Delhi Ordinance: ದೆಹಲಿ ಸುಗ್ರೀವಾಜ್ಞೆ ವಿಚಾರ; ಕೇಂದ್ರಕ್ಕೆ ಸುಪ್ರೀಂಕೋರ್ಟ್ ನೋಟಿಸ್

|

Updated on: Jul 10, 2023 | 4:50 PM

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಅವರನ್ನೊಳಗೊಂಡ ಸುಪ್ರೀಂಕೋರ್ಟ್ ಪೀಠವು ದೆಹಲಿ ಸರ್ಕಾರಕ್ಕೆ ತನ್ನ ಮನವಿಯನ್ನು ತಿದ್ದುಪಡಿ ಮಾಡಲು ಮತ್ತು ಲೆಫ್ಟಿನೆಂಟ್ ಗವರ್ನರ್ ಅವರನ್ನು ಪ್ರಕರಣದಲ್ಲಿ ಕಕ್ಷಿದಾರರನ್ನಾಗಿ ಸೇರಿಸುವಂತೆ ನಿರ್ದೇಶಿಸಿದೆ.

Delhi Ordinance: ದೆಹಲಿ ಸುಗ್ರೀವಾಜ್ಞೆ ವಿಚಾರ; ಕೇಂದ್ರಕ್ಕೆ ಸುಪ್ರೀಂಕೋರ್ಟ್ ನೋಟಿಸ್
ಅರವಿಂದ ಕೇಜ್ರಿವಾಲ್
Follow us on

ಅಧಿಕಾರಿಗಳನ್ನು ನಿಯಂತ್ರಿಸುವ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಆಮ್ ಆದ್ಮಿ ಪಕ್ಷ (AAP) ನೇತೃತ್ವದ ದೆಹಲಿ ಸರ್ಕಾರ ಸಲ್ಲಿಸಿದ ಅರ್ಜಿಯ ಕುರಿತು ಸುಪ್ರೀಂಕೋರ್ಟ್ (Supreme Court) ಸೋಮವಾರ ಕೇಂದ್ರಕ್ಕೆ ನೋಟಿಸ್ ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಅವರನ್ನೊಳಗೊಂಡ ಸುಪ್ರೀಂಕೋರ್ಟ್ ಪೀಠವು ದೆಹಲಿ ಸರ್ಕಾರಕ್ಕೆ ತನ್ನ ಮನವಿಯನ್ನು ತಿದ್ದುಪಡಿ ಮಾಡಲು ಮತ್ತು ಲೆಫ್ಟಿನೆಂಟ್ ಗವರ್ನರ್ ಅವರನ್ನು ಪ್ರಕರಣದಲ್ಲಿ ಕಕ್ಷಿದಾರರನ್ನಾಗಿ ಸೇರಿಸುವಂತೆ ನಿರ್ದೇಶಿಸಿದೆ.

ತನ್ನ ಮನವಿಯಲ್ಲಿ, ಅರವಿಂದ ಕೇಜ್ರಿವಾಲ್ ಸರ್ಕಾರವು ಇದು ಅಧಿಕಾರದ ಅಸಂವಿಧಾನಿಕ ಪ್ರಕ್ರಿಯೆ. ಇದು ಸುಪ್ರೀಂಕೋರ್ಟ್ ಮತ್ತು ಸಂವಿಧಾನದ ಮೂಲ ರಚನೆಯನ್ನು “ಅತಿಕ್ರಮಿಸಲು” ಪ್ರಯತ್ನಿಸುತ್ತದೆ ಎಂದು ಹೇಳಿದೆ. ಅದೇ ವೇಳೆ ದೆಹಲಿ ಸರ್ಕಾರ ಸುಗ್ರೀವಾಜ್ಞೆಯ ರದ್ದು ಮಾತ್ರವಲ್ಲದೆ ಮಧ್ಯಂತರ ತಡೆಯಾಜ್ಞೆಯನ್ನೂ ನೀಡಬೇಕು ಎಂದು ಮನವಿ ಮಾಡಿದೆ.

