AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಜೆಪಿ ಪ್ರತಿಭಟನೆ ವೇಳೆ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್, ಎಕ್ಸ್​ ಖಾತೆಗಳಿಗೆ ದೆಹಲಿ ಪೊಲೀಸರಿಂದ ನೋಟಿಸ್

ದೆಹಲಿಯ ಜಂತರ್​ ಮಂತರ್ ಮತ್ತು ಇತರೆಡೆ ನಡೆದ ಸಿಜೆಪಿ ವಿದ್ಯಾರ್ಥಿ ಪ್ರತಿಭಟನೆ ಹಾಗೂ ಸಂಸದ್ ಚಲೋ ಮೆರವಣಿಗೆಯ ಹಿಂಸಾಚಾರದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಮತ್ತು ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ನಿಂದನೀಯ, ಆಕ್ಷೇಪಾರ್ಹ ಪೋಸ್ಟ್​ಗಳನ್ನು ಹಂಚಿಕೊಂಡಿದ್ದಕ್ಕಾಗಿ ದೆಹಲಿ ಪೊಲೀಸರು ಹಲವು ಸಾಮಾಜಿಕ ಖಾತೆಗಳಿಗೆ ನೋಟಿಸ್ ನೀಡಿದ್ದಾರೆ. ಕೆಲವು ಪ್ರಮುಖ ಸುದ್ದಿ ಪೋರ್ಟಲ್‌ಗಳ ಖಾತೆಗಳು ಹಾಗೂ ನಿಂದನೀಯ ಭಾಷೆ ಬಳಸಿದ ಬಳಕೆದಾರರ ವಿವರಗಳನ್ನು ಒದಗಿಸುವಂತೆ ದೆಹಲಿ ಪೊಲೀಸರು ಸಾಮಾಜಿಕ ಜಾಲತಾಣ 'ಎಕ್ಸ್'ಗೆ ಸೂಚನೆ ನೀಡಿದ್ದಾರೆ.

ಸಿಜೆಪಿ ಪ್ರತಿಭಟನೆ ವೇಳೆ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್, ಎಕ್ಸ್​ ಖಾತೆಗಳಿಗೆ ದೆಹಲಿ ಪೊಲೀಸರಿಂದ ನೋಟಿಸ್
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Jul 29, 2026 | 12:03 PM

Share

ನವದೆಹಲಿ, ಜುಲೈ 29: ದೆಹಲಿಯ ಜಂತರ್​ ಮಂತರ್ ಮತ್ತು ಇತರೆಡೆ ನಡೆದ ಸಿಜೆಪಿ ವಿದ್ಯಾರ್ಥಿ ಪ್ರತಿಭಟನೆ ಹಾಗೂ ಸಂಸದ್ ಚಲೋ ಮೆರವಣಿಗೆಯ ಹಿಂಸಾಚಾರದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಮತ್ತು ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ನಿಂದನೀಯ, ಆಕ್ಷೇಪಾರ್ಹ ಪೋಸ್ಟ್​ಗಳನ್ನು ಹಂಚಿಕೊಂಡಿದ್ದಕ್ಕಾಗಿ ದೆಹಲಿ ಪೊಲೀಸರು ಹಲವು ಸಾಮಾಜಿಕ ಖಾತೆಗಳಿಗೆ ನೋಟಿಸ್ ನೀಡಿದ್ದಾರೆ. ಕೆಲವು ಪ್ರಮುಖ ಸುದ್ದಿ ಪೋರ್ಟಲ್‌ಗಳ ಖಾತೆಗಳು ಹಾಗೂ ನಿಂದನೀಯ ಭಾಷೆ ಬಳಸಿದ ಬಳಕೆದಾರರ ವಿವರಗಳನ್ನು ಒದಗಿಸುವಂತೆ ದೆಹಲಿ ಪೊಲೀಸರು ಸಾಮಾಜಿಕ ಜಾಲತಾಣ ‘ಎಕ್ಸ್’ಗೆ ಸೂಚನೆ ನೀಡಿದ್ದಾರೆ.

