ದೆಹಲಿ: ಮೂವರು ಅಪ್ರಾಪ್ತರಿಂದ 6 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಆರು ವರ್ಷದ ಬಾಲಕಿ(Girl) ಮೇಲೆ ಮೂವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ. ದೆಹಲಿಯ ಭಜನ್‌ಪುರದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. 10, 13 ಮತ್ತು 14 ವರ್ಷ ವಯಸ್ಸಿನ ಮೂವರು ಅಪ್ರಾಪ್ತ ಬಾಲಕರು ಈ ಅತ್ಯಾಚಾರವೆಸಗಿದ್ದಾರೆ. ಆರೋಪಿಗಳಲ್ಲಿ ಇಬ್ಬರು ಬಾಲಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ, ಆದರೆ ಮೂರನೆಯವನು ಪರಾರಿಯಾಗಿದ್ದಾನೆ.

ದೆಹಲಿ: ಮೂವರು ಅಪ್ರಾಪ್ತರಿಂದ 6 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ
ಕ್ರೈಂ

Updated on: Jan 28, 2026 | 8:56 AM

ನವದೆಹಲಿ, ಜನವರಿ 28: ಆರು ವರ್ಷದ ಬಾಲಕಿ(Girl) ಮೇಲೆ ಮೂವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ. ದೆಹಲಿಯ ಭಜನ್‌ಪುರದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. 10, 13 ಮತ್ತು 14 ವರ್ಷ ವಯಸ್ಸಿನ ಮೂವರು ಅಪ್ರಾಪ್ತ ಬಾಲಕರು ಈ ಅತ್ಯಾಚಾರವೆಸಗಿದ್ದಾರೆ.

ಆರೋಪಿಗಳಲ್ಲಿ ಇಬ್ಬರು ಬಾಲಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ, ಆದರೆ ಮೂರನೆಯವನು ಪರಾರಿಯಾಗಿದ್ದಾನೆ. ಮೂರನೇ ಆರೋಪಿಯ ಕುಟುಂಬ ಕೂಡ ನಾಪತ್ತೆಯಾಗಿದೆ.

ಈ ಘಟನೆ ಜನವರಿ 18 ರ ಮಂಗಳವಾರ ನಡೆದಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಂತರ ಹುಡುಗಿಯ ಕುಟುಂಬವು ಪೊಲೀಸರಿಗೆ ದೂರು ನೀಡಿತ್ತು. ಮೂವರು ಹುಡುಗರು ಹುಡುಗಿಯನ್ನು ಆಮಿಷವೊಡ್ಡಿ ಅತ್ಯಾಚಾರ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಕೌಟುಂಬಿಕ ನ್ಯಾಯಾಲಯದ ಆವರಣದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಪೊಲೀಸರ ಪ್ರಕಾರ, ಆರೋಪಿಗಳನ್ನು ಗುರುತಿಸಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಒಬ್ಬ ಪರಾರಿಯಾಗಿದ್ದಾನೆ. ಇಬ್ಬರು ಆರೋಪಿಗಳನ್ನು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗಿದೆ.

ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಗಿದ್ದು, ಅಗತ್ಯ ಆರೈಕೆ ಮತ್ತು ಸಮಾಲೋಚನೆ ಒದಗಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯ ಹೇಳಿಕೆಯನ್ನು ದಾಖಲಿಸಲಾಗಿದೆ. ಪ್ರಕರಣದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದ್ದು, ಮೂರನೇ ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ.

ಮೂರನೇ ಆರೋಪಿಯನ್ನು ಪತ್ತೆ ಹಚ್ಚಲು ಶೋಧ ತಂಡವನ್ನು ರಚಿಸಲಾಗಿದ್ದು, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಶೀಘ್ರದಲ್ಲೇ ಮೂರನೇ ಆರೋಪಿಯನ್ನು ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ. ದೇಶದಲ್ಲಿ ಅತ್ಯಾಚಾರ ಮತ್ತು ಸಾಮೂಹಿಕ ಅತ್ಯಾಚಾರದ ವಿರುದ್ಧ ಕಠಿಣ ಕಾನೂನುಗಳಿವೆ, ಆದರೂ ಈ ಅಪರಾಧಗಳು ನಿರಂತರವಾಗಿ ನಡೆಯುತ್ತಿವೆ ಎಂಬುದು ಗಮನಿಸಬೇಕಾದ ಸಂಗತಿ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us