ಕೇಂದ್ರದ ವಿರುದ್ಧ ಇಂದು ರಾಜ್ಯ ಸರ್ಕಾರ ದೆಹಲಿಯಲ್ಲಿ ಪ್ರತಿಭಟನೆ: ಅರ್ಧ ಗಂಟೆ ಅವಕಾಶ ನೀಡಿದ ದಿಲ್ಲಿ ಪೊಲೀಸ್

ಕೇಂದ್ರದ ವಿರುದ್ಧ ಕಿಡಿಕಾರುತ್ತಾ ಕಾಂಗ್ರೆಸ್ ಶಾಸಕರು ಹಾಗೂ ಸಚಿವರು ದೆಹಲಿಗೆ ತೆರಳಿದ್ದಾರೆ. ಸಿಎಂ ಆದಿಯಾಗಿ ಡಿಸಿಎಂ ಸೇರಿದಂತೆ ಸಚಿವರು, ಶಾಸಕರು ದೆಹಲಿ ತಲುಪಿದ್ದು, ಇಂದು (ಫೆಬ್ರವರಿ 07)  ಬೆಳಗ್ಗೆ 11 ಗಂಟೆಯಿಂದ ಜಂತರ್ ಮಂತರ್​​ ಪ್ರತಿಭಟನೆ ನಡೆಸಲಿದ್ದಾರೆ. ಆದರೆ, ದೆಹಲಿ ಪೊಲೀಸರು ಬೆಳಗ್ಗೆ 10.30ರಿಂದ ಮಧ್ಯಾಹ್ನ 1 ಗಂಟೆ ವರೆಗೆ ಮಾತ್ರ ಪ್ರತಿಭಟನೆಗೆ ಅವಕಾಶ ನೀಡಿದ್ದಾರೆ.

ಕೇಂದ್ರದ ವಿರುದ್ಧ ಇಂದು ರಾಜ್ಯ ಸರ್ಕಾರ ದೆಹಲಿಯಲ್ಲಿ ಪ್ರತಿಭಟನೆ: ಅರ್ಧ ಗಂಟೆ ಅವಕಾಶ ನೀಡಿದ ದಿಲ್ಲಿ ಪೊಲೀಸ್
Follow us
TV9 Web
| Updated By: ವಿವೇಕ ಬಿರಾದಾರ

Updated on:Feb 07, 2024 | 8:30 AM

ನವದೆಹಲಿ/ಬೆಂಗಳೂರು, (ಫೆಬ್ರವರಿ 07): ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಕಾಂಗ್ರೆಸ್ ಸರ್ಕಾರ(Karnataka Congress Government) ಆರೋಪ ಮಾಡಿದ್ದು, ನಮ್ಮ ತೆರಿಗೆ ನಮ್ಮ ಹಕ್ಕು ಎಂಬ ಉದ್ಘೋಷದೊಂದಿಗೆ ಮೋದಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಕರ್ನಾಟಕ ಸರ್ಕಾರ ಮುಂದಾಗಿದೆ. ಈಗಾಗಲೇ ಕಾಂಗ್ರೆಸ್ ಶಾಸಕರು, ಸಚಿವರು ಸೇರಿದಂತೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ಹಾರಿದ್ದಾರೆ. ಇನ್ನು ದೆಹಲಿಯ ಜಂತರ್ ಮಂತರ್​​ನಲ್ಲಿ (Delhi jantar mantar) ಕರ್ನಾಟಕ ಸರ್ಕಾರದ ಪ್ರತಿಭಟನೆಗೆ ದಿಲ್ಲಿ ಪೊಲೀಸ್​ (Delhi Police)ಕೇವಲ ಅರ್ಧ ಗಂಟೆ ಅವಕಾಶ ನೀಡಿದೆ.

ಕೇಂದ್ರದ ವಿರುದ್ಧ ಕಿಡಿಕಾರುತ್ತಾ ಕಾಂಗ್ರೆಸ್ ಶಾಸಕರು ಹಾಗೂ ಸಚಿವರು ದೆಹಲಿಗೆ ತೆರಳಿದ್ದಾರೆ. ಸಿಎಂ ಆದಿಯಾಗಿ ಡಿಸಿಎಂ ಸೇರಿದಂತೆ ಸಚಿವರು, ಶಾಸಕರು ಈಗಾಗಲೆ ದೆಹಲಿ ತಲುಪಿದ್ದು,  ಫೆಬ್ರವರಿ 07 (ಬುಧವಾರ)  ಬೆಳಗ್ಗೆ 11 ಗಂಟೆಯಿಂದ ಜಂತರ್ ಮಂತರ್​​​ನಲ್ಲಿ​​ ಪ್ರತಿಭಟನೆ ಮಾಡಲಿದ್ದಾರೆ. ಆದರೆ, ದೆಹಲಿ ಪೊಲೀಸರು ಬೆಳಗ್ಗೆ 10.30ರಿಂದ ಮಧ್ಯಾಹ್ನ 1 ಗಂಟೆ ವರೆಗೆ ಮಾತ್ರ ಜಂತರ್ ಮಂತರ್​​ನಲ್ಲಿ ಪ್ರತಿಭಟನೆಗೆ ಅವಕಾಶ ನೀಡಿದ್ದಾರೆ.

