AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ, ಕೊಲೆ, ದರೋಡೆ ಮಾಡಿದ್ದ 2873 ಕ್ರಿಮಿನಲ್​ಗಳು ದೆಹಲಿ ಪ್ರತಿಭಟನೆಯಲ್ಲಿ ಭಾಗಿ; ಹೊಸ ತಂತ್ರಜ್ಞಾನದಿಂದ ಪತ್ತೆ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಕಾಕ್ರೋಚ್ ಜನತಾ ಪಾರ್ಟಿ (CJP) ಪ್ರತಿಭಟನೆಯಲ್ಲಿ ಕೊಲೆ, ಅತ್ಯಾಚಾರ ಹಾಗೂ ದರೋಡೆಯಂತಹ ಗಂಭೀರ ಅಪರಾಧದ ಮಾಡಿ ಸಿಕ್ಕಿಹಾಕಿಕೊಂಡಿದ್ದ ಸುಮಾರು 2,873 ವ್ಯಕ್ತಿಗಳು ಭಾಗವಹಿಸಿದ್ದು ಪತ್ತೆಯಾಗಿದೆ ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ. ಮುಖ ಗುರುತಿಸುವ ತಂತ್ರಜ್ಞಾನ (FRS) ಮೂಲಕ ಇವರನ್ನು ಗುರುತಿಸಲಾಗಿದ್ದು, ಜುಲೈ 20ರಂದು ಸಂಭವಿಸಿದ ಹಿಂಸಾಚಾರದಲ್ಲಿ ಇವರ ಪಾತ್ರದ ಕುರಿತು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದ್ದಾರೆ.

ಅತ್ಯಾಚಾರ, ಕೊಲೆ, ದರೋಡೆ ಮಾಡಿದ್ದ 2873 ಕ್ರಿಮಿನಲ್​ಗಳು ದೆಹಲಿ ಪ್ರತಿಭಟನೆಯಲ್ಲಿ ಭಾಗಿ; ಹೊಸ ತಂತ್ರಜ್ಞಾನದಿಂದ ಪತ್ತೆ
Delhi Police During ProtestImage Credit source: PTI
ಸುಷ್ಮಾ ಚಕ್ರೆ
|

Updated on: Jul 27, 2026 | 9:08 PM

Share

ನವದೆಹಲಿ, ಜುಲೈ 27: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi Protest) ನಡೆದ ಕಾಕ್ರೋಚ್ ಜನತಾ ಪಾರ್ಟಿ (CJP) ಪ್ರತಿಭಟನೆಯಲ್ಲಿ ವಿವಿಧ ಅಪರಾಧ ಹಿನ್ನೆಲೆ ಹೊಂದಿರುವ ಸುಮಾರು 2,873 ವ್ಯಕ್ತಿಗಳು ಭಾಗಿಯಾಗಿದ್ದರು ಎಂದು ಪತ್ತೆಹಚ್ಚಲಾಗಿದೆ ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ. ‘ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (FRS) ಕ್ಯಾಮೆರಾಗಳ ಮೂಲಕ ಗುರುತಿಸಲಾದ ಈ ಪೈಕಿ ಹೆಚ್ಚಿನವರು ಈ ಹಿಂದೆ ಕೊಲೆ, ದರೋಡೆ, ಅತ್ಯಾಚಾರ, ಅಪಹರಣ, ಶಸ್ತ್ರಾಸ್ತ್ರ ಕಾಯ್ದೆ ಹಾಗೂ ಮಾದಕದ್ರವ್ಯ ಪ್ರಕರಣಗಳು ಸೇರಿದಂತೆ ಗಂಭೀರ ಅಪರಾಧಗಳಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಜುಲೈ 20ರಂದು ಹಿಂಸಾಚಾರ ಭುಗಿಲೆದ್ದ ಪ್ರತಿಭಟನಾ ಸ್ಥಳಗಳಲ್ಲಿ ಅಥವಾ ಅದರ ಸುತ್ತಮುತ್ತ ಈ ವ್ಯಕ್ತಿಗಳು ಭಾಗವಹಿಸಿದ್ದರು ಎಂದು ಅಧಿಕಾರಿಗಳು ಆರೋಪಿಸಿದ್ದಾರೆ. ಈ ಹೊಸ ತಂತ್ರಜ್ಞಾನದಿಂದ ಗುರುತಿಸಲಾದ ಹೆಚ್ಚಿನ ವ್ಯಕ್ತಿಗಳು ಈಶಾನ್ಯ ದೆಹಲಿಯ ಜಾಫರಾಬಾದ್, ಚಂದ್ ಬಾಗ್ ಮತ್ತು ಸೀಲಂಪುರ ಹಾಗೂ ಆಗ್ನೇಯ ದೆಹಲಿಯ ಜಾಮಿಯಾ ನಗರ, ಶಾಹೀನ್ ಬಾಗ್ ಮತ್ತು ಓಖ್ಲಾ ಪ್ರದೇಶಗಳಲ್ಲಿ ಕಂಡುಬಂದಿದ್ದಾರೆ. ಕೆಲವರನ್ನು ಮಧ್ಯ ದೆಹಲಿಯ ಭಾಗಗಳಲ್ಲೂ ಪತ್ತೆ ಹಚ್ಚಲಾಗಿದೆ.

