ದೆಹಲಿ: ಗೋಕುಲಪುರಿ ಮೆಟ್ರೋ ನಿಲ್ದಾಣದ ಒಂದು ಭಾಗ ಕುಸಿತ, 4 ಮಂದಿಗೆ ಗಂಭೀರ ಗಾಯ

|

Updated on: Feb 08, 2024 | 12:50 PM

ಗುರುವಾರ ಬೆಳಗ್ಗೆ ಈಶಾನ್ಯ ದೆಹಲಿಯ ಗೋಕುಲಪುರಿ ಮೆಟ್ರೋ ನಿಲ್ದಾಣದ ಭಾಗ ಕುಸಿದು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವಶೇಷಗಳಡಿಯಲ್ಲಿ ಒಬ್ಬ ವ್ಯಕ್ತಿ ಸಿಲುಕಿಕೊಂಡಿದ್ದು, ತೀವ್ರವಾಗಿ ಗಾಯಗೊಂಡಿದ್ದು, ಇತರರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿ: ಗೋಕುಲಪುರಿ ಮೆಟ್ರೋ ನಿಲ್ದಾಣದ ಒಂದು ಭಾಗ ಕುಸಿತ, 4 ಮಂದಿಗೆ ಗಂಭೀರ ಗಾಯ
ಮೆಟ್ರೋ ನಿಲ್ದಾಣ
Image Credit source: India Today
Follow us on

ದೆಹಲಿಯ ಗೋಕುಲ​ಪುರಿಯ ಮೆಟ್ರೋ ನಿಲ್ದಾಣ(Metro Station)ದ ಒಂದು ಭಾಗ ಕುಸಿದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈಶಾನ್ಯ ದೆಹಲಿಯ ಗೋಕುಲಪುರಿ ಮೆಟ್ರೋ ನಿಲ್ದಾಣದಲ್ಲಿ ಘಟನೆ ನಡೆದಿದೆ. ಅವಶೇಷಗಳಡಿಯಲ್ಲಿ ಓರ್ವ ವ್ಯಕ್ತಿ ಸಿಲುಕಿಕೊಂಡಿದ್ದು, ತೀವ್ರವಾಗಿ ಗಾಯಗೊಂಡಿದ್ದು, ಇತರರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಮೆಟ್ರೋ ನಿಲ್ದಾಣದ ಬಳಿ ಒಬ್ಬ ವ್ಯಕ್ತಿ ತನ್ನ ಸ್ಕೂಟಿಯಲ್ಲಿದ್ದಾಗ, ಮೇಲಾವರಣದ ಒಂದು ಭಾಗವು ಅವರ ಮೇಲೆ ಬಿದ್ದಿದೆ.

ಕೆಲವು ಸ್ಥಳೀಯರೊಂದಿಗೆ ಪೊಲೀಸ್ ಸಿಬ್ಬಂದಿಗಳು ಆತನನ್ನು ಅವಶೇಷಗಳಿಂದ ಹೊರ ತೆಗೆಯುವಲ್ಲಿ ಯಶಸ್ವಿಯಾದರು ಮತ್ತು ಅವರನ್ನು ಜಿಟಿಬಿ ಆಸ್ಪತ್ರೆಗೆ ಸಾಗಿಸಲಾಯಿತು. ಈ ಸಂಬಂಧ ಕಾನೂನು ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ಸ್ಥಳೀಯ ಪೊಲೀಸರು ಹಾಗೂ ಮೆಟ್ರೋ ಸಿಬ್ಬಂದಿ ಸ್ಥಳದಲ್ಲಿದ್ದು, ಕ್ರಾನ್ಸ್ ಹಾಗೂ ಜೆಸಿಬಿಗಳ ಸಹಾಯದಿಂದ ಅವಶೇಷಗಳನ್ನು ತೆಗೆಯಲಾಗುತ್ತಿದೆ. ಗಾಯಾಳುಗಳನ್ನು ಗುರುತಿಸುವ ಪ್ರಯತ್ನವೂ ನಡೆಯುತ್ತಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

ಮತ್ತಷ್ಟು ಓದಿ: Namma Metro: ಬಂದೇಬಿಡ್ತು ಬೆಂಗಳೂರಿನ ಮೊದಲ ಚಾಲಕ ರಹಿತ ರೈಲು, ಚೀನಾದಿಂದ ಚೆನ್ನೈಗೆ ಬಂದಿದೆ

ದೆಹಲಿಯಲ್ಲಿ ಗುರುವಾರ ಗೋಕುಲಪುರಿ ಮೆಟ್ರೋ ನಿಲ್ದಾಣದ ಪ್ಲಾಟ್‌ಫಾರ್ಮ್‌ನ ಪಕ್ಕದ ಗೋಡೆಯ ಒಂದು ಭಾಗ ಕುಸಿದಿದೆ. ದರಿಂದಾಗಿ ಇಡೀ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅವಘಡದಲ್ಲಿ ಓರ್ವ ಸಾವನ್ನಪ್ಪಿದ್ದು, ಅವಶೇಷಗಳಡಿ ಸಿಲುಕಿ ಇಬ್ಬರು ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ.

ಸದ್ಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ರಸ್ತೆಯನ್ನು ಮುಚ್ಚಲಾಗಿದೆ. ಅಪಘಾತದ ನಂತರ, ಈ ಮಾರ್ಗದಲ್ಲಿ ಮೆಟ್ರೋ ರೈಲು ಪ್ರಸ್ತುತ ಒಂದೇ ಮಾರ್ಗದಲ್ಲಿ ಕಾರ್ಯನಿರ್ವಹಿಸುತ್ತಿದೆ. ಬೆಳಗ್ಗೆ 11 ಗಂಟೆ ವೇಳೆಗೆ ಘಟನೆ ನಡೆದಿದೆ. ಮೆಟ್ರೋ ನಿಲ್ದಾಣದ ಗಡಿ ಗೋಡೆಯ ಒಂದು ಭಾಗ (ಪೂರ್ವ ಭಾಗ) ರಸ್ತೆಯ ಮೇಲೆ ಬಿದ್ದಿದೆ ಎಂದು ಹೇಳಲಾಗುತ್ತಿದೆ. ಜೆಸಿಬಿ ಹಾಗೂ ಕ್ರೇನ್ ಸಹಾಯದಿಂದ ಅವಶೇಷಗಳನ್ನು ತೆಗೆಯಲಾಗುತ್ತಿದೆ. ಸ್ಥಳೀಯ ಪೊಲೀಸರು ಮತ್ತು ಮೆಟ್ರೋ ನೌಕರರು ಸ್ಥಳದಲ್ಲಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

Published On - 12:42 pm, Thu, 8 February 24