ತನ್ನ ವಿರುದ್ಧದ ಪ್ರಕರಣಗಳನ್ನು ರದ್ದುಗೊಳಿಸುವಂತೆ ಮೊಹಮ್ಮದ್ ಜುಬೇರ್ ಮನವಿಗೆ ದೆಹಲಿ ಪೊಲೀಸ್ ವಿರೋಧ
Mohammed Zubair ಅಧಿಕಾರಿಗಳು ವಶಪಡಿಸಿಕೊಂಡ ಮೊಬೈಲ್ ಮತ್ತು ಲ್ಯಾಪ್‌ಟಾಪ್ ಅನ್ನು ಬಿಡುಗಡೆ ಮಾಡುವಂತೆ ಜುಬೇರ್ ಮಾಡಿದ ಮನವಿಯನ್ನು ಪೊಲೀಸರು ವಿರೋಧಿಸಿದ್ದಾರೆ
ಆಲ್ಟ್ ನ್ಯೂಸ್ (Alt News) ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ (Mohammed Zubair) ತನ್ನ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ರದ್ದುಗೊಳಿಸುವಂತೆ ಮಾಡಿದ ಮನವಿಯನ್ನು ವಿರೋಧಿಸಿ ದೆಹಲಿ ಪೊಲೀಸರು ಶುಕ್ರವಾರ ದೆಹಲಿ ಹೈಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದಾರೆ. ಅಧಿಕಾರಿಗಳು ವಶಪಡಿಸಿಕೊಂಡ ಮೊಬೈಲ್ ಮತ್ತು ಲ್ಯಾಪ್‌ಟಾಪ್ ಅನ್ನು ಬಿಡುಗಡೆ ಮಾಡುವಂತೆ ಜುಬೇರ್ ಮಾಡಿದ ಮನವಿಯನ್ನು ಪೊಲೀಸರು ವಿರೋಧಿಸಿದ್ದಾರೆ. ಜುಬೇರ್ ನಿಂದ ವಶಪಡಿಸಿಕೊಂಡ ಎಲೆಕ್ಟ್ರಾನಿಕ್ ಉಪಕರಣಗಳನ್ನು ಈಗಾಗಲೇ ದೆಹಲಿಯ ರೋಹಿಣಿಯಲ್ಲಿರುವ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿಡಲಾಗಿದೆ. ಈ ಸಾಧನಗಳಿಂದ ಮರುಪಡೆಯಲಾದ ಡೇಟಾವನ್ನು ಜುಬೇರ್ ವಿರುದ್ಧ ದಾಖಲಾಗಿರುವ ಏಳು ಎಫ್‌ಐಆರ್‌ಗಳಿಗೆ ಕಾರಣವಾದ 2018 ರ ಟ್ವೀಟ್‌ಗೆ ಸಂಬಂಧಿಸಿದಂತೆ ವಿಶ್ಲೇಷಿಸಲಾಗುತ್ತದೆ. 2018 ರ ಟ್ವೀಟ್‌ಗೆ ಹೋಲುವ ಇತರ ಟ್ವೀಟ್‌ಗಳನ್ನು ಸಹ ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಜುಲೈ 20 ರಂದು ಸುಪ್ರೀಂಕೋರ್ಟ್ ತನ್ನ ವಿರುದ್ಧದ ಎಲ್ಲಾ ಪ್ರಕರಣಗಳಲ್ಲಿ ಮಧ್ಯಂತರ ಜಾಮೀನು ನೀಡಿದ ನಂತರ ಜುಬೇರ್ ತಿಹಾರ್ ಜೈಲಿನಿಂದ 24 ದಿನಗಳ ನಂತರ ಬಂಧಮುಕ್ತರಾಗಿದ್ದರು. ಜುಬೇರ್ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳನ್ನು 2018 ರ ಆಕ್ಷೇಪಾರ್ಹ ಟ್ವೀಟ್‌ಗೆ ಸಂಬಂಧಿಸಿದ ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸ್ ವಿಶೇಷ ಸೆಲ್ಗೆ ವರ್ಗಾಯಿಸಬೇಕು ಎಂದು ಸುಪ್ರೀಂಕೋರ್ಟ್ ನಿರ್ದೇಶಿಸಿದೆ.
Published On - 3:15 pm, Fri, 16 September 22