ಪ್ರತಿಭಟನೆಯ ವೇಳೆ ನಡೆದ ಹಿಂಸಾಚಾರದ ಸಿಸಿಟಿವಿ ದೃಶ್ಯಾವಳಿಗಳನ್ನು ದೆಹಲಿ ಪೊಲೀಸರು ಬಿಡುಗಡೆ ಮಾಡಿದ್ದಾರೆ. ಈ ವಿಡಿಯೋಗಳಲ್ಲಿ ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ಮುರಿದು, ಭದ್ರತಾ ಸಿಬ್ಬಂದಿಯ ಮೇಲೆ ಕಲ್ಲು ತೂರಾಟ ನಡೆಸುವುದು, ಪೆಪ್ಪರ್ ಸ್ಪ್ರೇ ಬಳಸುವುದು, ವಾಹನಗಳನ್ನು ಪಲ್ಟಿ ಮಾಡುವುದು ಮತ್ತು ಪೊಲೀಸ್ ಆಸ್ತಿಯನ್ನು ಹಾನಿಗೊಳಿಸುವುದು ಕಂಡುಬಂದಿದೆ.

ಇದನ್ನೂ ಓದಿ: ಪ್ರತಿಭಟನೆ ನಡೆಸಿದ ಮಾತ್ರಕ್ಕೆ ಲಾಠಿಚಾರ್ಜ್ ಮಾಡುವಂತಿಲ್ಲ: ಸಿಜೆಪಿ ಪ್ರತಿಭಟನೆ ವೇಳೆ ಪೊಲೀಸ್ ಕ್ರಮಕ್ಕೆ ಸುಪ್ರೀಂ ಅಸಮಾಧಾನ

ಇದಷ್ಟೇ ಅಲ್ಲದೆ, ಪೋಲಿಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ, ವಾಹನಗಳಿಗೆ ಹಾನಿ ಮಾಡಲಾಗಿದೆ. ಕೆಲವು ಪ್ರತಿಭಟನಾಕಾರರು ಭದ್ರತಾ ಸಿಬ್ಬಂದಿಯ ಶೂಗಳನ್ನೂ ಕಿತ್ತುಕೊಂಡಿದ್ದಾರೆ. ನಿಷೇಧಾಜ್ಞೆ ಉಲ್ಲಂಘನೆ ಮತ್ತು ಕಾನೂನು ಸುವ್ಯವಸ್ಥೆಗೆ ಭಂಗ ತರಲು ಯತ್ನಿಸಿರುವ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಂಭೀರ ಅಪರಾಧಗಳಲ್ಲಿ ಭಾಗಿಯಾದ 1,000 ಜನರು:

ಮುಖ ಗುರುತಿಸುವ ತಂತ್ರಜ್ಞಾನದ ಮೂಲಕ ಪತ್ತೆಯಾದ 2,873 ವ್ಯಕ್ತಿಗಳಲ್ಲಿ 989 ಜನರು ಗಂಭೀರ ಕ್ರಿಮಿನಲ್ ಪ್ರಕರಣಗಳ ದಾಖಲೆ ಹೊಂದಿದ್ದಾರೆ ಎಂದು ದೆಹಲಿ ಪೊಲೀಸ್ ಮೂಲಗಳು ಹೇಳಿವೆ. ಅವುಗಳಲ್ಲಿ ಕೊಲೆ ಪ್ರಕರಣಗಳು: 101, ಕೊಲೆ ಯತ್ನ: 62, ದರೋಡೆ ಮತ್ತು ಸುಲಿಗೆ: 284, ಅತ್ಯಾಚಾರ: 61, ಪೋಕ್ಸೋ (POCSO) ಕಾಯ್ದೆ ಉಲ್ಲಂಘನೆ: 6, ಮಹಿಳೆಯರ ಮೇಲಿನ ದೌರ್ಜನ್ಯ/ ಚೇಷ್ಟೆ: 25, ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣಗಳು: 229, ದರೋಡೆ: 135, ಅಪಹರಣ: 19, ಎನ್‌ಡಿಪಿಎಸ್ ಮತ್ತು ಮಾದಕದ್ರವ್ಯ ಪ್ರಕರಣಗಳು: 67.

ಇದನ್ನೂ ಓದಿ: ಎಲ್ಲ ಬೇಡಿಕೆಗೂ ಕೇಂದ್ರ ಸರ್ಕಾರ ಒಪ್ಪಿಗೆ; ಪ್ರತಿಭಟನೆ ಹಿಂಪಡೆದ ಸಿಜೆಪಿ, ಶಾಂತಿಯುತವಾಗಿ ತೆರಳಲು ವಿದ್ಯಾರ್ಥಿಗಳಿಗೆ ಕರೆ

ಈ ಪ್ರತಿಭಟನೆಯಲ್ಲಿದ್ದ ಅನೇಕ ವ್ಯಕ್ತಿಗಳು ಒಂದಕ್ಕಿಂತ ಹೆಚ್ಚು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಹಳೆಯ ಅಪರಾಧಿಗಳು ಎಂಬುದು ಅಂಕಿ-ಅಂಶಗಳಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆ, ದರೋಡೆ, ಅತ್ಯಾಚಾರ, ಅಪಹರಣ ಮತ್ತು ಮಾದಕದ್ರವ್ಯ ಸಂಬಂಧಿತ ಅಪರಾಧಗಳಂತಹ ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಾಗಿರುವ ವ್ಯಕ್ತಿಗಳು ಈ ಪ್ರತಿಭಟನೆಯಲ್ಲಿದ್ದರು ಎಂಬುದು ಈ ವರದಿಯಿಂದ ತಿಳಿದುಬಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us