ಮಧ್ಯಂತರ ಪರಿಹಾರಗಳನ್ನು ಪರಿಗಣಿಸಲು ಸುಪ್ರೀಂಕೋರ್ಟ್ ಮುಂದಿನ ಸೋಮವಾರಕ್ಕೆ ವಿಚಾರಣೆ ಮುಂದೂಡಿದೆ. ಲೈವ್‌ ಲಾ ವರದಿಯ ಪ್ರಕಾರ, ನ್ಯಾಯಾಲಯವು ಕಾಯಿದೆಯನ್ನು ತಡೆಹಿಡಿಯಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ತಡೆಯಾಜ್ಞೆಯ ಮನವಿಯನ್ನು ಪರಿಗಣಿಸಲು ಪೀಠವು ಆರಂಭದಲ್ಲಿ ಒಪ್ಪಲಿಲ್ಲ. ಇದು ಸುಗ್ರೀವಾಜ್ಞೆ, ನಾವು ವಿಷಯವನ್ನು ಆಲಿಸಬೇಕಾಗಿದೆ ಎಂದು ಸಿಜೆಐ ಚಂದ್ರಚೂಡ್ ಹೇಳಿದರು. ಆದರೆ, ನ್ಯಾಯವಾದಿ ಅಭಿಷೇಕ್ ಮನು ಸಿಂಘ್ವಿ ನ್ಯಾಯಾಲಯದ ಕಾನೂನಿಗೆ ತಡೆಯಾಜ್ಞೆ ನೀಡಿದ ಉದಾಹರಣೆಗಳನ್ನು ನೀಡುವ ಮೂಲಕ ಪೀಠದ ಮನವೊಲಿಸಲು ಪ್ರಯತ್ನಿಸಿದರು.

ದೆಹಲಿಯ ಸೇವಾ ವಿಷಯಗಳ ಆಡಳಿತಾತ್ಮಕ ನಿಯಂತ್ರಣ ಕುರಿತು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮೇ 19 ರ ಆದೇಶ ಹೊರಡಿಸಿತ್ತು. ಈ ಸುಗ್ರೀವಾಜ್ಞೆಯು ತನ್ನ ಅಧಿಕಾರಶಾಹಿಗಳ ನೇಮಕಾತಿ ಮತ್ತು ವರ್ಗಾವಣೆಗಳ ಮೇಲಿನ ದೆಹಲಿ ಸರ್ಕಾರದ ಅಧಿಕಾರವನ್ನು ಕಸಿದುಕೊಂಡು ಅದನ್ನು ಲೆಫ್ಟಿನೆಂಟ್ ಗವರ್ನರ್‌ಗೆ ಹಸ್ತಾಂತರಿಸುತ್ತದೆ.

ಇದನ್ನೂ ಓದಿ:ದೆಹಲಿಯಲ್ಲಿ ಪ್ರವಾಹ ಸಾಧ್ಯತೆ ಇಲ್ಲ, ಆದರೂ ನಾವು ಎಲ್ಲ ರೀತಿಯಲ್ಲಿ ಸಿದ್ಧತೆ ನಡೆಸಿದ್ದೇವೆ: ಕೇಜ್ರಿವಾಲ್ 

ಪೊಲೀಸ್, ಸಾರ್ವಜನಿಕ ಸುವ್ಯವಸ್ಥೆ ಮತ್ತು ಭೂಮಿಯನ್ನು ಹೊರತುಪಡಿಸಿ ದೆಹಲಿಯಲ್ಲಿ ಸೇವೆಗಳ ನಿಯಂತ್ರಣವನ್ನು ಸುಪ್ರೀಂಕೋರ್ಟ್ ಚುನಾಯಿತ ಸರ್ಕಾರಕ್ಕೆ ಹಸ್ತಾಂತರಿಸಿದ ಒಂದು ವಾರದ ನಂತರ ಇದು ಬಂದಿತ್ತು. ಆದಾಗ್ಯೂ, ಲೆಫ್ಟಿನೆಂಟ್ ಗವರ್ನರ್ ಸೂಪರ್ ಸಿಎಂ ರೀತಿ ವರ್ತಿಸುತ್ತಿದ್ದಾರೆ ಎಂದು ದೆಹಲಿ ತನ್ನ ಅರ್ಜಿಯಲ್ಲಿ ನ್ಯಾಯಾಲಯಕ್ಕೆ ತಿಳಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:14 pm, Mon, 10 July 23