MCD election results 2022 ದೆಹಲಿ ಎಂಸಿಡಿ ಚುನಾವಣೆಯಲ್ಲಿ ಗೆದ್ದು ಬೀಗಿದ ಎಎಪಿ; 15 ವರ್ಷದ ಬಿಜೆಪಿ ಆಡಳಿತ ಅಂತ್ಯ

ಎಎನ್‌ಐ ಜೊತೆ ಮಾತನಾಡಿದ ಬಿಜೆಪಿ ನಾಯಕ ಪರ್ವೇಶ್ ವರ್ಮಾ, ದೆಹಲಿಯ ಜನರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ “ಸುಳ್ಳು” ನೋಡಿ ಬಿಜೆಪಿಗೆ ಮತ ಹಾಕಿದ್ದಾರೆ ಎಂದು ಹೇಳಿದ್ದಾರೆ.

MCD election results 2022 ದೆಹಲಿ ಎಂಸಿಡಿ ಚುನಾವಣೆಯಲ್ಲಿ ಗೆದ್ದು ಬೀಗಿದ ಎಎಪಿ; 15 ವರ್ಷದ ಬಿಜೆಪಿ ಆಡಳಿತ ಅಂತ್ಯ
ಅರವಿಂದ ಕೇಜ್ರಿವಾಲ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Dec 07, 2022 | 2:50 PM

ದೆಹಲಿ: ದೆಹಲಿಯ ಮುನ್ಸಿಪಲ್ ಕಾರ್ಪೋರೇಶನ್ ಚುನಾವಣೆಯಲ್ಲಿ (Municipal Corporation of Delhi polls)ಮತ ಎಣಿಕೆ ಮುಂದುವರಿದಿದ್ದು ಬಿಜೆಪಿ(BJP) ಮತ್ತು ಆಮ್ ಆದ್ಮಿ ಪಕ್ಷ (AAP) ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆದಿದೆ. ಇತ್ತೀಚಿನ ಟ್ರೆಂಡ್‌ ಪ್ರಕಾರ ಎಎಪಿ ಇಲ್ಲಿಯವರೆಗೆ 107 ಸ್ಥಾನಗಳನ್ನು ಪಡೆದುಕೊಂಡು 25 ರಲ್ಲಿ ಮುನ್ನಡೆ ಸಾಧಿಸಿದೆ ಎಂದು ಸೂಚಿಸುತ್ತವೆ. ಅದೇ ವೇಳೆ ಬಿಜೆಪಿ 20 ವಾರ್ಡ್‌ಗಳಲ್ಲಿ ಮುನ್ನಡೆ ಸಾಧಿಸಿದ್ದು 85 ಸ್ಥಾನಗಳನ್ನು ಗೆದ್ದುಕೊಂಡಿದೆ. ಎಎನ್‌ಐ ಜೊತೆ ಮಾತನಾಡಿದ ಬಿಜೆಪಿ ನಾಯಕ ಪರ್ವೇಶ್ ವರ್ಮಾ, ದೆಹಲಿಯ ಜನರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Arvind Kejriwal) ಅವರ “ಸುಳ್ಳು” ನೋಡಿ ಬಿಜೆಪಿಗೆ ಮತ ಹಾಕಿದ್ದಾರೆ ಎಂದು ಹೇಳಿದ್ದಾರೆ.ದೆಹಲಿಯ ಜನರಿಗೆ ಕೇಜ್ರಿವಾಲ್ ಅವರ ಸುಳ್ಳುಗಳ ಬಗ್ಗೆ ತಿಳಿದಿದೆ. ಎಂಸಿಡಿಯ ಕೆಲಸದಿಂದ ಸಂತೋಷವಾಗಿದೆ. 15 ವರ್ಷಗಳ ಸುದೀರ್ಘ ಆಡಳಿತದಿಂದಾಗಿ ಕೆಲವು ಆಡಳಿತ ವಿರೋಧಿಗಳು ಇರಬಹುದು. ಕೋವಿಡ್ ಸಮಯದಲ್ಲಿ ಮತ್ತು ಉದ್ಯಾನವನಗಳು ಮತ್ತು ಆಸ್ಪತ್ರೆಗಳಿಗಾಗಿ ನಾವು ಮಾಡಿದ ಕೆಲಸವನ್ನು ಜನರು ನೋಡಿದ್ದಾರೆ. ಚುನಾವಣೆಯಲ್ಲಿ ಗೆಲ್ಲುವುದು ಖಚಿತ ಎಂದು ವರ್ಮಾ ಹೇಳಿದ್ದಾರೆ.ಬಿಜೆಪಿ ನಗರವನ್ನು ಕಸದಲ್ಲಿ ಮುಚ್ಚಿದೆ, ಚುನಾವಣೆಯಲ್ಲಿ ಗೆದ್ದ ನಂತರ ಎಎಪಿ ನಗರವನ್ನು ಸ್ವಚ್ಛಗೊಳಿಸುತ್ತದೆ. ಮೇಯರ್ ಎಎಪಿ ಪಕ್ಷದವರೇ ಆಗಿರುತ್ತಾರೆ. ಬಿಜೆಪಿ ದೆಹಲಿಯನ್ನು ಕಸದಲ್ಲಿ ಮುಚ್ಚಿತ್ತು, ಅದನ್ನು ಸ್ವಚ್ಛಗೊಳಿಸಲಾಗುತ್ತದೆ. ಎಂಸಿಡಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಸರ್ಕಾರ ರಚನೆಯಾಗುತ್ತದೆ. ದೆಹಲಿಯ ಜನರು ಎಎಪಿ ಯನ್ನು ಎಂಸಿಡಿಯಲ್ಲಿ ತರಲು ನಿರ್ಧರಿಸಿದ್ದಾರೆ, ಇದರಿಂದ ದೆಹಲಿ ಸ್ವಚ್ಛ ಮತ್ತು ಸುಂದರವಾಗಿರುತ್ತದೆ ಎಂದು ಎಎಪಿ ಸಂಸದ ರಾಘವ್ ಚಡ್ಡಾ ಹೇಳಿದ್ದಾರೆ.

