Shocking News: ಮಹಿಳೆಯರ ಪಾಲಿನ ಡೇಂಜರ್ ಸಿಟಿಯಾಗಿದೆ ದೆಹಲಿ; 2021ರಲ್ಲಿ ಪ್ರತಿದಿನ ಇಬ್ಬರು ಅಪ್ರಾಪ್ತೆಯರ ಮೇಲೆ ಅತ್ಯಾಚಾರ!

ದೆಹಲಿಯಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳ ಪ್ರಕರಣಗಳು ಎಲ್ಲಾ 19 ಮೆಟ್ರೋಪಾಲಿಟನ್ ನಗರಗಳಲ್ಲಿ ಒಟ್ಟು ಅಪರಾಧಗಳ ಶೇ. 32.20ರಷ್ಟಿದೆ. ದೆಹಲಿಯ ನಂತರ ಆರ್ಥಿಕ ರಾಜಧಾನಿ ಮುಂಬೈನಲ್ಲಿ 5,543 ಪ್ರಕರಣಗಳು ದಾಖಲಾಗಿವೆ.

Shocking News: ಮಹಿಳೆಯರ ಪಾಲಿನ ಡೇಂಜರ್ ಸಿಟಿಯಾಗಿದೆ ದೆಹಲಿ; 2021ರಲ್ಲಿ ಪ್ರತಿದಿನ ಇಬ್ಬರು ಅಪ್ರಾಪ್ತೆಯರ ಮೇಲೆ ಅತ್ಯಾಚಾರ!
ಅತ್ಯಾಚಾರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Aug 30, 2022 | 2:23 PM

ನವದೆಹಲಿ: ದೆಹಲಿ ದಿನದಿಂದ ದಿನಕ್ಕೆ ಭಾರತದ ಅಪರಾಧದ ರಾಜಧಾನಿಯಾಗುತ್ತಿದೆಯೇ? ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಅಂಕಿಅಂಶಗಳ ಪ್ರಕಾರ ಇದು ನಿಜ. ಇತ್ತೀಚಿನ ಎನ್‌ಸಿಆರ್‌ಬಿ ವರದಿಯ ಪ್ರಕಾರ, ದೇಶದಾದ್ಯಂತ ಮಹಿಳೆಯರಿಗೆ ಅತ್ಯಂತ ಅಸುರಕ್ಷಿತ ಮೆಟ್ರೋಪಾಲಿಟನ್ ನಗರವಾಗಿರುವ ದೆಹಲಿಯಲ್ಲಿ ಕಳೆದ ವರ್ಷ ಪ್ರತಿದಿನ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ (Rape) ನಡೆಸಲಾಗುತ್ತಿದೆ. ದೆಹಲಿಯಲ್ಲಿ 2021ರಲ್ಲಿ ಮಹಿಳೆಯರ ವಿರುದ್ಧ 13,892 ಅಪರಾಧ ಪ್ರಕರಣಗಳು ದಾಖಲಾಗಿವೆ. 2020ಕ್ಕೆ ಹೋಲಿಸಿದರೆ ಶೇ. 40ಕ್ಕಿಂತ ಹೆಚ್ಚಾಗಿದೆ.

ಎನ್‌ಸಿಆರ್‌ಬಿ ಅಂಕಿಅಂಶಗಳ ಪ್ರಕಾರ, ದೆಹಲಿಯಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳ ಪ್ರಕರಣಗಳು ಎಲ್ಲಾ 19 ಮೆಟ್ರೋಪಾಲಿಟನ್ ನಗರಗಳಲ್ಲಿ ಒಟ್ಟು ಅಪರಾಧಗಳ ಶೇ. 32.20ರಷ್ಟಿದೆ. ದೆಹಲಿಯ ನಂತರ ಆರ್ಥಿಕ ರಾಜಧಾನಿ ಮುಂಬೈನಲ್ಲಿ 5,543 ಪ್ರಕರಣಗಳು ದಾಖಲಾಗಿವೆ. ಬೆಂಗಳೂರಿನಲ್ಲಿ 3,127 ಪ್ರಕರಣಗಳು, 19 ನಗರಗಳ ಪೈಕಿ ಮುಂಬೈ ಮತ್ತು ಬೆಂಗಳೂರು ಕ್ರಮವಾಗಿ ಶೇ.12.76 ಮತ್ತು ಶೇ.7.2 ಒಟ್ಟು ಅಪರಾಧಗಳನ್ನು ಹೊಂದಿವೆ.

