Delhi: ಮನೆಯಲ್ಲಿ ವಿಷ ಕುಡಿದು ವಾಯುಸೇನೆಯ ಮಾಜಿ ಅಧಿಕಾರಿ ಹಾಗೂ ಪತ್ನಿ ಆತ್ಮಹತ್ಯೆ

| Updated By: ನಯನಾ ರಾಜೀವ್

Updated on: Mar 02, 2023 | 10:07 AM

ವಾಯುಸೇನೆಯ ಮಾಜಿ ಅಧಿಕಾರಿ ಹಾಗೂ ಅವರ ಪತ್ನಿ ಮನೆಯಲ್ಲಿಯೇ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅಜಯ್ ಪಾಲ್(37) ಮತ್ತು ಮೋನಿಕಾ(32) ಇಬ್ಬರೂ ಬೇರೆ ಬೇರೆ ಸಮಯದಲ್ಲಿ ವಿಷ ಸೇವಿಸಿ ಸಾವನ್ನಪ್ಪಿದ್ದಾರೆ.

Delhi: ಮನೆಯಲ್ಲಿ ವಿಷ ಕುಡಿದು ವಾಯುಸೇನೆಯ ಮಾಜಿ ಅಧಿಕಾರಿ ಹಾಗೂ ಪತ್ನಿ ಆತ್ಮಹತ್ಯೆ
ಪೊಲೀಸ್ ವಾಹನ
Follow us on

ದೆಹಲಿ: ವಾಯುಸೇನೆಯ ಮಾಜಿ ಅಧಿಕಾರಿ ಹಾಗೂ ಅವರ ಪತ್ನಿ ಮನೆಯಲ್ಲಿಯೇ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಅಜಯ್ ಪಾಲ್(37) ಮತ್ತು ಮೋನಿಕಾ(32) ಇಬ್ಬರೂ ಬೇರೆ ಬೇರೆ ಸಮಯದಲ್ಲಿ ವಿಷ ಸೇವಿಸಿ ಸಾವನ್ನಪ್ಪಿದ್ದಾರೆ.

ಬುಧವಾರ, ಮೋನಿಕಾ ಪಾಲ್ ಪತಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು, ಬಾಯಿಯಲ್ಲಿ ನೊರೆ ಬಂದಿತ್ತು, ತಕ್ಷಣ ಸ್ಥಳೀಯರು ಅವರನ್ನು ಆಸ್ಪತ್ರೆಗೆ ಕೊಂಡೊಯ್ದರೂ ಯಾವುದೇ ಪ್ರಯೋಜನವಾಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: Telangana: ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ಮಾಡುತ್ತಿರುವಾಗ ಕುಸಿದು ಬಿದ್ದು ಯುವಕ ಸಾವು

ಮನೆಗೆ ಮರಳಿದ ಮೋನಿಕಾ ಪಾಲ್ ಮಧ್ಯಾಹ್ನ ವಿಷ ಸೇವಿಸಿದ್ದಾರೆ ಬಳಿಕ ಪೊಲೀಸರು ಬಾಗಿಲು ಒಡೆದು ನೋಡಿದಾಗ ಆಗಲೇ ಅವರು ಮೃತಪಟ್ಟಿದ್ದರು. ಅಜಯ್ ಪಾಲ್ ಇತ್ತೀಚೆಗಷ್ಟೇ ವಾಯುಸೇನೆಯನ್ನು ತೊರೆದಿದ್ದರು. ಒಂದು ವರ್ಷದ ಹಿಂದೆ ಇಬ್ಬರು ಮದುವೆಯಾಗಿದ್ದರು. ಆತ್ಮಹತ್ಯೆಗೆ ಕಾರಣವೇನು ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