ದೆಹಲಿಯ ಮೆಟ್ರೋ ಸಿಬ್ಬಂದಿ ವಸತಿಗೃಹದಲ್ಲಿ ಅಗ್ನಿ ಅವಘಡ, ಬಾಲಕಿ ಸೇರಿ ಮೂವರು ಸಜೀವ ದಹನ
ದೆಹಲಿಯ ಆದರ್ಶನಗರದಲ್ಲಿರುವ ಮೆಟ್ರೋ ಸಿಬ್ಬಂದಿ ವಸತಿಗೃಹದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಬಾಲಕಿ ಸೇರಿ ಒಂದೇ ಕುಟುಂಬದ ಮೂವರು ಸಜೀವ ದಹನವಾಗಿದ್ದಾರೆ. ಬೆಳಗಿನ ಜಾವ 2.39ಕ್ಕೆ ಬೆಂಕಿ ಕಾಣಿಸಿಕೊಂಡಿದ್ದು, ಮನೆಯ ವಸ್ತುಗಳು ಇದ್ದ ಕೋಣೆಯಲ್ಲಿ ಬೆಂಕಿ ವ್ಯಾಪಿಸಿದೆ. ಅಗ್ನಿಶಾಮಕ ದಳವು ಬೆಂಕಿಯನ್ನು ನಿಯಂತ್ರಿಸಿದೆ. ಪೊಲೀಸರು ಘಟನೆಯ ತನಿಖೆ ನಡೆಸುತ್ತಿದ್ದಾರೆ.

ನವದೆಹಲಿ, ಜನವರಿ 06: ದೆಹಲಿಯ ಮೆಟ್ರೋ ಸಿಬ್ಬಂದಿ ವಸತಿಗೃಹದಲ್ಲಿ ಭಾರಿ ಅಗ್ನಿ ಅವಘಡ(Fire Accident) ಸಂಭವಿಸಿದ್ದು, ಬಾಲಕಿ ಸೇರಿ ಮೂವರು ಸಜೀವದಹನವಾಗಿದ್ದಾರೆ.ದೆಹಲಿಯ ಆದರ್ಶನಗರದಲ್ಲಿರುವ ವಸತಿಗೃಹದಲ್ಲಿ ಈ ಘಟನೆ ನಡೆದಿದೆ. ಪತಿ, ಪತ್ನಿ ಮತ್ತು ಬಾಲಕಿ ದುರಂತವಾಗಿ ಸಾವನ್ನಪ್ಪಿದ್ದಾರೆ.ಮೂವರ ಮೃತದೇಹಗಳನ್ನು ಸುಟ್ಟು ಕರಕಲಾಗಿದೆ. ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ.
ಘಟನೆ ಬಗ್ಗೆ ಮಾಹಿತಿ ಅಗ್ನಿ ಶಾಮಕದಳದ ಸಿಬ್ಬಂದಿ ನೀಡಿರುವ ಮಾಹಿತಿ ಪ್ರಕಾರ, ಬೆಳಗಿನ ಜಾವ 2.39ಕ್ಕೆ ಡಿಎಂಆರ್‌ಸಿ ಕ್ವಾರ್ಟರ್‌ನಲ್ಲಿರುವ ಗೃಹೋಪಯೋಗಿ ವಸ್ತುವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿ ಮಾಡಲಾಗಿತ್ತು, ನಂತರ ಆರು ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಯಿತು. ಐದನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಅಗ್ನಿಶಾಮಕ ದಳದವರು ಬಂದಾಗ, ಮೂವರ ಸುಟ್ಟು ಕರಕಲಾದ ಶವಗಳು ಕಣ್ಣಿಗೆ ಬಿದ್ದಿದ್ದವು.
ಮೃತರನ್ನು ಅಜಯ್ (42), ನೀಲಂ (38) ಮತ್ತು ಜಾನ್ಹವಿ (10) ಎಂದು ಗುರುತಿಸಲಾಗಿದೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಡಿಎಂಆರ್‌ಸಿ ಕ್ವಾರ್ಟರ್ಸ್ ಮಜ್ಲಿಸ್ ಪಾರ್ಕ್ ಮೆಟ್ರೋ ನಿಲ್ದಾಣದ ಬಳಿ ಇದೆ. ಪತಿ, ಪತ್ನಿ ಮತ್ತು ಬಾಲಕಿ ಸುಟ್ಟ ಗಾಯಗಳಿಂದ ಸಾವನ್ನಪ್ಪಿದ್ದಾರೆ. ಎಲ್ಲರೂ ಒಂದೇ ಕೋಣೆಯಲ್ಲಿ ಮಲಗಿದ್ದರು.
ಮತ್ತಷ್ಟು ಓದಿ: ಆಂಧ್ರಪ್ರದೇಶದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ಅವಘಡ; ಸ್ಥಳೀಯ ನಿವಾಸಿಗಳ ಸ್ಥಳಾಂತರ
ಬೆಳಗ್ಗೆ 6.40 ರ ಹೊತ್ತಿಗೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಮನೆಯ ವಸ್ತುಗಳು ಇದ್ದ ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಒಳಗೆ ಮೂರು ಸುಟ್ಟ ದೇಹಗಳು ಪತ್ತೆಯಾಗಿವೆ ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಕಿಯನ್ನು ನಂದಿಸುವಾಗ ಅಗ್ನಿಶಾಮಕ ದಳದ ಸಿಬ್ಬಂದಿ ರಾಕೇಶ್ ಅವರ ಕೈಗೆ ಗಾಯವಾಗಿದ್ದು, ಅವರನ್ನು ಜಗಜೀವನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ಪ್ರಥಮ ಚಿಕಿತ್ಸೆಯ ನಂತರ ಬಿಡುಗಡೆ ಮಾಡಲಾಯಿತು.
ರಾಷ್ಟ್ರಿಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