ಇದನ್ನೂ ಓದಿ: Big News: ಅತ್ಯಾಚಾರದಿಂದ 7 ತಿಂಗಳ ಗರ್ಭಿಣಿಯಾದ ಅಪ್ರಾಪ್ತ ಬಾಲಕಿಗೆ ಗರ್ಭಪಾತ ಮಾಡಲು ಕೇರಳ ಹೈಕೋರ್ಟ್ ಅನುಮತಿ

20 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಇತರ ಮೆಟ್ರೋಪಾಲಿಟನ್ ನಗರಗಳಿಗೆ ಹೋಲಿಸಿದರೆ, 2021ರಲ್ಲಿ ದೆಹಲಿಯು ಅಪಹರಣ (3948), ಗಂಡನಿಂದ ಕ್ರೌರ್ಯ (4674) ಮತ್ತು ಹೆಣ್ಣು ಮಕ್ಕಳ ಅತ್ಯಾಚಾರ (833)ಕ್ಕೆ ಸಂಬಂಧಿಸಿದ ವಿಭಾಗಗಳಲ್ಲಿ ಮಹಿಳೆಯರ ವಿರುದ್ಧದ ಅತಿ ಹೆಚ್ಚು ಅಪರಾಧಗಳ ಪ್ರಕರಣಗಳನ್ನು ವರದಿ ಮಾಡಿದೆ. 2021ರಲ್ಲಿ ದೆಹಲಿಯಲ್ಲಿ ಸರಾಸರಿ ಇಬ್ಬರು ಹುಡುಗಿಯರು ಪ್ರತಿದಿನ ಅತ್ಯಾಚಾರಕ್ಕೊಳಗಾಗಿದ್ದಾರೆ ಎಂದು ಅಂಕಿ-ಅಂಶಗಳು ತಿಳಿಸಿವೆ.

ರಾಷ್ಟ್ರೀಯ ರಾಜಧಾನಿ ದೆಹಲಿಯಲ್ಲಿ 2021ರಲ್ಲಿ ಮಹಿಳೆಯರ ವಿರುದ್ಧ 13,982 ಅಪರಾಧ ಪ್ರಕರಣಗಳು ದಾಖಲಾಗಿವೆ. ಎಲ್ಲಾ 19 ಮಹಾನಗರಗಳಲ್ಲಿ ಒಟ್ಟು ಅಪರಾಧಗಳ ಸಂಖ್ಯೆ 43,414 ಎಂದು ವರದಿ ತಿಳಿಸಿದೆ. ದೆಹಲಿಯಲ್ಲಿ 2021ರಲ್ಲಿ 136 ವರದಕ್ಷಿಣೆ ಸಾವಿನ ಪ್ರಕರಣಗಳು ದಾಖಲಾಗಿದ್ದರೆ 19 ಮೆಟ್ರೋಪಾಲಿಟನ್ ನಗರಗಳಲ್ಲಿ ಒಟ್ಟು ಸಾವಿನ ಸಂಖ್ಯೆ ಶೇ. 36.26 ಆಗಿದೆ.

ಇದನ್ನೂ ಓದಿ: BIG NEWS ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣ: ಅಪರಾಧಿಗಳ ಬಿಡುಗಡೆ ಕುರಿತು ಸುಪ್ರೀಂಕೋರ್ಟ್ ವಿಚಾರಣೆ

ದೆಹಲಿಯಲ್ಲಿ 3,948 ಮಹಿಳೆಯರ ಅಪಹರಣ ಪ್ರಕರಣಗಳು ಪತ್ತೆಯಾಗಿವೆ. ಎಲ್ಲ ಮೆಟ್ರೋ ಪಾಲಿಟನ್ ನಗರಗಳು ಸೇರಿ ಒಟ್ಟು 8,664 ಪ್ರಕರಣಗಳು ಪತ್ತೆಯಾಗಿವೆ. ದೆಹಲಿಯಲ್ಲಿ ಕಳೆದ ವರ್ಷ ಮಹಿಳೆಯರ ಮೇಲೆ 2,022 ಹಲ್ಲೆ ಪ್ರಕರಣಗಳು ದಾಖಲಾಗಿವೆ.

2021ರಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ (ಹೆಣ್ಣು ಮಕ್ಕಳ ಬಲಿಪಶುಗಳು ಮಾತ್ರ) ಅಡಿಯಲ್ಲಿ 1,357 ಪ್ರಕರಣಗಳು ವರದಿಯಾಗಿವೆ ಎಂದು NCRB ತಿಳಿಸಿದೆ. ಅಂಕಿಅಂಶಗಳ ಪ್ರಕಾರ 2021ರಲ್ಲಿ ಮೆಟ್ರೋಪಾಲಿಟನ್ ನಗರಗಳಲ್ಲಿ ಅತಿ ಹೆಚ್ಚು ಹೆಣ್ಣು ಮಕ್ಕಳ ಅತ್ಯಾಚಾರದ ಪ್ರಕರಣಗಳು (833) ವರದಿಯಾಗಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