ಜುಲೈ 20 ರ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಪ್ರಧಾನಿಯವರ ವಿರುದ್ಧ ಬಳಸಲಾದ ಅಸಭ್ಯ ಕಾಮೆಂಟ್‌ಗಳು, ವೀಡಿಯೊಗಳು ಮತ್ತು ನಿಂದನೀಯ ಪೋಸ್ಟ್‌ಗಳನ್ನು ತಕ್ಷಣವೇ ಡಿಲೀಟ್ ಮಾಡುವಂತೆ ವಿವಿಧ ಸಾಮಾಜಿಕ ಮಾಧ್ಯಮ ಸಂಸ್ಥೆಗಳಿಗೆ ದೆಹಲಿ ಸೈಬರ್ ಕ್ರೈಮ್ ವಿಭಾಗ ನಿರ್ದೇಶನ ನೀಡಿದೆ. ಕಾನೂನು ಉಲ್ಲಂಘನೆ ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರುವಂತಹ ಪೋಸ್ಟ್‌ಗಳನ್ನು ಪತ್ತೆಹಚ್ಚಲು ದೆಹಲಿ ಪೊಲೀಸರ ಸಾಮಾಜಿಕ ಮಾಧ್ಯಮ ಮೇಲ್ವಿಚಾರಣಾ ತಂಡವು ದಿನಪೂರ್ತಿ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳನ್ನು ಸ್ಕ್ಯಾನ್ ಮಾಡುತ್ತಿದೆ.

ಪ್ರತಿಭಟನೆಯ ಹೆಸರಿನಲ್ಲಿ ಸುಳ್ಳು ಸುದ್ದಿ, ವದಂತಿ ಹಾಗೂ ಭಾರಿ ಪ್ರಮಾಣದ ‘ಡೀಪ್‌ಫೇಕ್’ವೀಡಿಯೊಗಳನ್ನು ಹರಿಬಿಡುತ್ತಿದ್ದ, ಪಾಕಿಸ್ತಾನದೊಂದಿಗೆ ಸಂಪರ್ಕ ಹೊಂದಿದೆ ಎನ್ನಲಾದ 400ಕ್ಕೂ ಹೆಚ್ಚು ‘ಎಕ್ಸ್’ ಖಾತೆಗಳನ್ನು ದೆಹಲಿ ಪೊಲೀಸರು ಈಗಾಗಲೇ ಗುರುತಿಸಿದ್ದಾರೆ. ಸಾಮಾಜಿಕ ಮಾಧ್ಯಮ ಮಧ್ಯವರ್ತಿ ನಿಯಮಗಳು ಹಾಗೂ ಬಿಎನ್‌ಎಸ್ ಅಡಿಯಲ್ಲಿ ದೆಹಲಿ ಪೊಲೀಸರ ಸೈಬರ್ ವಿಭಾಗವು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ಸಮಾಜಿಕ ಶಾಂತಿ ಕೆಡಿಸುವ ಹಾಗೂ ಪ್ರಚೋದನಕಾರಿ ಪೋಸ್ಟ್ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಎದುರಾಗಲಿದೆ ಎಂದು ಎಚ್ಚರಿಸಿದೆ.

ಮತ್ತಷ್ಟು ಓದಿ: ಇನ್​​ಸ್ಟಾಗ್ರಾಂನಲ್ಲಿ ಪ್ರಧಾನಿ ಮೋದಿ ಹೊಸ ದಾಖಲೆ, 105 ಮಿಲಿಯನ್‌ ತಲುಪಿದ ಫಾಲೋವರ್ಸ್ ಸಂಖ್ಯೆ

ವಿದ್ಯಾರ್ಥಿ ಪ್ರತಿಭಟನೆಗಳ ಹಿಂದೆ ಕೆಲ ವಿದೇಶಿ ಹಾಗೂ ಸಮಾಜವಿರೋಧಿ ಶಕ್ತಿಗಳು ಸಾಮಾಜಿಕ ಜಾಲತಾಣಗಳನ್ನು ಬಳಸಿ ನಕಲಿ ವೀಡಿಯೊಗಳು ಮತ್ತು ನಿರೂಪಣೆಗಳನ್ನು ಸೃಷ್ಟಿಸಿ ಗಲಭೆ ಎಬ್ಬಿಸಲು ಯತ್ನಿಸುತ್ತಿವೆ ಎಂಬ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಈ ಸೈಬರ್ ತನಿಖೆ ತೀವ್ರಗೊಂಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More