ಕೇಂದ್ರದ ವಿರುದ್ಧ ಅನುದಾನ ತಾರತಮ್ಯ ಸಮರಕ್ಕೆ ಸಜ್ಜಾಗಿದ್ದಾರೆ. ಮಂಗಳವಾರ (ಫೆ.05) ರಂದು ಸುದ್ದಿಗೋಷ್ಠಿ ನಡೆಸಿ ಅಂಕಿ ಅಂಶಗಳ ಸಮೇತ ಗುಡುಗಿದ್ದ ಸಿಎಂ, ಇವತ್ತು ಮತ್ತೊಂದು ಅಸ್ತ್ರ ಹೂಡಿದ್ದಾರೆ. ದೆಹಲಿಯ ಚಲೋ ಪಕ್ಷದ ಪ್ರತಿಭಟನೆಯಲ್ಲ. ಸರ್ಕಾರದ ಪ್ರತಿಭಟನೆ, ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಸರಿಪಡಿಸಲು ಬಿಜೆಪಿ ಮತ್ತು ಜೆಡಿಎಸ್​ ಸಂಸದರು ಪ್ರತಿಭಟನೆಗೆ ಬರಬೇಕು ಅಂತ ಪತ್ರ ಬರೆದಿದ್ದಾರೆ. ದೇವೇಗೌಡರಿಗೂ ಪ್ರತಿಭಟನೆಗೆ ಆಹ್ವಾನಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಪ್ರತಿಭಟನೆಗೆ ಕೇರಳ ಉದಾಹರಣೆ ಕೊಟ್ಟು ಕಾಂಗ್ರೆಸ್​ಗೆ ಭರ್ಜರಿ ತಿರುಗೇಟು ಕೊಟ್ಟ ಕುಮಾರಸ್ವಾಮಿ

ಇನ್ನೂ ಇಂದಿನ ಪ್ರತಿಭಟನೆಗೆ ಕನ್ನಡ ಟಚ್ ಕೊಡುವ ಸಲುವಾಗಿ, ಸಚಿವ ಪ್ರಿಯಾಂಕ್ ಖರ್ಗೆ ಕನ್ನಡ ಬಾವುಟಗಳನ್ನ ದೆಹಲಿಗೆ ತೆಗೆದುಕೊಂಡು ಹೋಗಿದ್ದಾರೆ. ಕನ್ನಡಿಗರ ಅಸ್ಮಿತೆ, ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂಬ  ಅಸ್ತ್ರ ಹೂಡಿದ್ದಾರೆ.

ವಿಪಕ್ಷ ನಾಯಕರಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಇನ್ನು ಹೋರಾಟದಲ್ಲಿ ಪಾಲ್ಗೊಳ್ಳುವಂತೆ ವಿಪಕ್ಷದ ಜನಪ್ರತಿನಿಧಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಸಭಾ ಸದಸ್ಯ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಸೇರಿದಂತೆ ಎಲ್ಲ ಬಿಜೆಪಿ ಮತ್ತು ಜೆಡಿಎಸ್​ ​​ಸಂಸದರು, ಸಚಿವರು, ಶಾಸಕರಿಗೆ ಪತ್ರ ಬರೆದಿದ್ದಾರೆ. ಕನ್ನಡಿಗರ ಹಕ್ಕು, ಸ್ವಾಭಿಮಾನಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ರಾಜ್ಯದ ತೆರಿಗೆಯಲ್ಲಿ ಆಗುತ್ತಿರುವ ವಂಚನೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ ಇದಕ್ಕೆ ಬೆಂಬಲಿಸುವಂತೆ ಕೋರಿದ್ದಾರೆ.

ರಾಜ್ಯಗಳಿಂದ ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ಹಣ ಹೋಗುತ್ತದೆ. ಹಣಕಾಸು ಆಯೋಗ ನಿರ್ಧರಿಸಿದಂತೆ ರಾಜ್ಯಗಳಿಗೆ ಅನುದಾನ ನೀಡಬೇಕು. 14ನೇ ಹಣಕಾಸು ಆಯೋಗದಂತೆ ರಾಜ್ಯಕ್ಕೆ ಶೇ.42ರಷ್ಟು ಹಣ ನೀಡಬೇಕು. 15ನೇ ಹಣಕಾಸು ಆಯೋಗದಂತೆ ರಾಜ್ಯಕ್ಕೆ ಶೇ.41ರಷ್ಟು ಹಣ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:16 pm, Tue, 6 February 24

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್