ದೇಶಕ್ಕೆ ಮುಜುಗರ ಉಂಟುಮಾಡುವ ಟ್ರ್ಯಾಕ್ಟರ್ ಮೆರವಣಿಗೆಗೆ ಅವಕಾಶ ನೀಡಬೇಡಿ: ಸುಪ್ರೀಂಗೆ ದೆಹಲಿ ಪೊಲೀಸರ ಮನವಿ

| Updated By: ರಶ್ಮಿ ಕಲ್ಲಕಟ್ಟ

Updated on: Jan 12, 2021 | 1:22 PM

ಜಾಗತಿಕ ಮಟ್ಟದಲ್ಲಿ ನಮ್ಮ ರಾಷ್ಟ್ರವನ್ನು ಅಪಮಾನಿಸುವಂತಹ ಪ್ರತಿಭಟನೆಗಳು ಪ್ರತಿಭಟಿಸುವ ಹಕ್ಕಿನಡಿಯಲ್ಲಿ ಬರುವುದಿಲ್ಲ. ಇಡೀ ದೇಶಕ್ಕೇ ಮುಜುಗರ ತರುವ ಟ್ರ್ಯಾಕ್ಟರ್ ಚಳವಳಿಯನ್ನು ನಡೆಸದಂತೆ ನ್ಯಾಯಾಲಯ ಆದೇಶ ಹೊರಡಿಸಬೇಕು ಎಂದು ಪೊಲೀಸರು ತಮ್ಮ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ದೇಶಕ್ಕೆ ಮುಜುಗರ ಉಂಟುಮಾಡುವ ಟ್ರ್ಯಾಕ್ಟರ್ ಮೆರವಣಿಗೆಗೆ ಅವಕಾಶ ನೀಡಬೇಡಿ: ಸುಪ್ರೀಂಗೆ ದೆಹಲಿ ಪೊಲೀಸರ ಮನವಿ
ಸುಪ್ರೀಂ ಕೋರ್ಟ್​
Follow us on

ದೆಹಲಿ: ಗಣರಾಜ್ಯೋತ್ಸವ ದಿನದಂದು ರೈತರು ನಡೆಸಲುದ್ದೇಶಿಸಿರುವ ಟ್ರ್ಯಾಕ್ಟರ್​  ಮೆರವಣಿಗೆಗೆ ತಡೆಯಾಜ್ಞೆ ಹೊರಡಿಸಲು ಕೋರಿ ದೆಹಲಿ ಪೊಲೀಸರು ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದಾರೆ. ಗಣರಾಜ್ಯೋತ್ಸವ ದಿನಾಚರಣೆಗೆ ಅಡ್ಡಿ ಉಂಟು ಮಾಡುವ ಈ ಪ್ರತಿಭಟನೆಗೆ ಅವಕಾಶ ನೀಡಬಾರದು ಎಂದು ಪೊಲೀಸರು ಮನವಿ ಮಾಡಿದ್ದಾರೆ.

ರೈತರ ಒಂದು ಗುಂಪು ಜನವರಿ 26ರಂದು ಟ್ರ್ಯಾಕ್ಟರ್ ಮೆರವಣಿಗೆ ನಡೆಸಲಿದೆ ಎನ್ನುವ ವಿಚಾರ ನಮ್ಮ ಭದ್ರತಾ ಸಿಬ್ಬಂದಿ ಗಮನಕ್ಕೆ ಬಂದಿದೆ. ಗಣರಾಜ್ಯೋತ್ಸವದ ಪಥಸಂಚಲನಕ್ಕೆ ತಡೆಯೊಡ್ಡಿ ಕಾನೂನು ಸುವ್ಯವಸ್ಥೆಗೆ ಭಂಗ ಉಂಟುಮಾಡುವ ಉದ್ದೇಶ ಹೊಂದಿರುವ ಮತ್ತು ಇಡೀ ದೇಶಕ್ಕೇ ಮುಜುಗರ ತರುವ ಈ ಮೆರವಣಿಗೆ ನಡೆಸದಂತೆ ನ್ಯಾಯಾಲಯ ಆದೇಶ ಹೊರಡಿಸಬೇಕು ಎಂದು ಪೊಲೀಸರು ತಮ್ಮ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಪ್ರತಿಭಟಿಸುವ ಹಕ್ಕಿನ ಕುರಿತಾಗಿಯೂ ಅರ್ಜಿಯಲ್ಲಿ ಉಲ್ಲೇಖಿಸಿರುವ ಪೊಲೀಸರು, ಜಾಗತಿಕ ಮಟ್ಟದಲ್ಲಿ ನಮ್ಮ ರಾಷ್ಟ್ರವನ್ನು ಅಪಮಾನಿಸುವಂತಹ ಪ್ರತಿಭಟನೆಗಳು ಹಕ್ಕಿನಡಿಯಲ್ಲಿ ಬರುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದಕ್ಕೂ ಮುನ್ನ ಕೇಂದ್ರ ಸರ್ಕಾರವೂ ರೈತರ ಟ್ರ್ಯಾಕ್ಟರ್ ಮೆರವಣಿಗೆಗೆ ಅವಕಾಶ ನೀಡಬಾರದೆಂದು ಕೋರಿ ಸರ್ವೋಚ್ಛ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿರುವುದು ಗಮನಾರ್ಹ.

ಜನವರಿ 26 ರ ಟ್ರಾಕ್ಟರ್ ಮೆರವಣಿಗೆಯನ್ನು ತಡೆಯಲು ಸುಪ್ರೀಂ ಕೋರ್ಟ್​ಗೆ ಕೇಂದ್ರ ಮನವಿ