ಏತನ್ಮಧ್ಯೆ, ಬುಧವಾರದ ಇತ್ತೀಚಿನ ಟ್ರೆಂಡ್‌ಗಳ ಪ್ರಕಾರ ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (MCD) ಚುನಾವಣೆಯ 250 ವಾರ್ಡ್‌ಗಳ ಮತಗಳ ಎಣಿಕೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಈಗಾಗಲೇ ಹೆಚ್ಚಿನ ಸೀಟುಗಳನ್ನು ಗೆದ್ದಿದ್ದು, ಅಧಿಕಾರಕ್ಕೇರಲು ಸಿದ್ಧತೆ ನಡೆಸಿದೆ.

ಎಂಸಿಡಿ ಚುನಾವಣೆಗೆ ಮುನ್ನ

ದೆಹಲಿಯಲ್ಲಿ ಬಿಜೆಪಿ ಮತ್ತು ಆಡಳಿತಾರೂಢ ಎಎಪಿ ಎಂಸಿಡಿ ಚುನಾವಣೆಗಾಗಿ ಭರ್ಜರಿ ಪ್ರಚಾರ ಮಾಡಿತ್ತು.ಚುನಾವಣಾ ಪ್ರಚಾರದಲ್ಲಿ ಉನ್ನತ ನಾಯಕರು, ಕೇಂದ್ರ ಸಚಿವರು ಮತ್ತು ಇತರ ರಾಜ್ಯಗಳ ಮುಖ್ಯಮಂತ್ರಿಗಳು  ಪಾಲ್ಗೊಂಡಿದ್ದು ಮನೆ ಮನೆಗೆ ತೆರಳಿ ಮತ ಮತ್ತು ಸಾರ್ವಜನಿಕ ಬೆಂಬಲವನ್ನು ಕೇಳಿದ್ದರು. ಬಿಜೆಪಿಯು 2007 ರಿಂದ ದೆಹಲಿ ಎಂಸಿಡಿಯಲ್ಲಿ ಅಧಿಕಾರದಲ್ಲಿದೆ. ಎಎಪಿ 2013 ರಿಂದ ದೆಹಲಿ ಸರ್ಕಾರವನ್ನು ಮುನ್ನಡೆಸಿದೆ.

ವಾರ್ಡ್‌ಗಳನ್ನು ಮರು ರಚಿಸಿದ ನಂತರ, ಮುನ್ಸಿಪಲ್ ಕಾರ್ಪೊರೇಷನ್‌ಗಳನ್ನು ವಿಲೀನಗೊಳಿಸಿದ ನಂತರ ನಡೆದ ಇದು ಮೊದಲ ಚುನಾವಣೆಯಾಗಿದೆ. 2017ರಲ್ಲಿ ಮತದಾನ ನಡೆದ 270 ವಾರ್ಡ್‌ಗಳಲ್ಲಿ ಬಿಜೆಪಿ 181ರಲ್ಲಿ ಗೆಲುವು ಸಾಧಿಸಿದರೆ, ಎಎಪಿ 48 ಮತ್ತು ಕಾಂಗ್ರೆಸ್ ಕೇವಲ 30ರಲ್ಲಿ ಗೆಲುವು ಸಾಧಿಸಿತ್ತು.

ಚುನಾವಣಾ ಫಲಿತಾಂಶದ ಅಪ್ಡೇಟ್ಸ್

ಮಧ್ಯಾಹ್ನ 1.50 ಕ್ಕೆ ದೆಹಲಿ ರಾಜ್ಯ ಚುನಾವಣಾ ಆಯೋಗವು ಎಎಪಿ 124 ಸ್ಥಾನಗಳನ್ನು ಗೆದ್ದಿದೆ ಮತ್ತು 10 ಇತರರಲ್ಲಿ ಮುನ್ನಡೆ ಸಾಧಿಸಿದೆ ಎಂದು ಹೇಳಿದೆ. ಬಿಜೆಪಿ 97 ರಲ್ಲಿ ಗೆದ್ದು 6 ರಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಏಳರಲ್ಲಿ ಗೆದ್ದು ಮೂರರಲ್ಲಿ ಮುನ್ನಡೆ ಸಾಧಿಸಿದೆ.ಮೂರು ವಾರ್ಡ್‌ಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಗೆದ್ದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:25 pm, Wed, 7 December 22

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್