Video: ಕೋಚಿಂಗ್​ ಸೆಂಟರ್​ನಲ್ಲಿ ಬೆಂಕಿ, ಪ್ರಾಣ ಉಳಿಸಿಕೊಳ್ಳಲು ಕಿಟಕಿಯಿಂದ ಹಾರಿದ ವಿದ್ಯಾರ್ಥಿಗಳು

ದೆಹಲಿಯ ಮುಖರ್ಜಿ ನಗರದಲ್ಲಿರುವ ಕೋಚಿಂಗ್​ ಸೆಂಟರ್​ವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಿದ್ಯಾರ್ಥಿಗಳು ಕಿಟಕಿ ಮೂಲಕ ಹೊರ ಬಂದು ಜೀವ ಉಳಿಸಿಕೊಂಡಿದ್ದಾರೆ

Video: ಕೋಚಿಂಗ್​ ಸೆಂಟರ್​ನಲ್ಲಿ ಬೆಂಕಿ, ಪ್ರಾಣ ಉಳಿಸಿಕೊಳ್ಳಲು ಕಿಟಕಿಯಿಂದ ಹಾರಿದ ವಿದ್ಯಾರ್ಥಿಗಳು
ಕೋಚಿಂಗ್ ಸೆಂಟರ್
Image Credit source: Latestyle

Updated on: Jun 15, 2023 | 2:05 PM

ದೆಹಲಿಯ ಮುಖರ್ಜಿ ನಗರದಲ್ಲಿರುವ ಕೋಚಿಂಗ್​ ಸೆಂಟರ್​ವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಿದ್ಯಾರ್ಥಿಗಳು ಕಿಟಕಿ ಮೂಲಕ ಹೊರ ಬಂದು ಜೀವ ಉಳಿಸಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಬೆಂಕಿ ಹೊತ್ತಿಕೊಂಡ ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, 11 ವಾಹನಗಳು ಸ್ಥಳಕ್ಕೆ ಆಗಮಿಸಿತ್ತು. ಈ ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿವೆ. ಕೋಚಿಂಗ್ ಸೆಂಟರ್‌ನ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಆತಂಕ ಸೃಷ್ಟಿಸಿತ್ತು.

ಬೆಂಕಿ ಅವಘಡ ಸಂಭವಿಸಿದ ಬಳಿಕ ಕೋಚಿಂಗ್ ಸೆಂಟರ್‌ನಲ್ಲಿದ್ದ ವಿದ್ಯಾರ್ಥಿಗಳು ಹಗ್ಗದ ಸಹಾಯದಿಂದ ಕೆಳಗೆ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ.
ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಇದರಲ್ಲಿ ವಿದ್ಯಾರ್ಥಿಗಳು ಒಬ್ಬರ ನಂತರ ಒಬ್ಬರು ಹಗ್ಗದಲ್ಲಿ ನೇತಾಡುತ್ತಿರುವುದು ಹಾಗೂ ಹಾರುತ್ತಿರುವುದನ್ನು ಕಾಣಬಹುದು. ಕೋಚಿಂಗ್ ಸೆಂಟರ್‌ನಲ್ಲಿ ಹೊಗೆ ಹರಡಿದ್ದರಿಂದ ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿಯಾಗಿದೆ ಎಂದು ಹೇಳಲಾಗುತ್ತಿದೆ. ಎಲ್ಲ ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:04 pm, Thu, 15 June 23

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us