Delhi: ದೆಹಲಿ ಪೊಲೀಸ್ ಕಂಟ್ರೋಲ್​ ರೂಂಗೆ ಕರೆ ಮಾಡಿ ಪ್ರಧಾನಿ ಮೋದಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯ ಬಂಧನ

|

Updated on: May 26, 2023 | 9:18 AM

ದೆಹಲಿ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಪ್ರಧಾನಿ ನರೇಂದ್ರ ಮೋದಿಯವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

Delhi: ದೆಹಲಿ ಪೊಲೀಸ್ ಕಂಟ್ರೋಲ್​ ರೂಂಗೆ ಕರೆ ಮಾಡಿ ಪ್ರಧಾನಿ ಮೋದಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯ ಬಂಧನ
ನರೇಂದ್ರ ಮೋದಿ
Follow us on

ದೆಹಲಿ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಪ್ರಧಾನಿ ನರೇಂದ್ರ ಮೋದಿ(Narendra Modi) ಯವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾಹಿತಿಯ ಪ್ರಕಾರ, ಬೆದರಿಕೆ ಕರೆ ಪೊಲೀಸ್ ಇಲಾಖೆಯಲ್ಲಿ ಕೋಲಾಹಲಕ್ಕೆ ಕಾರಣವಾಯಿತು ಮತ್ತು ಕರೆ ಎಲ್ಲಿಂದ ಬಂತು ಎಂದು ಪತ್ತೆಹಚ್ಚಲು ತ್ವರಿತವಾಗಿ ಕ್ರಮ ಕೈಗೊಂಡರು. ಕರೆಯನ್ನು ಪತ್ತೆಹಚ್ಚಿದ ನಂತರ, ಪೊಲೀಸರು ದೆಹಲಿಯ ಪ್ರಸಾದ್ ನಗರ ಪ್ರದೇಶದ ಕರೋಲ್ ಬಾಗ್‌ನಲ್ಲಿ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ದೆಹಲಿಯ ರಾಯಗರ್ ಪುರ ನಿವಾಸಿ ಹೇಮಂತ್ ಎಂದು ಗುರುತಿಸಲಾಗಿದ್ದು, ಆತ ಕುಡಿದ ಮತ್ತಿನಲ್ಲಿ ಕರೆ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಪಿಸಿಆರ್ ಕರೆ ಸ್ವೀಕರಿಸಿದ ನಂತರ ತಂಡವನ್ನು ಕಳುಹಿಸಲಾಗಿದೆ ಮತ್ತು ಕರೆ ಮಾಡಿದ ಹೇಮಂತ್ ಕುಮಾರ್ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯು ಕಳೆದ 6 ವರ್ಷಗಳಿಂದ ನಿರುದ್ಯೋಗಿಯಾಗಿದ್ದು, ಕುಡಿತದ ದಾಸನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಪ್ರಧಾನಿ ಮೋದಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ಗೆ ಕೊಲೆ ಬೆದರಿಕೆ

ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿ ಮಾಧ್ಯಮ ಸಂಸ್ಥೆಗೆ ಇಮೇಲ್ ಕಳುಹಿಸಿದ ಆರೋಪದ ಮೇಲೆ ಲಖನೌದ ಶಾಲಾ ಬಾಲಕನನ್ನು ನೋಯ್ಡಾ ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು.

ಬಿಹಾರ ಮೂಲದ 16 ವರ್ಷದ ಬಾಲಕನನ್ನು ಇಂದು ಬೆಳಗ್ಗೆ ಲಖನೌದ ಚಿನ್ಹಾಟ್ ಪ್ರದೇಶದಲ್ಲಿ ವಶಕ್ಕೆ ಪಡೆದಿದ್ದರು. ಎಪ್ರಿಲ್ 5 ರಂದು ಇಲ್ಲಿನ ಸೆಕ್ಟರ್ 20 ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಎಫ್‌ಐಆರ್ ದಾಖಲಿಸಲಾಗಿದೆ. ನಂತರ ಈ ಕುರಿತು ತನಿಖೆ ಮಾಡಲಾಯಿತು ಮತ್ತು ಬೆದರಿಕೆ ಸಂದೇಶವನ್ನು ಒಳಗೊಂಡಿರುವ ಇಮೇಲ್ ಕಳುಹಿಸಿದವರನ್ನು ಪತ್ತೆಹಚ್ಚಲು ತಾಂತ್ರಿಕ ತಂಡಗಳನ್ನು ರಚಿಸಲಾಯಿತು ಎಂದು ವರ್ಮಾ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:14 am, Fri, 26 May 23