ದೆಹಲಿ-ಮುಂಬೈ ‘ಆಕಾಶ’ ವಿಮಾನಕ್ಕೆ ಬಾಂಬ್ ಬೆದರಿಕೆ, ಅಹಮದಾಬಾದ್​ನಲ್ಲಿ ತುರ್ತು ಭೂಸ್ಪರ್ಶ

|

Updated on: Jun 03, 2024 | 12:33 PM

ಇತ್ತೀಚಿನ ದಿನಗಳಲ್ಲಿ ವಿಮಾನಗಳಿಗೆ ಬಾಂಬ್ ಬೆದರಿಕೆ ಹಾಕಿರುವ ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿದೆ. ಹಾಗೆಯೇ ದೆಹಲಿಯಿಂದ ಮುಂಬೈಗೆ ಹೊರಟಿದ್ದ ಆಕಾಶ ವಿಮಾನಕ್ಕೆ ಬಾಂಬ್​ ಬೆದರಿಕೆ ಬಂದಿದ್ದು, ಕೂಡಲೇ ವಿಮಾನವನ್ನು ಅಹಮದಾಬಾದ್​ಗೆ ತಿರುಗಿಸಲಾಯಿತು.

ದೆಹಲಿ-ಮುಂಬೈ ‘ಆಕಾಶ’ ವಿಮಾನಕ್ಕೆ ಬಾಂಬ್ ಬೆದರಿಕೆ, ಅಹಮದಾಬಾದ್​ನಲ್ಲಿ ತುರ್ತು ಭೂಸ್ಪರ್ಶ
ಆಕಾಶ ಏರ್​ಲೈನ್ಸ್​
Image Credit source: min
Follow us on

ದೆಹಲಿಯಿಂದ ಮುಂಬೈಗೆ ಹೊರಟಿದ್ದ ಆಕಾಶ ವಿಮಾನ(Akasa Airlines)ಕ್ಕೆ ಬಾಂಬ್​ ಬೆದರಿಕೆ(Bomb Threat) ಬಂದ ಹಿನ್ನೆಲೆಯಲ್ಲಿ ಅಹಮದಾಬಾದ್​ನಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಯಿತು. 186 ಪ್ರಯಾಣಿಕರಿದ್ದ ಆಕಾಶ ಏರ್ ದೆಹಲಿ-ಮುಂಬೈ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಭದ್ರತಾ ಕಾರಣಗಳಿಂದ ಅಹಮದಾಬಾದ್‌ಗೆ ತಿರುಗಿಸಲಾಗಿತ್ತು.

ಭದ್ರತೆಗೆ ಹೆಚ್ಚಿನ ಆದ್ಯತೆ ನೀಡಿ, ಎಲ್ಲಾ ಪ್ರಯಾಣಿಕರನ್ನು ಸ್ಥಳಾಂತರಿಸಲಾಗಿದೆ ಮತ್ತು ಪ್ರಸ್ತುತ ವಿಮಾನವನ್ನು ಸಂಪೂರ್ಣ ತಪಾಸಣೆಗೆ ಒಳಪಡಿಸಲಾಗಿದೆ.

ಆಕಾಶ ಏರ್ ವಕ್ತಾರರ ಪ್ರಕಾರ ಬಾಂಬ್ ಬೆದರಿಕೆ ಬಂದ ನಂತರ ಕ್ಯಾಪ್ಟನ್ ಅಗತ್ಯವಿರುವ ಎಲ್ಲಾ ತುರ್ತು ವಿಧಾನಗಳನ್ನು ಅನುಸರಿಸಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 10.13 ಕ್ಕೆ ಸುರಕ್ಷಿತವಾಗಿ ಇಳಿದರು.

ಮತ್ತಷ್ಟು ಓದಿ: ಪ್ಯಾರಿಸ್​-ಮುಂಬೈ ವಿಸ್ತಾರಾ ವಿಮಾನಕ್ಕೆ ಬಾಂಬ್ ಬೆದರಿಕೆ

ಒಂದು ದಿನದ ಹಿಂದೆಯೂ ನಡೆದಿತ್ತು ಇಂಥದ್ದೇ ಘಟನೆ
ಪ್ಯಾರಿಸ್‌ನಿಂದ 306 ಜನರನ್ನು ಹೊತ್ತು ಮುಂಬೈಗೆ ಹೊರಟಿದ್ದ ವಿಸ್ತಾರಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ನಂತರ ಮುಂಬೈಗೆ ಆಗಮಿಸುವ ಮೊದಲು ನಗರದ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು.

ವಾರಾಣಸಿಯಿಂದ ದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು ಮತ್ತು ದೆಹಲಿ ವಿಮಾನ ನಿಲ್ದಾಣದಲ್ಲಿ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ವಿಮಾನದಿಂದ ಇಳಿಸಲಾಯಿತು. ವಾರಾಣಸಿಯಿಂದ ದೆಹಲಿಗೆ ಕಾರ್ಯಾಚರಣೆ ನಡೆಸುತ್ತಿರುವ 6E 2232 ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದೆ ಎಂದು ಏರ್‌ಲೈನ್ ಹೇಳಿಕೆಯಲ್ಲಿ ತಿಳಿಸಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Published On - 11:58 am, Mon, 3 June 24