ಪ್ರತಿಭಟನಾ ನಿರತ ರೈತರಿಗೆ ಟ್ರಾಕ್ಟರ್ ಪರೇಡ್ ನಡೆಸಲು ಪೊಲೀಸರು ಅನುಮತಿ ನೀಡಿದ್ದಾರೆ. ಸಾವಿರಾರು ಟ್ರಾಕ್ಟರ್ಗಳು ದೆಹಲಿ ಪ್ರವೇಶಿಸಲು, ರೈತ ಶಕ್ತಿ ಪ್ರದರ್ಶನ ಮಾಡಲು ಸಜ್ಜಾಗಿ ನಿಂತಿವೆ.
ದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ, ರೈತರು ನಡೆಸಲು ಉದ್ದೇಶಿಸಿರುವ ‘ಕಿಸಾನ್ ಗಣತಂತ್ರ ಪರೇಡ್’ಗೆ ದೆಹಲಿ ಪೊಲೀಸರು ಷರತ್ತುಬದ್ಧ ಅನುಮತಿ ನೀಡಿದ್ದಾರೆ. ಗಣರಾಜ್ಯೋತ್ಸವದ ನಂತರ ಟ್ರ್ಯಾಕ್ಟರ್ ರ್‍ಯಾಲಿ ನಡೆಸಬಹುದು. ಅದಕ್ಕಾಗಿ ನಾಳೆ ದೆಹಲಿಯ ಮೂರು ಸ್ಥಳಗಳಲ್ಲಿ ಬ್ಯಾರಿಕೇಡ್ ತೆರವು ಮಾಡಲಾಗುವುದು ಎಂದು ದೆಹಲಿ ವಿಶೇಷ ಪೊಲೀಸ್ ಆಯುಕ್ತ ದೀಪೇಂದ್ರ ಪಾಠಕ್ ಹೇಳಿಕೆ ನೀಡಿದ್ದಾರೆ.
ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯು ಎರಡು ತಿಂಗಳು ಪೂರೈಸಿದೆ. ಕಳೆದ ಎರಡು ತಿಂಗಳುಗಳಿಂದ ಕೇಂದ್ರ ಮತ್ತು ರೈತ ಮುಖಂಡರ ನಡುವೆ 11 ಸುತ್ತಿನ ಮಾತುಕತೆಗಳಾಗಿದ್ದು, ಯಾವುದೇ ಸಭೆಯು ಫಲಪ್ರದವಾಗಿಲ್ಲ. ಇದೀಗ ರೈತರು, ಜನವರಿ 26, ಗಣರಾಜ್ಯೋತ್ಸವ ದಿನದಂದು ರಾಷ್ಟ್ರ ರಾಜಧಾನಿಯಲ್ಲಿ ಟ್ರಾಕ್ಟರ್ ಪರೇಡ್ ನಡೆಸಲು ಉದ್ದೇಶಿಸಿದ್ದಾರೆ.
ಪ್ರತಿಭಟನಾ ನಿರತ ರೈತರಿಗೆ ಟ್ರಾಕ್ಟರ್ ಪರೇಡ್ ನಡೆಸಲು ಪೊಲೀಸರು ಅನುಮತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ, ಸಾವಿರಾರು ಟ್ರಾಕ್ಟರ್ಗಳು ದೆಹಲಿ ಪ್ರವೇಶಿಸಲು, ರೈತ ಶಕ್ತಿ ಪ್ರದರ್ಶನ ಮಾಡಲು ಸಜ್ಜಾಗಿ ನಿಂತಿವೆ ಎಂದು ರೈತ ಮುಖಂಡ ಅಭಿಮನ್ಯು ಕೊಹಾರ್ ಮಾಹಿತಿ ನೀಡಿದ್ದರು. ಆದರೆ, ಪ್ರತಿಭಟನೆ ಹಾಗೂ ಟ್ರಾಕ್ಟರ್ ಪರೇಡ್ನ ಮಾರ್ಗದ ಬಗ್ಗೆ ಇಂದು ನಿರ್ಣಯ ಕೈಗೊಳ್ಳುತ್ತೇವೆ ಎಂದು ಮೂಲಗಳು ಮಾಹಿತಿ ನೀಡಿದ್ದವು.