ಮಹಿಳೆಯ ಆಕ್ಷೇಪಾರ್ಹ ಫೋಟೋ ಶೇರ್ ಮಾಡಿದ ಆರೋಪ; ಸಿಜೆಪಿ ನಾಯಕರಿಗೆ ದೆಹಲಿ ಪೊಲೀಸರಿಂದ ನೋಟಿಸ್‌

ದೆಹಲಿ ಹೈಕೋರ್ಟ್ ನೀಡಿದ ನಿರ್ದೇಶನದಂತೆ, ಮಹಿಳೆಗೆ ಸಂಬಂಧಿಸಿದ ಹಳೆಯ ಪ್ರಕರಣವೊಂದಕ್ಕೆ ಕುರಿತಂತೆ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ನಾಯಕರಿಗೆ ದೆಹಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಂತ್ರಸ್ತ ಮಹಿಳೆಯು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್, ಸಿಜೆಪಿ ನಾಯಕರಿಗೆ ನೋಟಿಸ್ ನೀಡುವಂತೆ ಹಾಗೂ ಅವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಪೊಲೀಸರಿಗೆ ಸ್ಪಷ್ಟ ನಿರ್ದೇಶನ ನೀಡಿತ್ತು. ಹೈಕೋರ್ಟ್ ಆದೇಶದ ಬೆನ್ನಲ್ಲೇ ದೆಹಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

ಮಹಿಳೆಯ ಆಕ್ಷೇಪಾರ್ಹ ಫೋಟೋ ಶೇರ್ ಮಾಡಿದ ಆರೋಪ; ಸಿಜೆಪಿ ನಾಯಕರಿಗೆ ದೆಹಲಿ ಪೊಲೀಸರಿಂದ ನೋಟಿಸ್‌
ಸಿಜೆಪಿ ನಾಯಕರು
Image Credit source: PTI

Updated on: Oct 11, 2026 | 8:34 PM

ನವದೆಹಲಿ, ಅಕ್ಟೋಬರ್ 11: ಮಹಿಳೆಯೊಬ್ಬರಿಗೆ ಸಂಬಂಧಿಸಿದ ಹಳೆಯ ಪ್ರಕರಣವೊಂದರಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ನಾಯಕರಿಗೆ ದೆಹಲಿ ಹೈಕೋರ್ಟ್‌ನ ನಿರ್ದೇಶನದಂತೆ ದೆಹಲಿ ಪೊಲೀಸರು ಹೊಸದಾಗಿ ನೋಟಿಸ್ ಜಾರಿ ಮಾಡಿದ್ದಾರೆ. ಮಹಿಳೆಯ ಫೋಟೋಗಳನ್ನು ಮಾರ್ಫ್ ಮಾಡಿ ಆಕ್ಷೇಪಾರ್ಹ ಫೋಟೋಗಳನ್ನಾಗಿ ರೂಪಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿತ್ತು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಈ ಕ್ರಮ ಕೈಗೊಳ್ಳಲಾಗಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಳ್ಳುತ್ತಿರುವ ಮಧ್ಯೆಯೇ ಈ ನೋಟಿಸ್‌ಗಳನ್ನು ಜಾರಿಗೊಳಿಸಲಾಗಿದೆ.

ಸಂತ್ರಸ್ತ ಮಹಿಳೆಯು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್, ಸಿಜೆಪಿ ನಾಯಕರಿಗೆ ನೋಟಿಸ್ ನೀಡಲು ಪೊಲೀಸರಿಗೆ ಸೂಚಿಸಿತ್ತು. ಇದರ ಜತೆಗೆ, ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರದೊಂದಿಗೆ ಮಹಿಳೆಯ ಫೋಟೋವನ್ನು ಎಐ ತಂತ್ರಜ್ಞಾನದ ಮೂಲಕ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾದ ಹಾಗೂ ಸಿಜೆಪಿ ಪ್ರತಿಭಟನೆಯಲ್ಲಿ ಪ್ರದರ್ಶಿಸಲಾದ ಎಲ್ಲಾ ಆಕ್ಷೇಪಾರ್ಹ ವಿಷಯಗಳನ್ನು ತಕ್ಷಣವೇ ತೆರವುಗೊಳಿಸುವಂತೆ ‘ಮೆಟಾ’ ಸಂಸ್ಥೆಗೆ (ಫೇಸ್‌ಬುಕ್, ಇನ್‌ಸ್ಟಾಗ್ರಾಮ್) ಹೈಕೋರ್ಟ್ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.

ಇದನ್ನೂ ಓದಿ: ಅಪಹರಣ, ಮೊಬೈಲ್ ಜಪ್ತಿ, ವಕೀಲರಿಗೂ ನೋ ಎಂಟ್ರಿ: ಪೊಲೀಸರ ವಿರುದ್ಧ ಸೌರವ್ ದಾಸ್ ಗಂಭೀರ ಆರೋಪ, ಧರಣಿ ಮುಂದುವರೆಸುವುದಾಗಿ ಸಿಜೆಪಿ ಪಟ್ಟು

ಮಹಿಳೆಯ ಅರ್ಜಿಯಲ್ಲಿ ಸಿಜೆಪಿ ಕಾರ್ಯಕರ್ತರಾದ ಸೌರವ್ ದಾಸ್, ಅಭಿಜಿತ್ ದಿಪ್ಕೆ, ಅಶುತೋಷ್ ರಂಕಾ ಮತ್ತು ರತ್ನಾ ಸಿಂಗ್ ಅವರನ್ನು ಪ್ರತಿವಾದಿಗಳನ್ನಾಗಿ ಹೆಸರಿಸಲಾಗಿದೆ. ಈ ಕುರಿತು ದೆಹಲಿಯ ಸೈಬರ್ ಪೊಲೀಸ್ ಠಾಣೆಯಲ್ಲಿ ಮಾಹಿತಿ ತಂತ್ರಜ್ಞಾನ (IT) ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಈಗಾಗಲೇ ಎಫ್‌ಐಆರ್ ದಾಖಲಾಗಿದೆ.

ಇನ್ನೊಂದೆಡೆ, ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ಕರೆ ನೀಡಿದ್ದ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಜಂತರ್ ಮಂತರ್‌ನತ್ತ ಮೆರವಣಿಗೆ ಹೊರಟ 100ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
Loading...
Unable to load recommendations.
Follow Us