದ್ದು, ಮಗಳಿದ್ದಾಳೆ.

ಅವರು ಯಾಕಾಗಿ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಕುಟುಂಬದವರ ಬಳಿ ಮಾಹಿತಿ ಪಡೆಯಲಾಗುತ್ತಿದೆ. ಮೆಟ್ರೋ ನಿಲ್ದಾಣದಲ್ಲಿ ಕೆಲ ಸಮಯಗಳ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಮೆಟ್ರೋ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿ ತಕ್ಷಣವೇ ಮೆಟ್ರೋ ಸೇವೆಯನ್ನು ಮರುಸ್ಥಾಪಿಸುವ ಕೆಲಸ ಮಾಡಿದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us