AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fog: ದೆಹಲಿಯಲ್ಲಿ ದಟ್ಟ ಮಂಜು, ಸಾಕಷ್ಟು ವಿಮಾನಗಳ ಹಾರಾಟದಲ್ಲಿ ವ್ಯತ್ಯಯ

ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಣಿಸಿಕೊಂಡಿರುವ ದಟ್ಟ  ಮಂಜಿನಿಂದಾಗಿ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಕಾರ್ಯಾಚರಣೆಗೆ ಅಡ್ಡಿಯಾಗಿದೆ.

Fog: ದೆಹಲಿಯಲ್ಲಿ ದಟ್ಟ ಮಂಜು, ಸಾಕಷ್ಟು ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ವಿಮಾನ
ನಯನಾ ರಾಜೀವ್
|

Updated on: Feb 22, 2023 | 10:19 AM

Share

ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಣಿಸಿಕೊಂಡಿರುವ ದಟ್ಟ  ಮಂಜಿನಿಂದಾಗಿ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಕಾರ್ಯಾಚರಣೆಗೆ ಅಡ್ಡಿಯಾಗಿದೆ.ಈ ಸಮಯದಲ್ಲಿ ಕೇವಲ 3 CAT ಸುಸಜ್ಜಿತ ವಿಮಾನಗಳನ್ನು ಮಾತ್ರ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ. ಈ ಬಗ್ಗೆ ವಿಮಾನ ನಿಲ್ದಾಣ ಪ್ರಾಧಿಕಾರ ಹೊಸ ಹೇಳಿಕೆ ನೀಡುವ ನಿರೀಕ್ಷೆಯಿದೆ.

ವಿಮಾನ ನಿಲ್ದಾಣದ ಮೂಲಗಳ ಪ್ರಕಾರ, ರಾಷ್ಟ್ರ ರಾಜಧಾನಿಯಿಂದ ಯಾವುದೇ ವಿಮಾನಗಳು ಕಾರ್ಯಾಚರಿಸುತ್ತಿಲ್ಲ. ಆದರೆ ವಿಮಾನಗಳು ರದ್ದಾಗಿರುವ ಬಗ್ಗೆಯೂ ಯಾವುದೇ ಮಾಹಿತಿ ಇಲ್ಲ.

ಡೊಮೆಸ್ಟಿಕ್ ಏರ್‌ಲೈನ್ಸ್ ಸ್ಪೈಸ್‌ಜೆಟ್, ಇಂಡಿಗೊ ಮತ್ತು ವಿಸ್ತಾರ ಕೂಡ ಟ್ವಿಟರ್‌ನಲ್ಲಿ ಹೇಳಿಕೆಯನ್ನು ನೀಡಿದ್ದು, ಕೆಟ್ಟ ಹವಾಮಾನದ ಬಗ್ಗೆ ಪ್ರಸ್ತಾಪಿಸಿದ್ದಾರೆ.

ಮತ್ತಷ್ಟು ಓದಿ: Hyderabad: ವಿಮಾನ ತಪ್ಪಿಹೋಗುತ್ತೆಂದು ಫ್ಲೈಟ್​ ಅಲ್ಲಿ ಬಾಂಬ್ ಇದೆ ಎಂದು ಕರೆ ಮಾಡಿದ ವ್ಯಕ್ತಿಯ ಬಂಧನ

ದೆಹಲಿಯಲ್ಲಿ (ಡಿಇಎಲ್) ಕೆಟ್ಟ ಹವಾಮಾನದಿಂದಾಗಿ ದೆಹಲಿಗೆ ಬರುವ ಹಾಗೂ ದೆಹಲಿಗೆ ಹೋಗುವ ವಿಮಾನಗಳು ತಡವಾಗಿವೆ ಎಂದು ಸ್ಪೈಸ್​ಜೆಟ್ ಬರೆದುಕೊಂಡಿದೆ.

ದೆಹಲಿಯಿಂದ ಹೊರಟಿದ್ದ ಏರ್ ಇಂಡಿಯಾ ವಿಮಾಣ ತುತುರ್ ಭೂಸ್ಪರ್ಶ

ದೆಹಲಿಯಿಂದ ಅಮೆರಿಕಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಸ್ವೀಡನ್​ನಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ. ಸುಮಾರು 300 ಪ್ರಯಾಣಿಕರನ್ನು ಹೊತ್ತು ಅಮೆರಿಕದ ನೆವಾರ್ಕ್​ಗೆ ತೆರಳುತ್ತಿತ್ತು. ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ವಿಮಾನ ತುರ್ತು ಭೂಸ್ಪರ್ಶ ಮಾಡುತ್ತಿದ್ದಂತೆ, ವಿಮಾನ ನಿಲ್ದಾಣದಲ್ಲಿ ಹಲವಾರು ಅಗ್ನಿಶಾಮಕ ವಾಹನಗಳು ನಿಂತಿದ್ದವು.

ನೆವಾರ್ಕ್‌ನಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದ ಇಂಜಿನ್ ಒಂದರಲ್ಲಿ ತೈಲ ಸೋರಿಕೆಯಾದ ಕಾರಣ ಬುಧವಾರ ಸ್ಟಾಕ್‌ಹೋಮ್‌ಗೆ ತಿರುಗಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೋಯಿಂಗ್ 777-300ER ವಿಮಾನದೊಂದಿಗೆ ಕಾರ್ಯನಿರ್ವಹಿಸುತ್ತಿದ್ದ ವಿಮಾನದ ಎಂಜಿನ್ ಒಂದರಲ್ಲಿ ತೈಲ ಸೋರಿಕೆಯಾಗಿದೆ ಎಂದು ಹಿರಿಯ DGCA ಅಧಿಕಾರಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